ಅಪರಾಧ
Puttur-ಎದೆನೋವಿಗೆ ಔಷಧಿ ಬೇಕೆಂದು ಕೇಳುತ್ತಾ ಮೆಡಿಕಲ್ ಶಾಪ್ ಒಳಗೆ ಹೋಗಿ ಮಾಲಕಿಯ ಕರಿಮಣಿಸರ ಎಗರಿಸಿದ ಪುತ್ತೂರಿನ ಇಬ್ಬರ ಬಂಧನ – ಒಬ್ಬನ ಮೇಲಿದೆ ಅತ್ಯಾಚಾರ ಪ್ರಕರಣ
ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೀರ್ಚಾಲು ಎಂಬಲ್ಲಿ ಆಯುರ್ವೇದ ಅಂಗಡಿಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಮೂರೂವರೆ ಪವನು ತೂಕದ ಕರಿಮಣಿ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಿವಾಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಪುತ್ತೂರು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೀರ್ಚಾಲು ಎಂಬಲ್ಲಿ ಆಯುರ್ವೇದ ಅಂಗಡಿಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಮೂರೂವರೆ ಪವನು ತೂಕದ ಕರಿಮಣಿ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಿವಾಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಕುಂಜೂರು ಪಂಜದ ಗೋಳಿಕಟ್ಟೆ ನಿವಾಸಿ ಸಂಶುದ್ದೀನ್ ಆಸ್ಕರ್ ಅಲಿ(28ವ) ಮತ್ತು ಬನ್ನೂರು ನಿವಾಸಿ ನೌಷಾದ್ ಬಿ.ಎ(37ವ,)ಬಂಧಿತ ಆರೋಪಿಗಳು. ಇವರಿಬ್ಬರನ್ನು ಫೆ.20ರಂದು ಬೆಂಗಳೂರಿನಿಂದ ಬಂಧಿಸಿರುವುದಾಗಿ ಬದಿಯಡ್ಕ ಪೊಲೀಸರು ಮಾಹಿತಿ ನೀಡಿದ್ದಾರೆ.
ಜ.11ರಂದು ಸಂಜೆ ನೀರ್ಚಾಲು ಮೇಲಿನ ಪೇಟೆಯ ಜೇನುಮೂಲೆ ದಿ.ಡಾ. ಶಂಕರನಾರಾಯಣ ಭಟ್ಟರ ಪತ್ನಿ ಸರೋಜಿನಿ ಎಸ್.ಎನ್. ಅವರ ಮಾಲಕತ್ವದಲ್ಲಿರುವ ರಾಘವೇಂದ್ರ ಆಯುರ್ವೇದ ಮೆಡಿಕಲ್‌ನಲ್ಲಿ ಕಳವು ನಡೆದಿತ್ತು.
ಬೈಕ್‌ನಲ್ಲಿ ಬಂದ ಯುವಕರಿಬ್ಬರಲ್ಲಿ ಒಬ್ಬ ಎದೆನೋವಿಗೆ ಔಷಧಿ ಬೇಕೆಂದು ಕೇಳುತ್ತಾ ಮೆಡಿಕಲ್ ಶಾಪ್ ಒಳಗೆ ಹೋಗಿ ಮಾಲಕಿ ಸರೋಜಿನಿ ಅವರ ಕತ್ತಿನಲ್ಲಿದ್ದ ಮೂರೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಎಗರಿಸಿದ್ದ, ಈತನಿಗಾಗಿ ಇನ್ನೊಬ್ಬ ಬೈಕನಲ್ಲೇ ಇದ್ದು ಕಾಯುತ್ತಿದ್ದ. ಬಳಿಕ ಇಬ್ಬರೂ ಬೈಕನ್ನೇರಿ ಪರಾರಿಯಾಗಿದ್ದರು. ಘಟನೆ ಬಗ್ಗೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳವುಗೈದ ಆಭರಣವನ್ನು ಮಂಗಳೂರಿನ ಚಿನ್ನದಂಗಡಿಯೊಂದರಲ್ಲಿ ಬಂಧಿತ ಆರೋಪಿಗಳು ಮಾರಾಟ ಮಾಡಿದ್ದರು. ಪೊಲೀಸರು ಅಲ್ಲಿಂದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುನಿಲ್ ಕುಮಾರ್ ಅವರ ಆದೇಶದಂತೆ ಬದಿಯಡ್ಕ ಸಿ.ಐ.ಸುಬೀರ್, ಎಸ್.ಐ.ನಿಖಿಲ್, ಸಿಬ್ಬಂದಿಗಳಾದ ಮುಹಮ್ಮದ್, ಪ್ರಸಾದ್, ಶ್ರೀನೇಶ್ ಮೊದಲಾದವರು ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ತಮಿಳುನಾಡಿನಿಂದ ಬೈಕ್ ಕಳ್ಳತನ
ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಬೈಕ್ ತಮಿಳುನಾಡಿನಿಂದ ಕಳ್ಳತನ ಮಾಡಲಾಗಿದ್ದು, ಕೆಲದಿನಗಳ ಹಿಂದೆ ಬೈಕನ್ನು ತಮಿಳುನಾಡು ಮೂಲದ ವ್ಯಕ್ತಿಯೋರ್ವರು ಒ.ಎಲ್.ಎಕ್ಸ್‌ನಲ್ಲಿ ಮಾರಾಟಕ್ಕಾಗಿ ಹಾಕಿದ್ದರು.
ನಕಲಿ ಐಡಿ ಬಳಸಿದ್ದ ಆರೋಪಿಗಳು ಒ.ಎಲ್.ಎಕ್ಸ್.ನಲ್ಲಿ ವಾಹನ ಮಾಲಕನ ಮಾಹಿತಿ ಪಡೆದು ತಮಿಳುನಾಡಿಗೆ ತೆರಳಿದ್ದರು. ಅಲ್ಲಿ ವಾಹನವನ್ನು ನೋಡಿ ವ್ಯವಹಾರ ಕುದುರಿಸಿ, ಟೆಸ್ಟ್ ಡ್ರೈವ್ ಮಾಡಿ ನೋಡುವುದಾಗಿ ಹೇಳಿ ಬೈಕ್‌ನ್ನು ಪಡೆದು ಅಲ್ಲಿಂದ ಎಸ್ಕೇಪ್ ಆಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದಾರೆ.
ಬದಿಯಡ್ಕಕ್ಕೆ ಆಗಮಿಸಿದ ತಮಿಳುನಾಡು ಪೊಲೀಸರು
ಟೆಸ್ಟ್ ಡ್ರೈವ್‌ಗೆಂದು ತೆಗೆದುಕೊಂಡ ಬೈಕ್‌ನ್ನು ಮರಳಿ ನೀಡದೆ ಕಳ್ಳತನ ಮಾಡಿರುವ ಬಗ್ಗೆ ಬೈಕ್ ಮಾಲಕ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತಮಿಳುನಾಡು ಪೊಲೀಸರು ಬೈಕ್ ಜಾಡು ಹಿಡಿದು ಇದೀಗ ಬದಿಯಡ್ಕ ತಲುಪಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಆರೋಪಿ ಸಂಶುದ್ದೀನ್ ವಿರುದ್ಧ ಪುತ್ತೂರು ಠಾಣೆಯಲ್ಲಿ ಅತ್ಯಾಚಾರ ಪ್ರಕರಣ: ಆರೋಪಿ ಸಂಶುದ್ದೀನ್ ಆಸ್ಕರ್ ಅಲಿ ವಿರುದ್ಧ 2023ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಹಾಸನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರನ್ನು ಸಾಲ್ಮರ ಗುಂಪಕಲ್ಲು ಬಳಿ ಅತ್ಯಾಚಾರ ಮಾಡಿದ್ದ ಪ್ರಕರಣದ ಓರ್ವ ಆರೋಪಿಯಾಗಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
-
ಉದ್ಯೋಗ20 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ24 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















