ರಾಜಕೀಯ
Manjalpadpu-40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಜಲ್ಪಡ್ಪು ಪೆರಿಯತ್ತೋಡಿ ಆಶ್ರಯ ಕಾಲನಿ ರಸ್ತೆ ವಿವಾದ ಸುಖಾಂತ್ಯ; ರಸ್ತೆ ಮಾಡುವ ಜಾಗ ಖಾಸಗಿಯವರದ್ದಾದಲ್ಲಿ ಸರಕಾರದಿಂದ ಸೂಕ್ತ ಪರಿಹಾರ ಕೊಡಿಸುವೆ: ಶಾಸಕ ಅಶೋಕ್ ರೈ
ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೆ ವಿವಾದದಲ್ಲಿದ್ದ ಮಂಜಲ್ಪಡ್ಪು ತೋಟಗಾರಿಕಾ ಇಲಾಖಾ ಬಳಿಯಿಂದ ಪೆರಿಯತ್ತೋಡಿ ಆಶ್ರಯ ಕಾಲನಿಗೆ ತೆರಳುವ ಸಂಪರ್ಕ ರಸ್ತೆಯ ವಿವಾದ ಪರಿಹಾರವಾಗಿದ್ದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.
ಪುತ್ತೂರು: ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೆ ವಿವಾದದಲ್ಲಿದ್ದ ಮಂಜಲ್ಪಡ್ಪು ತೋಟಗಾರಿಕಾ ಇಲಾಖಾ ಬಳಿಯಿಂದ ಪೆರಿಯತ್ತೋಡಿ ಆಶ್ರಯ ಕಾಲನಿಗೆ ತೆರಳುವ ಸಂಪರ್ಕ ರಸ್ತೆಯ ವಿವಾದ ಪರಿಹಾರವಾಗಿದ್ದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.
ಪೆರಿಯತ್ತೋಡಿ ಆಶ್ರಯ ಕಾಲನಿ ಸಂಪರ್ಕ ರಸ್ತೆ ಕಾಂಕ್ರಿಟೀಕರಣವಾಗಿರಲಿಲ್ಲ. ಈ ಭಾಗದ ಜನರು ಸುಮಾರು 40 ವರ್ಷಗಳಿಂದ ಸರಿಯಾದ ರಸ್ತೆ ಇಲ್ಲದೆ ವ್ಯಥೆ ಪಡುವಂತಾಗಿದ್ದು ಎರಡು ತಿಂಗಳ ಹಿಂದೆ ಕಾಲನಿಗೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ಅವರು ಈ ಭಗದ ರಸ್ತೆಯನ್ನು ಕಾಂಕ್ರೀಟ್ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಾಸಕರು ಇಲ್ಲಿನ ರಸ್ತೆ ಅಭಿವೃದ್ದಿಗೆ 36.5 ಲಕ್ಷ ಅನುದಾನವನ್ನು ನೀಡಿದ್ದು ಅದರ ಗುದ್ದಲಿಪೂಜೆ ಶುಕ್ರವಾರ ಸಂಜೆ ನೆರವೇರಿಸಲಾಗಿದೆ.
ವಿವಾದ ಏನು?
ಈ ರಸ್ತೆ ಹಾದು ಹೋಗುವಾಗ ಮಧ್ಯದಲ್ಲಿ ಖಾಸಗಿ ವ್ಯಕ್ತಿಯೋರ್ವರ ಜಾಗದ ಬದಿಯಲ್ಲಿ ತೆರಳಬೇಕಾಗಿದ್ದು, ಖಾಸಗಿ ವ್ಯಕ್ತಿಯೋರ್ವರು ಇದು ತನ್ನ ವರ್ಗ ಜಾಗವಾಗಿದ್ದು ಇಲ್ಲಿಂದ ರಸ್ತೆ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕಾರಣಕ್ಕೆ ಕಳೆದ 40 ವರ್ಷಗಳಿಂದ ಇದು ವಿವಾದವಾಗಿಯೇ ಉಳಿದಿತ್ತು. ಈ ಭಾಗದಲ್ಲಿ ಸುಮಾರು 200 ಕುಟುಂಬಗಳು ವಾಸವಾಗಿದ್ದು ಸರಿಯಾದ ರಸ್ತೆ ಸಂಪರ್ಕ ಇರಲಿಲ್ಲ. ತೋಟಗಾರಿಕಾ ಇಲಾಖಾ ಕಚೇರಿಯಿಂದ ಸ್ವಲ್ಪ ಮುಂದಕ್ಕೆ ಮಾತ್ರ ಕಾಂಕ್ರೀಟ್ ಮಾಡಲಾಗಿತ್ತು. 40 ವರ್ಷಗಳಿಂದ ಈ ಭಾಗದ ಜನರು ಸರಿಯದ ರಸ್ತೆಯಿಲ್ಲದೆ ತೊಂದರೆಗೀಡಾಗಿದ್ದು ಶಾಸಕರಾದ ಅಶೋಕ್ ರೈ ಗಮನಕ್ಕೆ ತಂದಿದ್ದರು.
ಸರ್ವೆ ಮಾಡಿ ಸೂಕ್ತ ಕ್ರಮ
ಇಲ್ಲಿನ ವಿವಾದಿತ ಜಾಗವನ್ನು ಸರ್ವೆ ಮಾಡಿ ಅದು ಖಾಸಗಿ ಒಡೆತನದ ಜಾಗವೋ ಅಥವಾ ಸರಕಾರಿ ಜಾಗವೋ ಎಂಬುದನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಶಾಸಕರು ಸರ್ವೆ ಇಲಾಖೆಗೆ ಮತ್ತು ನಗರಸಭೆ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ. ಶಾಸಕರ ಸೂಚನೆಯಂತೆ ವಿವಾದಿತ ಜಾಗವನ್ನು ಸರ್ವೆ ನಡೆಸಲಾಗುತ್ತದೆ.
ಜಾಗ ಕಳೆದುಕೊಂಡರೆ ಸೂಕ್ತ ಪರಿಹಾರ
ಇದೇ ಸಂದರ್ಭದಲ್ಲಿ ರಸ್ತೆ ವೀಕ್ಷಣೆ ಮಾಡಿದ ಶಾಸಕರು ಈಗ ಇರುವ ರಸ್ತೆಯನ್ನು ಅಗಲೀಕರಣ ಮಾಡಿ ಅದಕ್ಕೆ ಸೂಕ್ತ ಚರಂಡಿ ವ್ಯವಸ್ಥೆಯನ್ನು ಮಾಡಲಾಗುವುದು. ರಸ್ತೆ ಮತ್ತು ಚರಂಡಿ ನಿರ್ಮಾಣದ ವೇಳೆ ಖಾಸಗಿ ಜಮೀನು ಬಳಕೆಯಾದರೆ ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು. ಸರಕಾರಿ ಭೂಮಿಯಾದಲ್ಲಿ ಪರಿಹಾರ ನೀಡಲು ಸಾಧ್ಯವಿಲ್ಲ. ಸರ್ವೆ ಮಾಹಿತಿ ಆಧಾರದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಕಡಬ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಭಿಲಾಷ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಪುತ್ತೂರು ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಬೂತ್ ಅಧ್ಯಕ್ಷರಾದ ನವಾಝ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಲೋಕೇಶ್ ಪಡ್ಡಾಯೂರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಝೀರ್ ಮಠ, ನಗರಸಭಾ ಸದಸ್ಯರಾದ ದಿನೇಶ್ ಶೇವಿರೆ, ಕಾಂಗ್ರೆಸ್ ಮುಖಂಡರಾದ ವಿಕ್ಟರ್ ಪಾಯಸ್, ಅಶೋಕ್ಗ ಪಾಯಸ್, ಶರೂಣ್ ಸಿಕ್ವೆರಾ, ಪ್ರಶಾಂತ್ ಮುರ, ಜಾನಕಿ ಮುರ, ಕೃಷ್ಣಪ್ಪ ಕಲವಿದ, ಅಜಿತ್ಕುಮಾರ್ ಜೈನ್, ಪ್ರತೀಕ ಮೊದಲಾದವರು ಉಪಸ್ಥಿತರಿದ್ದರು.
ಪೆರಿಯತ್ತೋಡಿ ಆಶ್ರಯ ಕಾಲನಿಯ ಸುಮಾರು 200 ಕುಟುಂಬಗಳು ರಸ್ತೆಯಿಲ್ಲದೆ ಕಳೇದ 40 ವರ್ಷಗಳಿಂದ ತೊಂದರೆಗೀಡಾಗಿದ್ದಾರೆ. ರಸ್ತೆ ಪ್ರಮುಖ ಮೂಲಭೂತ ಸೌಕರ್ಯಗಳಲ್ಲಿ ಸೇರಿದ್ದಾಗಿದೆ. ಖಾಸಗಿ ವ್ಯಕ್ತಿಯೋರ್ವರ ಜಾಗದ ಬದಿ ರಸ್ತೆ ಹಾದು ಹೋಗುತ್ತಿರುವ ಕಾರಣ ಇಲ್ಲಿ ವಿವಾದ ಉಂಟಾಗಿದೆ. ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗಿದೆ. ರಸ್ತೆ ಹಾದು ಹೋಗುವ ಜಾಗವನ್ನು ಸರ್ವೆ ಮಾಡಲು ಇಲಾಖೆಗೆ ಸೂಚನೆಯನ್ನು ನೀಡಿದ್ದೇನೆ. ಖಾಸಗಿ ಜಾಗವಾದಲ್ಲಿ ಸೂಕ್ತ ಪರಿಹಾರವನ್ನು ನೀಡಲಾಗುತ್ತದೆ. ರಸ್ತೆ ಅಭಿವೃದ್ದಿ ಕೆಲಸ ನಿರಾತಂಕವಾಗಿ ನಡೆದೇ ನಡೆಯುತ್ತದೆ. ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತದೆ. – ಅಶೋಕ್ ರೈ ಶಾಸಕರು, ಪುತ್ತೂರು
ಹಲವು ವರ್ಷಗಳ ಬೇಡಿಕೆ ಈಬಾರಿ ಈಡೇರಿದೆ: ಮಹಮ್ಮದಾಲಿ
ಪೆರಿಯತ್ತೋಡಿ ಆಶ್ರಯ ಕಾಲನಿ ನಿವಾಸಿಗಳ ಸಮಸ್ಯೆಯನ್ನು ಇದುವರೆಗೂ ಯಾರೂ ಆಲಿಸಿಲ್ಲ, ಅಲ್ಲಿ ನೂರಾರು ಮನೆಗಳಿವೆ ಎಂದು ಗೊತ್ತಿದ್ದರೂ ಸಣ್ಣ ಪುಟ್ಟ ವಿಚಾರಗಳಿಗಾಗಿ ರಸ್ತೆ ಅಭಿವೃದ್ದಿ ಕಾರ್ಯವನ್ನು ಮಾಡಿಲ್ಲ. ಶಾಸಕರು ಇಲ್ಲಿಗೆ 36.5 ಲಕ್ಷ ಅನುದಾನವನ್ನು ಇಟ್ಟಿದ್ದಾರೆ. ವಿವಾದವನ್ನು ಇತ್ಯರ್ಥಪಡಿಸಿ ರಸ್ತೆ ಅಭಿವೃದ್ದಿಗೆ ಚಾಲನೆಯನ್ನು ನೀಡಿದ್ದಾರೆ. ಇಷ್ಟು ವರ್ಷದಲ್ಲಿ ಆಗದ ಕೆಲಸವನ್ನು ಶಾಸಕರು ಮಾಡಿದ್ದಾರೆ. ಜನ ಈ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ ಎಂಬ ಪೂರ್ಣ ನಂಬಿಕೆ ಇದೆ.- ಎಚ್ ಮಹಮ್ಮದಾಲಿ, ನಗರ ಕಾಂಗ್ರೆಸ್ ಅಧ್ಯಕ್ಷರು, ಪುತ್ತೂರು
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಸ್ಥಳೀಯ7 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್7 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್3 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಶಿಕ್ಷಣ9 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಕಾರ್ಯಕ್ರಮಗಳು2 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಮಂಗಳೂರು47 minutes agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಶಿಕ್ಷಣ8 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಅಪರಾಧ52 minutes agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ















