Connect with us

ಬಿಗ್ ನ್ಯೂಸ್

ಜಾತ್ರೆಗೆ ಅನುಕೂಲ ಕಲ್ಪಿಸಲು ಕಾಮಗಾರಿ ನಡೆಸಲು ಸೂಚಿಸಿ ಬಳಿಕ ಬಿಲ್‌ʼಗಾಗಿ 40% ಕಮೀಷನ್‌ ಬೇಡಿಕೆ – ಅನುಮಾನಾಸ್ಪದವಾಗಿ ಸಾವನ್ನಪ್ಪಿದ  ಸಂತೋಷ್‌ ಪಾಟೀಲ್‌ ಸಂಬಂಧಿಯಿಂದ ದೂರು : ಸಚಿವ ಈಶ್ವರಪ್ಪ ವಿರುದ್ಧ FIR

Published

on

Ad Widget

Ad Widget

Ad Widget

Ad Widget

ಉಡುಪಿ: ಎ 13 : ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್‌ ಪಾಟೀಲ್‌ ಉಡುಪಿಯ ಹೊಟೇಲ್‌ ಒಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

“ ಸಚಿವ ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ”  ಎಂದು ಬರೆದಿರುವ ಡೆತ್‌ ನೋಟ್‌ ವೊಂದು ವೈರಲ್‌ ಆದ ಬಳಿಕ ವಿಪಕ್ಷಗಳು ಸಚಿವರ ವಿರುದ್ದ ಮುಗಿಬಿದ್ದಿದ್ದವು.  ಈಶ್ವರಪ್ಪನವರ ರಾಜೀನಾಮೆ ಪಡೆಯುವಂತೆ ಹಾಗೂ ಅವರ ವಿರುದ್ದ  ಮರ್ಡರ್‌ ಪ್ರಕರಣ ದಾಖಲಿಸಿ ಜೈಲಿಗಟ್ಟುವಂತೆ ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಅದಾದ ಬಳಿಕದ ಬೆಳವಣಿಗೆಯಲ್ಲಿ ಇದೀಗ ಈಶ್ವರಪ್ಪ ವಿರುದ್ದ ಆತ್ಮಹತ್ಯೆಗೆ ಪ್ರಚೋಧನೆಎಂಬ ನೆಲೆಯಲ್ಲಿ FIR ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ ನೀಡಿದ ದೂರಿನಂತೆ  ಸಚಿವ ಈಶ್ವರಪ್ಪ ಹಾಗೂ ಆಪ್ತರಾದ ಬಸವರಾಜ ಮತ್ತು ರಮೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸರು ಇಂದು ಮುಂಜಾನೆ   ಐಪಿಸಿ ಕಲಂ:306 Rw   ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget <> Ad Widget

ಇದನ್ನೂ ಓದಿ : Big Breaking ಈಶ್ವರಪ್ಪನ ಮೇಲೆ 40% ಕಮಿಷನ್ ಆರೋಪಿಸಿದ ಗುತ್ತಿಗೆದಾರ ಆತ್ಮಹತ್ಯೆ : ಮುಖ್ಯಮಂತ್ರಿ ಬೊಮ್ಮಾಯಿ ನೇತ್ರತ್ವದಲ್ಲಿ ನಡೆಯುತ್ತಿದ್ದ ಬಿಜೆಪಿ ಕೋರ್ ಕಮಿಟಿ ಸಭೆಗೆ ನುಗ್ಗಲು ಯತ್ನಿಸಿದ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶಾಂಭವಿ ಹೋಟೆಲ್ ನಲ್ಲಿ ಎ.11ರ ರಾತ್ರಿ 11ಗಂಟೆಯಿಂದ ಎ.12ರ ಬೆಳಗ್ಗೆ 10ಗಂಟೆಯ ಮಧ್ಯಾವಧಿಯಲ್ಲಿ ಸಂತೋಷ್ ಪಾಟೀಲ್ ಅನುಮಾನಾಸ್ಪದ ವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ಕಾರಣರಾದ ಕೆ.ಎಸ್ ಈಶ್ವರಪ್ಪ, ಬಸವರಾಜ್, ರಮೇಶ್ ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನ ಒಟ್ಟಾರೆ ಸಾರಂಶ

Ad Widget

Ad Widget

ದೂರಿನಲ್ಲಿ ಏನಿದೆ?

ಶ್ರೀ ಲಕ್ಷ್ಮೀ ದೇವಿಯ  ಜಾತ್ರೆ  ಸಲುವಾಗಿ ಅದಕ್ಕೆ ಸಂಬಂಧಿಸಿದ  ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ರಸ್ತೆ ಕಾಮಗಾರಿ, ಚರಂಡಿ ಕಾಮಗಾರಿ, ಪೆವರ್ಸ್ ಜೋಡಣೆ ಇತ್ಯಾದಿ ಕಾಮಗಾರಿಗಳನ್ನು ಮಾಡಿಕೊಡಬೇಕೆಂದು ಊರಿನ ಪ್ರಮುಖರು ಮತ್ತು ಸ್ವಾಮಿಗಳು ಸೇರಿಕೊಂಡು ಗ್ರಾಮೀಣ ಅಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ  2020-21 ನೇ ಸಾಲಿನಲ್ಲಿ ವಿನಂತಿಸಿಕೊಂಡಿದ್ದರು.

Big Shocking- “ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಅವರಿಗೆ ಶಿಕ್ಷೆ ಆಗಬೇಕು” ಸಂದೇಶ ಕಳುಹಿಸಿ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಿಂದೂಪರ ಸಂಘಟನೆಗಳಲ್ಲೂ ಗುರುತಿಸಿಕೊಂಡ ಗುತ್ತಿಗೆದಾರ – ವಾರದ ಹಿಂದೆ 40% ಕಮಿಷನ್ ಆರೋಪ ಮಾಡಿ ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದಿದ್ದ ಗುತ್ತಿಗೆದಾರ

ಈ ಸಂದರ್ಭ ಸಚಿವರು (ಕೆ.ಎಸ್ ಈಶ್ವರಪ್ಪನವರು)  ಸಂತೋಷ್‌ ಪಾಟೀಲ್‌ ಬಳಿ ನೀವು ನಮ್ಮ ಕಾರ್ಯಕರ್ತರು ಇದ್ದೀರಿ, ನೀವು ಕೆಲಸ ಶುರು ಮಾಡಿ, ಕಾಮಗಾರಿಗಳಿಗೆ ಎಷ್ಟೇ ಹಣ ಆದರೂ ಪರವಾಗಿಲ್ಲಾ ಕೆಲಸ ಶುರು ಮಾಡಿ ಎಂದು ಈಶ್ವರಪ್ಪ ತಿಳಿಸಿದ್ದರು.

ಊರಿಗೆ ಹಿಂದಿರುಗಿದ ಪ್ರಮುಖರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಸಂತೋಪ್ ಪಾಟೀಲ್ ಅವರಿಗೆ ಕೆಲಸ ಪ್ರಾರಂಭಿಸಲು ತಿಳಿಸಿರುತ್ತಾರೆ. ಅದರಂತೆ ಸಂತೋಷ್ ಪಾಟೀಲ್ ಮತ್ತು ಉಳಿದ ಗುತ್ತಿಗೆದಾರರು ಸೇರಿಕೊಂಡು ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 4 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಯನ್ನು ಸ್ವಂತ ಹಣದಿಂದ ಹಾಗೂ ಇತರರ ಸಹಾಯದಿಂದ ಪೂರ್ಣಗೊಳಿಸಿರುತ್ತಾರೆ. ‌

ಸದ್ರಿ ಕಾಮಗಾರಿಗಳ ಬಿಲ್ ಗಾಗಿ ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ಅವರ ಆಪ್ತರಾದ ಬಸವರಾಜ್ ಮತ್ತು ರಮೇಶ್ ಅವರನ್ನು ಹಲವು ಸಾರಿ ಭೇಟಿಯಾಗಿ ಕೆಲಸ ಪೂರ್ಣಗೊಳಿಸಿದ್ದೇವೆ  ಬಿಲ್ಲನ್ನು ಮಂಜೂರು ಮಾಡಲು ವಿನಂತಿಸಿಕೊಂಡಿರುತ್ತಾರೆ. ಆದರೆ ಅವರೆಲ್ಲರೂ ಹಾಗೆ ಕೆಲಸ ಆಗುವುದಿಲ್ಲಾ 40 ಪರ್ಸೆಂಟ್ ಕಮೀಷನ್ ನೀಡಿದರೆ ಬಿಲ್ ಪಾಸ್ ಮಾಡಿಸುವುದಾಗಿ ಹೇಳಿದ್ದರು.

ಈ ಕಮೀಷನ್ ವಿಷಯ ಕುರಿತು ಬೆಳಗಾವಿ ಗುತ್ತಿಗೆದಾರರ ಸಂಘದವರು ಸರಕಾರಕ್ಕೆ ದೂರು ಸಲ್ಲಿಸಿರುತ್ತಾರೆ. ಅದೇ ರೀತಿ ಗುತ್ತಿಗೆದಾರರಾದ ಸಂತೋಷ್ ಪಾಟೀಲ್ ಮಾರ್ಚ್ ತಿಂಗಳಿನಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ ಇವರು 40 ಪರ್ಸೆಂಟ್ ಕಮೀಷನ್ ಗೆ ಬೇಡಿಕೆ ಇಟ್ಟಿದ್ದಾರೆಂದು ಮಾದ್ಯಮಗಳಲ್ಲಿ ಆರೋಪಿಸಿದ್ದರು.‌

ಕಾಮಗಾರಿಗಳ ಬಿಲ್ಲ ವಿಷಯವಾಗಿ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿಯಾಗಿ ಬಿಲ್ ಪಾಸ್ ಮಾಡಿಸಲು ಹೋಗುತ್ತಿದ್ದೇನೆಂದು ತನ್ನ ಪತ್ನಿ ಹಾಗು ಇತರರೊಂದಿಗೂ ತಿಳಿಸುತ್ತಿದ್ದರು. ಇದೇ ಬಿಲ್ ಪಾಸ್ ಆಗದ ಕಾರಣ ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ಅವರ ಆಪ್ತರಾದ ರಮೇಶ್ ಮತ್ತು ಬಸವರಾಜ್ ವಿರುದ್ಧ ವಿಡಿಯೋ ಫೂಟೇಜ್ ಮುಖೇನ 4 ಕೋಟಿ ಕಾಮಗಾರಿ ಹಣದ ಬಿಲ್ ನ್ನು ಪಾಸ್ ಮಾಡದ ಕಾರಣ ಮುಂದೆ ಆಗುವ ಅನಾಹುತಕ್ಕೆ ನೀವೇ ಕಾರಣರಾಗಿರುತ್ತೀರಿ ಎಂದು ಮಾಧ್ಯಮಗಳ ಮೂಲಕ ವಿಷಯ ಪ್ರಸ್ತಾಪಿಸಿರುತ್ತಾರೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ರಾಜಿನಾಮೆ ಕೇಳಿದ್ದ ಬಿಜೆಪಿಗೆ ತಿರುಗುಬಾಣವಾದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆ ಪ್ರಕರಣ – ಚುನಾವಣೆಯ ಹೊಸ್ತಿಲಲ್ಲಿ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ ..!

ಸಂತೋಷ್‌ ಅವರು ಅನೇಕ ರೀತಿಯ ರಸ್ತೆ ಕಾಮಗಾರಿಗಳಿಗೆ ಹಣ ಹಾಕಿದ್ದರಿಂದ ಅಡಚಣೆಯಾಗಿ 40 ಪರ್ಸೆಂಟ್ ಕಮೀಷನ್ ವಿಷಯದ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರಿಗೆ ಹಾಗೂ ದೆಹಲಿ ಬಿಜೆಪಿ ವರಿಷ್ಟರಿಗೆ, ಪ್ರಧಾನ ಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಬಿಲ್ ಪಾಸು ಮಾಡದ ಹಾಗೂ 40 ಪರ್ಸೆಂಟ್ ಕಮೀಷನ್ ಕುರಿತು ಮನವಿ ಸಲ್ಲಿಸಿದ್ದಾರೆ. ಆದರೂ ಸಹ ಬಿಲ್ ಪಾಸ್ ಆಗಿರುವುದಿಲ್ಲ.

ಅದೇ ವಿಷಯದಲ್ಲಿ ಸಂತೋಪ್ ಪಾಟೀಲ್ ಆರೋಪಿಗಳಾದ ಕೆ.ಎಸ್ ಈಶ್ವರಪ್ಪ ಹಾಗೂ ಅವರ ಆಪ್ತರಾದ ರಮೇಶ್ ಮತ್ತು ಬಸವರಾಜ್ ವಿರುದ್ಧ ಮನನೊಂದು ತನ್ನ ಮೊಬೈಲಿನಿಂದ ವಾಟ್ಸಪ್‌ ಡೆತ್ ನೋಟ್ ಸಂದೇಶವನ್ನು ಮಾಧ್ಯಮಗಳಿಗೆ ಮತ್ತು ಆಪ್ತರಿಗೆ ಕಳುಹಿಸಿರುವುದಾಗಿ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ನಿಗೂಢ ಸಾವು

  ಸಂತೋಷ್ ಪಾಟೀಲ್ ಗುತ್ತಿಗೆ ಕಾಮಗಾರಿಯ ಬಿಲ್‌ ಪಾಸ್‌ ಗೆ ಸಂಬಂಧಿಸಿದಂತೆ  ಸಚಿವ ಈಶ್ವರಪ್ಪ ವಿರುದ್ಧ 40% ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೆಲ ತಿಂಗಳ ಹಿಂದೆ ಸುದ್ದಿಯಾಗಿದ್ದರು. ಅವರ ಆರೋಪವನ್ನು ತಳ್ಳಿಹಾಕಿದ್ದ ಹಿರಿಯ ಸಚಿವ ಈಶ್ವರಪ್ಪ ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗಲೇ ಸಂತೋಷ್ ಪಾಟೀಲ್ ನಿನ್ನೆ ಏಪ್ರಿಲ್ 12ರಂದು ಉಡುಪಿಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

 ಸಂತೋಷ್‌ ಮೃತ ದೇಹ ಲಾಡ್ಜ್‌ ನಲ್ಲಿ ಪತ್ತೆಯಾಗುವ ಸ್ವಲ್ಪ ಸಮಯದ ಮೊದಲು ಅವರ ಮೊಬೈಲ್‌ ನಂಬರ್‌ ನಿಂದ “ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬ ಸಂದೇಶ ವೊಂದು ಅವರ ಪರಿಚಿತ  ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ ಗೆ ಬಂದಿತ್ತು.  

ಶಾಂಭವಿ ಲಾಡ್ಜ್ ಗೆ ಎಫ್ಎಸ್ಎಲ್ ತಂಡ:

 ಸಂತೋಷ್ ಪಾಟೀಲ್ ಮೃತದೇಹವಿರುವ ಉಡುಪಿಯ ಶಾಂಭವಿ ಲಾಡ್ಜ್ ಗೆ ಇದೀಗ ಮಂಗಳೂರಿನಿಂದ ಎಫ್ಎಸ್ಎಲ್ ತಂಡ ಬಂದಿದ್ದು, ಇಂದು ಮಧ್ಯಾಹ್ನ ನಂತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆಯಿದೆ

Ad Widget
Click to comment

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!