ಸ್ಥಳೀಯ
Dharmasthala-ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ
ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು.
ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು.
ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ.
ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.
ರಾಜಕೀಯ
Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಶಿಕ್ಷಣ23 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು23 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಅಪರಾಧ7 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ23 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಬಿಗ್ ನ್ಯೂಸ್4 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು5 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಅಂತರ ರಾಜ್ಯ5 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!















