Connect with us

ಕಾರ್ಯಕ್ರಮಗಳು

SDP Kalopasana-ಎಸ್.ಡಿ.ಪಿ ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ: ಎರಡನೇ ದಿನ ಬಡಗುತಿಟ್ಟಿನ ಯಕ್ಷಗಾನ ಪ್ರದರ್ಶನ – ಇಂದು ಸಂಜೆ ಹನುಮಗಿರಿ ಮೇಳದವರಿಂದ ʼಸಾಕೇತ ಸಾಮ್ರಾಜ್ಞೆʼ ಯಕ್ಷಗಾನ

Published

on

Ad Widget

Ad Widget

Ad Widget

Ad Widget

ಪರ್ಲಡ್ಕದಲ್ಲಿರುವ ಎಸ್.ಡಿ.ಪಿ. ರೆಮಿಡೀಸ್ ರಿಸರ್ಚ್ ಸೆಂಟರ್‌ನ ಆವರಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಲಿರುವ 21ನೇ ವರ್ಷದ ‘ಎಸ್.ಡಿ.ಪಿ. ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ’ದ ಎರಡನೇ ದಿನವಾದ ಫೆ.23ರಂದು ಬಡಗುತಿಟ್ಟಿನ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ, ಮೆಕ್ಕೆಕಟ್ಟು ಮೇಳದ ಕಲಾವಿದರಿಂದ ಶ್ರೀ ಕೃಷ್ಣ ಪಾರಿಜಾತ – ನರಕಾಸುರ ವಧೆ’ ಎಂಬ ಪೌರಾಣಿಕ ಪ್ರಸಂಗ ಪ್ರದರ್ಶನಗೊಂಡಿತು.

Ad Widget

Ad Widget

Ad Widget

Ad Widget

ಪುತ್ತೂರು: ಪರ್ಲಡ್ಕದಲ್ಲಿರುವ ಎಸ್.ಡಿ.ಪಿ. ರೆಮಿಡೀಸ್ ರಿಸರ್ಚ್ ಸೆಂಟರ್‌ನ ಆವರಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಲಿರುವ 21ನೇ ವರ್ಷದ ‘ಎಸ್.ಡಿ.ಪಿ. ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ’ದ ಎರಡನೇ ದಿನವಾದ ಫೆ.23ರಂದು ಬಡಗುತಿಟ್ಟಿನ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ, ಮೆಕ್ಕೆಕಟ್ಟು ಮೇಳದ ಕಲಾವಿದರಿಂದ ಶ್ರೀ ಕೃಷ್ಣ ಪಾರಿಜಾತ – ನರಕಾಸುರ ವಧೆ’ ಎಂಬ ಪೌರಾಣಿಕ ಪ್ರಸಂಗ ಪ್ರದರ್ಶನಗೊಂಡಿತು.

Ad Widget

Ad Widget alt="Ad Widget"/>

Ad Widget

2ನೇ ದಿನದ ಕಾರ್ಯಕ್ರಮಗಳಿಗೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದ ಪುತ್ತೂರಿನ ಖ್ಯಾತ ಸಿವಿಲ್ ఇంಜೀನಿಯರ್‌ ಮತ್ತು ಶ್ರೀರಾಮ ಕನ್ಸ್ಟ್ರಕ್ಷನ್‌ನ ಮಾಲಕ ಹಾಗೂ ಸತ್ಯಸಾಯಿ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾಗಿರುವ ಪ್ರಸನ್ನ ಎನ್. ಭಟ್ ಮಾತನಾಡಿ ಭಾರತೀಯ ಕಲೆಗಳನ್ನು ಇಂದಿನ ಯುವ ಜನತೆಗೆ ತಲುಪಿಸುವಂತಹ ಕಾರ್ಯವನ್ನು ಡಾ. ಹರಿಕೃಷ್ಣ ಪಾಣಾಜೆ ಮತ್ತು ಅವರ ಕುಟುಂಬಸ್ಥರು ಕಳೆದ ಹಲವಾರು ವರ್ಷಗಳಿಂದ ಮಾಡುತ್ತಿರುವುದು ಪ್ರಶಂಸಾರ್ಹ ವಿಚಾರ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕಲೋಪಾಸನಾ ಕಾರ್ಯಕ್ರಮದ ಕುರಿತು ಮೆಚ್ಚುಗೆಯ ನುಡಿಗಳನ್ನಾಡಿದ ಅವರು ಮಹಾಭಾರತ, ರಾಮಾಯಣ ಸೇರಿದಂತೆ ನಮ್ಮ ಶಾಸ್ತ್ರ ಪುರಾಣಗಳ ವಿಚಾರ ಮತ್ತು ಅಂಶಗಳನ್ನು ಹೊಂದಿರದ ಯಾವುದೇ ಕಲಾಪ್ರಾಕಾರಗಳು ನಮ್ಮಲ್ಲಿಲ್ಲ. ನಮ್ಮ ಕರಾವಳಿಯ ಗಂಡುಕಲೆಯಾಗಿರುವ ಯಕ್ಷಗಾನ, ನೃತ್ಯ, ಸಂಗೀತ, ಭಾವಾಭಿನಯ, ಅರ್ಥಗಾರಿಕೆ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಒಂದು ಪರಿಪೂರ್ಣ ಕಲೆಯಾಗಿದೆ. ಇಂತಹ ಯಕ್ಷಗಾನ ಕಲೆಯ ಸ್ವಾದವನ್ನು ಈ ಭಾಗದ ಕಲಾ ರಸಿಕರಿಗೆ ಉಣಬಡಿಸುತ್ತಿರುವುದು ಉತ್ತಮ ವಿಷಯವಾಗಿದೆ ಎಂದು ತಿಳಿಸಿದರು.

ಎಸ್.ಡಿ.ಪಿ. ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್‌ನ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ, ರೂಪಲೇಖ, ಮೇಘನಾ ಪಾಣಾಜೆ ಮತ್ತು ಸುಜಾತಾ ಪಿ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಶ್ರೀ ಮೆಕ್ಕೆಕಟ್ಟು ಮೇಳದವರಿಂದ ಶ್ರೀಕೃಷ್ಣಪಾರಿಜಾತ ನರಕಾಸುರ ವಧೆ ಯಕ್ಷಗಾನ ಪ್ರದರ್ಶನ ನಡೆಯಿತು.

Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!