ಶಿಕ್ಷಣ
Vidyamata-ಇಂದಿನಿಂದ ವಿದ್ಯಾಮಾತಾ ಅಕಾಡೆಮಿಯಲ್ಲಿ SCDCC ಬ್ಯಾಂಕ್ ಪರೀಕ್ಷಾ ತರಬೇತಿ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾ. 9ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಯ ತರಬೇತಿಯು ಆನ್ಲೈನ್ ಮೂಲಕ ಫೆ.27ರಂದು ಪ್ರಾರಂಭವಾಗಲಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾ. 9ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಯ ತರಬೇತಿಯು ಆನ್ಲೈನ್ ಮೂಲಕ ಫೆ.27ರಂದು ಪ್ರಾರಂಭವಾಗಲಿದೆ.
ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆ ತರಬೇತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ಅಕಾಡೆಮಿಯಲ್ಲಿ ದೊರೆಯಲಿದೆ.
ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು, ಸುಳ್ಯ ಕಚೇರಿಗೆ ಭೇಟಿ ನೀಡಬಹುದು ಅಥವಾ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ : 9148935808 / 9620468869.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ17 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ17 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು19 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized10 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ13 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ




















