ಅಪರಾಧ
Mangalore-ಮಂಗಳೂರು: ಹಾಡುಹಗಲೇ ರಸ್ತೆಯಿಂದ ಜೈಲೊಳಗೆ ಗಾಂಜಾ ಥ್ರೋ..! ಮಾಜಿ ಮೇಯರ್ ಕವಿತಾ ಸನಿಲ್ ಕಾರ್ ನಲ್ಲಿ ದೃಶ್ಯ ಸೆರೆ
ರಸ್ತೆಯಿಂದ ಮಂಗಳೂರಿನ ಜೈಲ್ ಕಂಪೌಂಡ್ ಒಳಗೆ ಪ್ಲಾಸ್ಟಿಕ್ ಕವರ್ ನಲ್ಲಿ ವಸ್ತು ಒಂದನ್ನು ಇಬ್ಬರು ಯುವಕರು ಬಿಸಾಡುವ ದೃಶ್ಯ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಕಾರ್ ನ ಡ್ಯಾಶ್ ಬೋರ್ಡ್ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಯುವಕರು ಗಾಂಜಾ ಎಸೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮಂಗಳೂರು: ರಸ್ತೆಯಿಂದ ಮಂಗಳೂರಿನ ಜೈಲ್ ಕಂಪೌಂಡ್ ಒಳಗೆ ಪ್ಲಾಸ್ಟಿಕ್ ಕವರ್ ನಲ್ಲಿ ವಸ್ತು ಒಂದನ್ನು ಇಬ್ಬರು ಯುವಕರು ಬಿಸಾಡುವ ದೃಶ್ಯ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಕಾರ್ ನ ಡ್ಯಾಶ್ ಬೋರ್ಡ್ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಯುವಕರು ಗಾಂಜಾ ಎಸೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನ ಜೈಲ್ ಕಂಪೌಂಡ್ ಒಳಗೆ ಹಾಡುಹಗಲೇ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಪ್ಲಾಸ್ಟಿಕ್ ಕವರ್ ನಲ್ಲಿ ವಸ್ತುವೊಂದನ್ನು ಎಸೆದು ಪರಾರಿಯಾಗಿದ್ದಾರೆ.
ಯುವಕರ ಈ ಕೃತ್ಯ ಮಾಜಿ ಮೇಯರ್ ಕವಿತಾ ಸನಿಲ್ ಕಾರ್ ನ ಡ್ಯಾಶ್ ಬೋರ್ಡ್ ಕ್ಯಾಮೆರಾ ದಲ್ಲಿ ಸೆರೆಯಾಗಿದ್ದು, ದ್ವಿಚಕ್ರ ವಾಹನ ಸವಾರರನ್ನು ಕವಿತಾ ಸನಿಲ್ ಅವರು ಚೇಸ್ ಮಾಡಿದ್ದಾರೆ. ಆದರೆ ಬೈಕ್ ಸವಾರರು ತಪ್ಪಿಸಿಕೊಂಡು ಓಣಿಯೊಳಗೆ ಪರಾರಿಯಾಗಿದ್ದಾರೆ.
ಹಾಡುಹಗಲೇ ಈ ಕೃತ್ಯ ನಡೆದರೂ ಜೈಲ್ ಅಧಿಕಾರಿಗಳು ಮೌನವಹಿಸಿದ್ದು, ಕಂಪೌಂಡ್ ತಪಾಸಣೆಗೆಂದು ಸಿಬ್ಬಂದಿ ಇದ್ರೂ ಆತನಿಗೆ ಈ ವಿಷಯದ ಅರಿವೇ ಇದ್ದಂತಿಲ್ಲ.
ಘಟನೆಯ ಕುರಿತು ಜೈಲ್ ಅಧಿಕಾರಿ ಚಹಾ ಹುಡಿ ಬಿಸಾಡಿರಬಹುದು ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಜೈಲಾಧಿಕಾರಿ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಅವರು ಗರಂ ಆಗಿದ್ದಾರೆ.
ಜೈಲೊಳಗೆ ಗಾಂಜಾ ಸಪ್ಲೈ ಆಗೋದು ನಿರಂತರವಾಗಿ ನಡೆಯುತ್ತಿದೆ. ಆದರೆ ಬಂಧೀಖಾನೆ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದೆ. ಸಿಸಿ ಟಿವಿಯಲ್ಲಿ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇನೆ ಎಂದು ಮಂಗಳೂರು ಕೇಂದ್ರ ಕಾರಾಗೃಹ ಬಂಧೀಖಾನೆ ಅಧಿಕಾರಿ ಅಸೈ ಖಾನ್ ಹೇಳಿಕೆ ನೀಡಿದ್ದಾರೆ.
ಸ್ಥಳೀಯ
Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್ಗಳಲ್ಲಿ ನೇರವಾಗಿ ಸಪ್ಲಿಮೆಂಟ್ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್ಗಳ ಪ್ಯಾಕೆಟ್ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
-
ಬಿಗ್ ನ್ಯೂಸ್13 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ12 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ12 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ10 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಸುಳ್ಯ7 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ10 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ12 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ7 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!















