ಶಿಕ್ಷಣ
Puttur-ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕಿ ರಾಜೇಶ್ವರಿ ಎಂ.ರವರಿಗೆ ಡಾಕ್ಟರೇಟ್ ಪದವಿ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್; ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ.
21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನದ ಬಗ್ಗೆ ತಮ್ಮ ಅಪಾರ ತಿಳುವಳಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ಡಾ.ರಾಜೇಶ್ವರಿ.ಎಂ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
Uncategorized8 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized7 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized5 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized9 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized7 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized6 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















