ಪ್ರಕರಣದ ಆರೋಪಿಗಳಾಗಿದ್ದ ಸಚಿನ್ ಯಾನೆ ಸಚ್ಚಿದಾನಂದ, ದೇವಿಪ್ರಸಾದ್, […]" /> ಪ್ರಕರಣದ ಆರೋಪಿಗಳಾಗಿದ್ದ ಸಚಿನ್ ಯಾನೆ ಸಚ್ಚಿದಾನಂದ, ದೇವಿಪ್ರಸಾದ್, […]"> Sullia-ಸುಳ್ಯ: 17 ವರ್ಷಗಳ ಹಿಂದಿನ ಮೀರಾ ಬಾಲಕೃಷ್ಣ ಕೊಲೆ ಪ್ರಕರಣ: ಐವರು ಆರೋಪಿಗಳು ದೋಷ ಮುಕ್ತ - Nikhara News | Kannada News Website
Connect with us

ಸುಳ್ಯ

Sullia-ಸುಳ್ಯ: 17 ವರ್ಷಗಳ ಹಿಂದಿನ ಮೀರಾ ಬಾಲಕೃಷ್ಣ ಕೊಲೆ ಪ್ರಕರಣ: ಐವರು ಆರೋಪಿಗಳು ದೋಷ ಮುಕ್ತ

Published

on

Ad Widget

Ad Widget

Ad Widget

Ad Widget

ಸುಳ್ಯದ ಐವರ್ನಾಡ್‌ನಲ್ಲಿ ಹದಿನೇಳು ವರ್ಷಗಳ ಹಿಂದೆ ನಡೆದಿದ್ದ ಮೀರಾ ಬಾಲಕೃಷ್ಣ ಅವರ ಕೊಲೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಐವರು ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸುಳ್ಯದ ಐವರ್ನಾಡ್‌ನಲ್ಲಿ ಹದಿನೇಳು ವರ್ಷಗಳ ಹಿಂದೆ ನಡೆದಿದ್ದ ಮೀರಾ ಬಾಲಕೃಷ್ಣ ಅವರ ಕೊಲೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಐವರು ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾಗಿದ್ದ ಸಚಿನ್ ಯಾನೆ ಸಚ್ಚಿದಾನಂದ, ದೇವಿಪ್ರಸಾದ್, ಶಿವರಾಜ್, ಮಹಾವೀ‌ರ್ ಮತ್ತು ರವಿಕಿರಣ್ ದೋಷಮುಕ್ತರಾದವರು.

Ad Widget

Ad Widget <> Ad Widget

ಪ್ರಕರಣದ ಒಂದನೇ ಆರೋಪಿ ರೋಷನ್ ತಲೆಮರೆಸಿಕೊಂಡಿದ್ದು ಆತನ ಮೇಲಿನ ಪ್ರಕರಣವನ್ನು ಪ್ರತ್ಯೇಕಿಸಿ, ಉಳಿದವರ ಮೇಲಿನ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.

02/03/2008ರಂದು ಬೆಳಗ್ಗಿನ ಜಾವ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮೀರಾ ಬಾಲಕೃಷ್ಣ ಅವರ ಮನೆಗೆ ನುಗ್ಗಿದ ಅಪರಿಚಿತರು ಅವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿದ್ದರು. ಮೀರಾ ಬಾಲಕೃಷ್ಣರವರು 10 ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಮಾರಾಟ ಮಾಡಿ ಹಣವನ್ನು ಮನೆಗೆ ತಂದಿದ್ದು, ಈ ಹಣ ಮತ್ತು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ಕೃತ್ಯ ಎಸಗಲಾಗಿತ್ತು ಎಂದು ಹೇಳಲಾಗಿತ್ತು.

Ad Widget

Ad Widget

ಬೆಳಿಗ್ಗೆ 7.30ರಿಂದ 8 ಗಂಟೆಯ ಮಧ್ಯ ಸಮಯದಲ್ಲಿ ಮೀರಾ ಬಾಲಕೃಷ್ಣರವರ ಮನೆಯಲ್ಲಿ ಅವರು ಮಾತ್ರ ವಾಸವಾಗಿದ್ದು, ಅವರು ಮಹಡಿ ಇಳಿದು ಅಡುಗೆ ಕೋಣೆಗೆ ಹೋಗುವುದನ್ನೇ ಕಾಯುತ್ತ ಕುಳಿತ ಆರೋಪಿಗಳು ಅವರ ಮೇಲೆರಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ನಂತರ ಮನೆ ಕೆಲಸದಾಕೆ ವಿಮಲಾ ಎಂಬವರು ಮೀರಾರವರ ಮನೆಗೆ ಬರುತ್ತಿದ್ದಂತೆ, ಮನೆಯ ಹಿಂಬದಿ ಹೋದಾಗ, ಅಲ್ಲಿ ಮೀರಾಬಾಲಕೃಷ್ಣರವರು ಅಂಗಾತ ಮಲಗಿದ್ದು, ಅವರ ಕೈಗಳನ್ನು ಹಗ್ಗದಿಂದ ಕಟ್ಟಿಹಾಕಲಾಗಿತ್ತು. ಇದನ್ನು ನೋಡಿದ ವಿಮಲಾರವರು ಕೂಡಲೇ ಅಲ್ಲಿಂದ ಹೊರಗೆ ಬಂದು ಬೊಬ್ಬೆಹೊಡೆದಾಗ, ಶಿವರಾಜ್ ಮತ್ತು ಅಚ್ಚುತ ಎಂಬವರು ಬಂದು ಮೀರಾ ಬಾಲಕೃಷ್ಣರವರು ಮೃತ ಪಟ್ಟಿರುವುದಾಗಿ ತಿಳಿಸಿದ್ದರು.

ನಂತರ ವಿಮಲಾರವರು ತನಗಾದ ಗಾಯಕ್ಕೆ, ಅವರ ಗಂಡನ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಹೋಗಿ, ನಂತರ ಸುಳ್ಯ ಪೊಲೀಸ್ ಠಾಣೆಗೆ ಹೋಗಿ ಘಟನೆ ಕುರಿತು ದೂರು ನೀಡಿದ್ದರು.ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 448,397,396,201 (ಬಿ)ರನ್ವಯ ಪ್ರಕರಣ ದಾಖಲಿಸಿದ್ದರು.

ಸಿಐಡಿಗೆ ಹಸ್ತಾಂತರ:
ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದೆ ಇದ್ದುದರಿಂದ ಸರಕಾರ ತನಿಖೆಯನ್ನು ಸಿ.ಐ.ಡಿಗೆ ಒಪ್ಪಿಸಿತ್ತು.ಸಿಐಡಿ ಕಛೇರಿಯ ಅಂದಿನ ಡಿ.ಎಸ್.ಪಿ ಎನ್.ಎಂ.ರಾಮಲಿಂಗಪ್ಪ ಇವರ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಅವರ ತನಿಖೆ ಆಧಾರದ ಮೇರೆಗೆ ಒಟ್ಟು 6 ಆರೋಪಿಗಳ ಹೆಸರನ್ನು ಹೆಸರಿಸಿ ಅವರ ಪೈಕಿ ಐದು ಆರೋಪಿಗಳನ್ನು, ಪ್ರಕರಣ ನಡೆದ ಸುಮಾರು 4 ವರ್ಷಗಳ ಬಳಿಕ ಪತ್ತೆ ಮಾಡಿ ಬಂಧಿಸಿ ಅವರ ವಿರುದ್ಧ ಭಾರತೀಯ ದಂಡಸಂಹಿತೆಯ ಕಲಂ 120 ಬಿ,448,396 ಮತ್ತು 397 ಐ.ಪಿ.ಸಿಯಂತೆ ಸಿಐಡಿ ಪೊಲೀಸರು ದೋಷಾರೋಪಣಾ ಪಟ್ಟಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಮೀರಾರವರ ಮನೆಯಲ್ಲಿ ಏನಾಗಿದೆ ಮತ್ತು ಅವರು ಹೇಗೆ ಮೃತಪಟ್ಟಿರುತ್ತಾರೆ ಎಂದು ಗೊತ್ತಿರುವುದಿಲ್ಲ. ಮನೆಕೆಲಸಕ್ಕೆ ಹೋಗುವಾಗ ವಿಮಲಾರಿಗೆ ಯಾವುದೇ ಗಾಯ ಆಗಿರುವುದಿಲ್ಲ, ಅವರ ಗಾಯದ ಪ್ರಮಾಣ ಪತ್ರದಲ್ಲಿ ನಮೂದಿಸಿದ ಗಾಯದ ಹಿನ್ನೆಲೆ ಮತ್ತು ಆಗಿದೆ ಎನ್ನಲಾದ ಗಾಯದ ಪರಸ್ಪರ ಸಾಮ್ಯತೆ ಇರುವುದಿಲ್ಲ. ಈ ಪ್ರಕರಣದಲ್ಲಿ, ಮೃತ ಮೀರಾ ಬಾಲಕೃಷ್ಣ ಅವರ ಮಕ್ಕಳು ಮತ್ತು ಅವರ ಸಂಬಂಧಿಕರನ್ನು ಸಾಕ್ಷಿಯಾಗಿ ಕಾಣಿಸಿರುವುದಿಲ್ಲ.ಕೆಲವು ಸಾಕ್ಷಿಗಳು ಪ್ರತಿಕೂಲ ಸಾಕ್ಷಿ ನುಡಿದಿರುತ್ತಾರೆ. ಬೆರಳಚ್ಚು ತಜ್ಞರನ್ನು ತನಿಖೆ ನಡೆಸಿರುವುದಿಲ್ಲ, ಹೀಗೆ ತನಿಖೆಯಲ್ಲಿನ ಹಲವಾರು ವಿರೋಧಾಭಾಸಗಳು, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು, ಕೊರತೆ ಸಾಕ್ಷ್ಯಧಾರಗಳನ್ನು ಗಮನಿಸಿದಾಗ, ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ ಎಂಬುದಕ್ಕೆ ಪೂರಕವಾದ ಸಾಕ್ಷ್ಯಧಾರಗಳು ಲಭ್ಯವಿರುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ವಾದ-ಪ್ರತಿವಾದವನ್ನು ಆಲಿಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ.ಅವರು ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆಯು ವಿಫಲಗೊಂಡಿದೆ ಎಂಬ ಕಾರಣವನ್ನು ನೀಡಿ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಆರೋಪಿಗಳ ಪೈಕಿ ಸಚಿನ್ ಮತ್ತು ರವಿಕಿರಣ್ ಪರವಾಗಿ ವಕೀಲರಾದ ಮಹೇಶ್ ಕಜೆ ಮತ್ತು ಕು.ಸೌಮ್ಯ ಹಾಗೂ ಶಿವರಾಜ್, ದೇವಿಪ್ರಸಾದ್ ಮತ್ತು ಮಹಾವೀರ ಇವರ ಪರವಾಗಿ ಸುಳ್ಯದ ವಕೀಲರಾದ ಎಂ.ವೆಂಕಪ್ಪ ಗೌಡ, ಚಂಪಾ ವಿ ಗೌಡ, ರಾಜೇಶ್ ಬಿ.ಜಿ ಶ್ಯಾಮ್ ಪ್ರಸಾದ್ ಎನ್.ಕೆ.ವಾದಿಸಿದ್ದರು.

Ad Widget
Click to comment

Leave a Reply

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!