Connect with us

ರಾಜ್ಯ

HSRP-HSRP ನಂಬ‌ರ್ ಪ್ಲೇಟ್ ಅಳವಡಿಕೆಗೆ ಮಾ.31ರವರೆಗೆ ಗಡುವು ವಿಸ್ತರಣೆ

Published

on



Ad Widget

Ad Widget

Ad Widget

Ad Widget

ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗಿದ್ದು ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget

Ad Widget

ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗಿದ್ದು ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆಗೆ ಸರ್ಕಾರವು ಆಗಸ್ಟ್ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಕಾಲಮಿತಿಯನ್ನು ಕೂಡ ನಿಗದಿ ಪಡಿಸಿತ್ತು.

Ad Widget

Ad Widget <> Ad Widget

ಹಲವಾರು ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಇನ್ನು ಕೂಡಾ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.



Ad Widget

ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51ರನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. ಕರ್ನಾಟಕದ ವಾಹಗಳಿಗೆ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ.

Ad Widget

Ad Widget

ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

HSRP ನಂಬರ್ ಪ್ಲೇಟ್ ಪಡೆಯವ ವಿಧಾನ:

  • *https://transport.karnataka.gov.in http://www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
  • *ನಂತರ Book HSRP ಕ್ಲಿಕ್ ಮಾಡಿ.
  • *ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
  • *ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
  • *ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ,
  • *ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
  • *ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
  • *ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
  • *HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.
Ad Widget

ರಾಜಕೀಯ

Sudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್

Published

on



Ad Widget

Ad Widget

Ad Widget

Ad Widget

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.

Ad Widget

Ad Widget <> Ad Widget

ಇತರ ನೇಮಕಾತಿಗಳ ವಿವರ ಹೀಗಿದೆ:
ಒಡಿಶಾ: ಬ್ರಜ್ ಮೋಹನ್ ರಾಮ್
ಉತ್ತರಾಖಂಡ: ಧಲ್ ಸಿಂಗ್ ಬಿಸೇನ್
ಸಿಕ್ಕಿಂ: ದುಷ್ಯಂತ್ ಗೌತಮ್



Ad Widget

ಈ ನೇಮಕಾತಿಗಳೊಂದಿಗೆ ಆರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆಗಳಾಗಿವೆ.

Continue Reading

ರಾಜ್ಯ

Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್‌ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ

Published

on



Ad Widget

Ad Widget

Ad Widget

Ad Widget

ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಚಿಕ್ಕಬಳ್ಳಾಪುರ: ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

Ad Widget

Ad Widget <> Ad Widget

ಭಾರತೀಯ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಕ್ಷೇತ್ರದ ಪ್ರಮುಖ ತಜ್ಞ ಡಾ. ಸುಧೀರ್ ಶ್ರೀವಾಸ್ತವ ಅವರು ಬಾರ್ಸಿಲೋನಾದಲ್ಲಿ ನಡೆದ ಯುರೋಪಿಯನ್ ಅಸೋಸಿಯೇಷನ್ ಫಾರ್ ಕಾರ್ಡಿಯೋ-ಥೊರಾಸಿಕ್ ಸರ್ಜರಿ (EACTS) ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾಗಲೇ ದೂರದಿಂದ ರೋಬೋಟ್ ನಿಯಂತ್ರಿಸಿ ಶಸ್ತ್ರಚಿಕಿತ್ಸೆ ನಡೆಸಿದರು.



Ad Widget

ಜನ್ಮಜಾತ ಹೃದಯ ಸಮಸ್ಯೆಗೆ ಚಿಕಿತ್ಸೆ
ಕೋಲಾರ ಜಿಲ್ಲೆಯ 26 ವರ್ಷದ ಮಹಿಳೆಯೊಬ್ಬರು ಹೃದಯದ ಮೇಲಿನ ಎರಡು ಕೋಣೆಗಳ ನಡುವಿನ ಗೋಡೆಯಲ್ಲಿ ಜನ್ಮಜಾತ ರಂಧ್ರವಿರುವ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಇದನ್ನು ಆಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ASD) ಎಂದು ಕರೆಯಲಾಗುತ್ತದೆ.

Ad Widget

Ad Widget

ಬಾರ್ಸಿಲೋನಾದಲ್ಲಿ ಅಳವಡಿಸಲಾಗಿದ್ದ ರೋಬೋಟಿಕ್ ಶಸ್ತ್ರಚಿಕಿತ್ಸಾ ಕನ್ಸೋಲ್ ಮೂಲಕ ಡಾ. ಸುಧೀರ್ ಶ್ರೀವಾಸ್ತವ ಅವರು ಮುದ್ದೇನಹಳ್ಳಿಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ‘ಎಸ್‌ಎಸ್‌ಐ ಮಂತ್ರ’ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.

ಮಣಿಪಾಲ್ ಆಸ್ಪತ್ರೆಯ ಜೈಪುರ ಘಟಕದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಲಲಿತ್ ಮಲಿಕ್ ಮತ್ತು ಮುದ್ದೇನಹಳ್ಳಿಯ ಸಂಸ್ಥೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ಹಿರೇಮಠ ಅವರು ಸ್ಥಳದಲ್ಲಿದ್ದು, ಶಸ್ತ್ರಚಿಕಿತ್ಸೆಗೆ ಅಗತ್ಯವಾದ ನೆರವು ನೀಡಿದರು. ರೋಗಿಯ ಆರೋಗ್ಯದ ಮೇಲೂ ನಿರಂತರ ನಿಗಾ ವಹಿಸಿದರು.

ಆರು ಗಂಟೆಗಳಲ್ಲಿ ಉಸಿರಾಟದ ಟ್ಯೂಬ್ ತೆರವು
ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸುಮಾರು ಆರು ಗಂಟೆಗಳ ನಂತರ ಉಸಿರಾಟಕ್ಕೆ ಅಳವಡಿಸಿದ್ದ ಟ್ಯೂಬ್ ಅನ್ನು ತೆಗೆದುಹಾಕಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.

ಶಸ್ತ್ರಚಿಕಿತ್ಸೆ ವೇಳೆ ಮೂರು ಸಣ್ಣ ಛೇದನಗಳನ್ನು ಮಾಡಲಾಗಿದ್ದು, ಪ್ರತಿಯೊಂದೂ ಐದು ಮಿಲಿಮೀಟರ್‌ಗಿಂತ ಕಡಿಮೆ ಗಾತ್ರದ್ದಾಗಿತ್ತು. ಇದರಿಂದ ರಕ್ತಸ್ರಾವ ಮತ್ತು ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.

ದೂರದ ಅಂತರವನ್ನೂ ಮೀರಿದ ವೈದ್ಯಕೀಯ ತಂತ್ರಜ್ಞಾನ
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಗುರುಗ್ರಾಮ್‌ನಿಂದ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸ್ಪೇನ್‌ನ ಬಾರ್ಸಿಲೋನಾದಿಂದಲೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೂರಸ್ಥ ರೋಬೋಟಿಕ್ ವೈದ್ಯಕೀಯ ತಂತ್ರಜ್ಞಾನದ ಅಂತರರಾಷ್ಟ್ರೀಯ ಬಳಕೆಯ ಸಾಧ್ಯತೆಗಳನ್ನು ಪ್ರದರ್ಶಿಸಲಾಗಿದೆ.

ಇಂತಹ ತಂತ್ರಜ್ಞಾನವು ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಪರಿಣತ ವೈದ್ಯರ ಕೊರತೆಯಿರುವ ಸ್ಥಳಗಳಿಗೂ ಉನ್ನತ ಮಟ್ಟದ ವೈದ್ಯಕೀಯ ಸೇವೆ ತಲುಪಿಸಲು ನೆರವಾಗಬಹುದು. ವೈದ್ಯಕೀಯ ಶಿಕ್ಷಣ, ಶಸ್ತ್ರಚಿಕಿತ್ಸಾ ತರಬೇತಿ ಮತ್ತು ವಿವಿಧ ದೇಶಗಳ ತಜ್ಞ ವೈದ್ಯರ ಸಹಯೋಗಕ್ಕೂ ಇದು ಹೊಸ ಅವಕಾಶಗಳನ್ನು ಕಲ್ಪಿಸಬಹುದು.

ಆದರೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ ನಡೆಸಲು ವಿಶ್ವಾಸಾರ್ಹ ಸಂವಹನ ವ್ಯವಸ್ಥೆ, ಸ್ಥಳೀಯ ವೈದ್ಯಕೀಯ ತಂಡದ ಸಮನ್ವಯ ಮತ್ತು ಸೂಕ್ತ ಸುರಕ್ಷತಾ ಕ್ರಮಗಳು ಅತ್ಯಗತ್ಯ.

ಬಡ ಕುಟುಂಬದ ಮಹಿಳೆಗೆ ಸಂಪೂರ್ಣ ಉಚಿತ ಚಿಕಿತ್ಸೆ
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಅವರ ಪತಿ ಆಟೋರಿಕ್ಷಾ ಚಾಲಕರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬಕ್ಕೆ ದುಬಾರಿ ಹೃದಯ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವುದು ಕಷ್ಟವಾಗಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಶಸ್ತ್ರಚಿಕಿತ್ಸೆ ಸೇರಿದಂತೆ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಿದೆ.

ಆಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ, ದೂರದ ಅಂತರವನ್ನು ಮೀರಿಯೂ ಪರಿಣತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ತಲುಪಿಸಬಹುದೆಂಬುದಕ್ಕೆ ಮಹತ್ವದ ಉದಾಹರಣೆಯಾಗಿದೆ.

Ad Widget
Continue Reading

ರಾಜ್ಯ

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.



Ad Widget

ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

Ad Widget

Ad Widget

ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading