Connect with us

Uncategorized

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ರಾಜಿನಾಮೆ ಕೇಳಿದ್ದ ಬಿಜೆಪಿಗೆ ತಿರುಗುಬಾಣವಾದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆ ಪ್ರಕರಣ – ಚುನಾವಣೆಯ ಹೊಸ್ತಿಲಲ್ಲಿ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ ..!

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮಂಗಳೂರು: ಸಚಿವ ಈಶ್ವರಪ್ಪನ ಮೇಲೆ 40% ಕಮಿಷನ್ ನ ಗಂಭೀರ ಆರೋಪ ಹೊರಿಸಿ ಬಿಜೆಪಿ ಕಾರ್ಯಕರ್ತ , ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಹಳೆಯ ಪ್ರಕರಣವೊಂದರಂತೆ ಈಶ್ವರಪ್ಪನಿಗೆ ತಿರುಗುಬಾಣವಾಗಿದೆ. ಚುನಾವಣೆಯ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಈ ಪ್ರಕರಣ ನುಂಗಲಾರದ ತುತ್ತಾಗಿದೆ, ಈ ಘಟನೆಯಿಂದ ಬಿಜೆಪಿ ಇಕ್ಕಟ್ಟಿನಲ್ಲಿ ಸಿಲುಕಿದೆ.

Ad Widget

Ad Widget

Ad Widget alt="Ad Widget"/>

Ad Widget

2016ರಲ್ಲಿ ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಹಾಗೂ ಇದೀಗ ಸಂತೋಷ್ ಆತ್ಮಹತ್ಯೆ ಪ್ರಕರಣದ ನಂತರದ ಬೆಳವಣಿಗೆ ಒಂದೇ ರೀತಿ ನಡೆದಿದೆ.2016ರಲ್ಲಿ ಡಿವೈಎಸ್ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ನನ್ನ ಸಾವಿಗೆ ಅಂದಿನ ಸಚಿವ ಕೆ.ಜೆ ಜಾರ್ಜ್ ಕಾರಣ ಅಂತ ಪತ್ರಕರ್ತರಿಗೆ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ನಂತರದ ಬೆಳವಣಿಗೆಯಲ್ಲಿ ಇದೇ ಈಶ್ವರಪ್ಪ ಜಾರ್ಜ್ ನ್ನು ಕೊಲೆಗಾರ ಎಂದು ಕಳೆದಿದ್ದರು ಬಿಜೆಪಿ ರಾಜೀನಾಮೆಗೆ ಒತ್ತಾಯಿಸಿತು. ನಂತರ ಸಿಎಂ ಸಿದ್ದರಾಮಯ್ಯ ಜಾರ್ಜ್ ರಾಜಿನಾಮೆ ಪಡೆದರು.

Ad Widget

Ad Widget <> Ad Widget

ಇದೀಗ ಬೆಳಗಾವಿಯ ಗುತ್ತಿಗೆದಾರ ಪ್ರಧಾನಿ ಮೋದಿಗೆ ಪತ್ರ ಬರೆದು ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಹೊರಡಿಸಿದ್ದರು. ಎ.11 ರಂದು ಮಧ್ಯರಾತ್ರಿ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಪತ್ರಕರ್ತರಿಗೆ ಸಂದೇಶ ಕಳುಹಿಸಿ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.



Ad Widget

ಅಂದು ಜಾರ್ಜ್ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ಇಂದು ಈಶ್ವರಪ್ಪನ ರಾಜಿನಾಮೆ ಪಡೆಯುತ್ತದ ಕಾದು ನೋಡಬೇಕು. ಒಟ್ಟು ಪ್ರಕರಣ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ.

Ad Widget

Ad Widget

ಸಂತೋಷ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ “ಗುತ್ತಿಗೆದಾರನ ಆತ್ಮಹತ್ಯೆಯ ಆರೋಪಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಿ, ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು. ಜೊತೆಗೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಬೇಕು.

ನಮ್ಮ ಸರ್ಕಾರದ ಕಾಲದಲ್ಲಿ ಯಾರೋ ಪೊಲೀಸ್ ಅಧಿಕಾರಿಯೊಬ್ಬರು ಆರೋಪ ಹೊರಿಸಿದಾಗ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿಲ್ಲವೇ? ಆಗ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಇದೇ ಬಿಜೆಪಿ ನಾಯಕರು ಆಕಾಶ-ಭೂಮಿ ಒಂದು ಮಾಡಿಲ್ಲವೇ?ಆತ್ಮಹತ್ಯೆಗೆ ಮೊದಲು ಮೃತ ಸಂತೋಷ್ ಪಾಟೀಲ್ ಬರೆದಿಟ್ಟ ಪತ್ರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹಣ ಬಿಡುಗಡೆ ಮಾಡದೆ ಇದ್ದರೆ ಆತ್ಮಹತ್ಯೆಯೊಂದೇ ಆಯ್ಕೆಯಾಗುತ್ತದೆ ಎಂದೂ ಹೇಳಿದ್ದರು. ಸಚಿವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲು ಇನ್ನು ಯಾವ ಸಾಕ್ಷಿ ಬೇಕು? ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವ ಈಶ್ವರಪ್ಪನವರು ಹೇಳಿದ್ದರು. ಬಡ್ಡಿಗೆ ಸಾಲ ತಂದು 4 ಕೋಟಿ ರೂಪಾಯಿ ಅಂದಾಜಿನ 108 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೆವು. ಆದರೆ ಹಣ ಬಿಡುಗಡೆ ಮಾಡಲು ಈಶ್ವರಪ್ಪನವರ ಅಸೋಸಿಯೇಟ್ ಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಮೃತ ಸಂತೋಷ್ ಪಾಟೀಲ್ ಪತ್ರ ಬರೆದಿದ್ದರು.

ಇದು ಆತ್ಮಹತ್ಯೆ ಅಲ್ಲ, ಕೊಲೆ. ಕಮಿಷನ್ ಕಿರುಕುಳದ ಬಗ್ಗೆ ಮೃತ ಸಂತೋಷ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವರೆಗೆ ಎಲ್ಲರಿಗೂ ಪತ್ರ ಬರೆದಿದ್ದರು.. ಹೀಗಿದ್ದರೂ ಅವರಿಗೆ ನ್ಯಾಯ ಸಿಗಲಿಲ್ಲ. ಆದ್ದರಿಂದ ಇವರೆಲ್ಲರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು.ಮೃತ ಗುತ್ತಿಗೆದಾರ, ಸಚಿವ ಈಶ್ವರಪ್ಪನವರಿಗೆ ಅಪರಿಚಿತ ವ್ಯಕ್ತಿ ಅಲ್ಲ, ಅವರು ಸಚಿವರಿಗೆ ಆತ್ಮೀಯರಾಗಿದ್ದ ಬಿಜೆಪಿ ಕಾರ್ಯಕರ್ತರಾಗಿದ್ದರು.

ಬಿಜೆಪಿ ಕಾರ್ಯಕರ್ತನಾಗಿದ್ದ ಗುತ್ತಿಗೆದಾರನ ಸ್ಥಿತಿಯೇ ಹೀಗಾದರೆ ಬೇರೆಯವರ ಗತಿ ಏನು? ಬಿಜೆಪಿ ಸರ್ಕಾರದ ಕರ್ಮಕಾಂಡಕ್ಕೆ ಇನ್ನೆಷ್ಟು ಜೀವ ಬಲಿಯಾಗಬೇಕು?ಗುತ್ತಿಗೆದಾರ ಅವಸರ-ಆವೇಶದಲ್ಲಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡಿಲ್ಲ. ಮೊದಲು ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೂ ಪತ್ರ ಬರೆದು ಸಚಿವರ ಕಮಿಷನ್ ಕಿರುಕುಳವನ್ನು ತಿಳಿಸಿದ್ದಾರೆ. ಇನ್ನೆಷ್ಟು ಪುರಾವೆಗಳು ಬೇಕು? ಹೀಗಿರುವಾಗ ಸಚಿವರು ಬೇರೆಯವರನ್ನೂ ದೂರುವ ಹಾಗಿಲ್ಲ, ಅವರೇ ಹೊಣೆ.ನಾ ಖಾವುಂಗಾ, ನ ಖಾನೇ ದೂಂಗಾ ಎನ್ನುವ ಘೋಷಣೆಯನ್ನೇನಾದರೂ ಪ್ರಧಾನಿ ನರೇಂದ್ರ ಮೋದಿಯವರು ‘ ಮೈ ಖಾವುಂಗಾ, ಆಪ್ ಬೀ ಖಾಯಿಯೆ” ಎಂದೇನಾದರೂ ಬದಲಾವಣೆ ಮಾಡಿಕೊಂಡಿದ್ದಾರೆಯೇ.? ಚೌಕಿದಾರ್ ಗಳು ಕಾಯುತ್ತಿರುವುದು ಜನತೆಯ ತೆರಿಗೆ ಹಣವನ್ನೇ? ಇಲ್ಲವೇ ಭ್ರಷ್ಟರ ಕಪ್ಪು ಹಣವನ್ನೇ? ಮೊದಲ ಬಾರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ರಾಜ್ಯ ಭ್ರಷ್ಟಾಚಾರದ ಪ್ರಕರಣಗಳಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿತ್ತು. ಈಗ ಬೊಮ್ಮಾಯಿ ಅವರು ಕರ್ನಾಟಕವನ್ನು ಜಗತ್ತಿನಲ್ಲಿಯೆ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನ ಮಾಡುತ್ತಿದ್ದಾರೆ.

ರಾಜ್ಯದ ಸಚಿವರು ಕೇಳುತ್ತಿರುವ 40% ಕಮಿಷನ್ ರಗಳೆಯಿಂದ ಗುತ್ತಿಗೆದಾರರು ರೋಸಿಹೋಗಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಬಹಿರಂಗವಾಗಿ ಹೇಳಿಕೆ ನೀಡಿ ಸರ್ಕಾರದ ವಿರುದ್ಧ ಲಂಚದ ಆರೋಪ ಮಾಡಿದ್ದಲ್ಲದೆ, ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಈಶ್ವರಪ್ಪನವರನ್ನು ಬಂಧಿಸಲು ಇನ್ನು ಯಾವ ಸಾಕ್ಷಿ-ಪುರಾವೆಗಳು ಬೇಕು?ರಾಜ್ಯ ಸರ್ಕಾರದ ಲಂಚಾವತಾರಗಳಿಂದ ಜನರ ಗಮನ ಬೇರೆ ಕಡೆ ಸೆಳೆಯಲಿಕ್ಕಾಗಿಯೇ ರಾಜ್ಯ ಬಿಜೆಪಿ ಹಿಜಾಬು, ಹಲಾಲ್, ಮುಸ್ಲಿಮ್ ವ್ಯಾಪಾರಿಗಳ ಮೇಲೆ ಹಲ್ಲೆಯಂತಹ ಕೋಮುವಾದಿ ಪ್ರಕರಣಗಳನ್ನು ಎತ್ತಿಕೊಂಡು ವಿವಾದ ಸೃಷ್ಟಿಸುತ್ತಿದೆ” .

Ad Widget
Click to comment

Leave a Reply

Uncategorized

YouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಮತ್ತು ಕಿಶೋರ್, ಸಿಜೆಪಿ ಪ್ರಮುಖರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಆಯಿಷಾ ಘೋಷ್ ಹಾಗೂ ಸೌರವ್ ದಾಸ್, ಹಿರಿಯ ಸಾಹಿತಿ ದೇವನೂರ ಮಹಾದೇವ, ನೂರ್ ಶ್ರೀಧರ್, ಕೆ. ಮಹಾಂತೇಶ್, ತಾಹೇರ್ ಹುಸೇನ್, ಅಬ್ದುಲ್ ಮಜೀದ್, ಮುಹಮ್ಮದ್ ಯೂಸುಫ್ ಕನ್ನಿ, ಫಾ. ಅರುಣ್ ಲೂಯಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ, ನಮೂನೆ-7ರ ದುರುಪಯೋಗ, ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಮತದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.



Ad Widget

ರಾಜ್ಯದ ವಿವಿಧ ಭಾಗಗಳಿಂದ ಎಸ್‌ಐಆರ್‌ನಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾದ ಮತದಾರರು, ನಾಗರಿಕ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕ ವಿಚಾರಣೆ ನಡೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

Ad Widget

Ad Widget

ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಸಾಹಿತಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ‘ಜನತಾ ನ್ಯಾಯಾಲಯ’ದ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಚಾರಣೆಯ ಬಳಿಕ ಸಿದ್ಧಪಡಿಸುವ ವರದಿಯನ್ನು ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳ ಗಮನಕ್ಕೆ ತರಲು ಆಯೋಜಕರು ಉದ್ದೇಶಿಸಿದ್ದಾರೆ.

ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಧ್ವನಿ ದಾಖಲಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳು ಕರೆ ನೀಡಿವೆ.

Ad Widget
Continue Reading

Uncategorized

‌Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನಾ ಪಾಟೇಕರ್ ಅವರು ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ತೀವ್ರ ಆಘಾತ ತಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 5:20ರ ಸುಮಾರಿಗೆ ಅವರ ಸಾವು ಸಂಭವಿಸಿದೆ ಎಂದು ಹೆಳಲಾಗುತ್ತಾ ಇದೆ. ಪ್ರಾಥಮಿಕ ಮಾಹಿತಿಯಂತೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತಂದ ತಕ್ಷಣ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಲಾಯಿತು. ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ. ಸಾವಿನ ಹಿನ್ನೆಲೆಯ ಕುರಿತು ಕುಟುಂಬಸ್ಥರು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.



Ad Widget

ನಾನಾ ಪಾಟೇಕರ್ ಅವರು ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. ತಮ್ಮ ವಿಶಿಷ್ಟ ನಟನೆ ಮತ್ತು ಗಂಭೀರ ಸಂಭಾಷಣೆ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

Ad Widget

Ad Widget

ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸಿನಿಮಾಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟವು. ‘ವೆಲ್ ಕಮ್’ ನಂತಹ ಹಾಸ್ಯ ಚಿತ್ರಗಳ ಮೂಲಕವೂ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ‘ಯಕ್ಷ’. ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.

Ad Widget
Continue Reading

Uncategorized

ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

Published

on



Ad Widget

Ad Widget

Ad Widget

Ad Widget

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

Ad Widget

Ad Widget <> Ad Widget

ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.



Ad Widget

ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಫತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading