Connect with us

ಸ್ಥಳೀಯ

Shivaratri-ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ; ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ-ಡಿ. ವೀರೇಂದ್ರ ಹೆಗ್ಗಡೆ

Published

on

Ad Widget

Ad Widget

Ad Widget

Ad Widget

ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದರು.

Ad Widget

Ad Widget

Ad Widget

Ad Widget

ಉಜಿರೆ: ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವೃತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ್ತದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು.

Ad Widget

Ad Widget <> Ad Widget

ಮಾತು ಬಿಡ ಮಂಜುನಾಥ ಎಂಬ ಮಾತು ಪ್ರಚಲಿತವಿದೆ. ನಮ್ಮ ಮಾತು ಮತ್ತು ಕೃತಿಗೆ ಅಂತರವಿರಬಾರದು. ನುಡಿದಂತೆ ನಡೆಯಬೇಕು. ಆಗ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಎಲ್ಲವೂ ಸುಗಮವಾಗಿ ಜೀವನ ಪಾವನವಾಗುತ್ತದೆ. ಮನದಲ್ಲಿರುವ ಕೆಟ್ಟ ಯೋಚನೆ, ಭಾವನೆಗಳನ್ನು ತ್ಯಜಿಸಿ ಎಲ್ಲರೂ ಸುಖಿಗಳಾಗಿರಲಿ ಎಂಬ ಉದಾತ್ತ ಭಾವನೆಯೊಂದಿಗೆ ಲೋಕಕಲ್ಯಾಣವಾಗಲಿ ಎಂದು ಶುಭ ಚಿಂತನೆ ಮಾಡಬೇಕು. ಆಗ ಕಾಲಕ್ಕೆ ಸರಿಯಾಗಿ ಮಳೆ, ಬೆಳೆ ಆಗಿ ಎಲ್ಲೆಲ್ಲೂ ಸುಖ-ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಬಳಿಕ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಆಹೋ ರಾತ್ರಿ ನಡೆಯಿತು.

ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳ ಅಭಿಷೇಕ ಸೇವೆ ಅರ್ಪಿಸಿ ಧನ್ಯತೆಯನ್ನು ಹೊಂದಿದರು. ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರ ಕುಮಾರ್, ಬೆಂಗಳೂರಿನ ಹನುಮಂತಪ್ಪ ಗುರೂಜಿ ಮತ್ತು ಮರಿಯಪ್ಪ ಉಪಸೀತರಿದ್ದರು.

Ad Widget

Ad Widget

ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.

ವೈಯಕ್ತಿಕ ವಿಭಾಗ:                               

Ad Widget

Ad Widget
  • ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು  ಅಭಿನಂದಿಸಿರುತ್ತಾರೆ.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಸ್ಥಳೀಯ

Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!

Published

on

Ad Widget

Ad Widget

Ad Widget

Ad Widget

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget

Ad Widget

Ad Widget

ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget alt="Ad Widget"/>

Ad Widget

ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್‌ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.

Ad Widget

Ad Widget <> Ad Widget

ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್‌ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್‌ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.

ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ

Ad Widget

Ad Widget

ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.

ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್‌ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.

ಹಣ ಪಾವತಿಸದಿದ್ದರೆ ಒಡವೆ ಹರಾಜು?

ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್‌ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್‌ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.

ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.

ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!