ಉಡುಪಿ
Heat wave-ಮುಂದಿನ ಒಂದು ವಾರ ದಕ, ಉಡುಪಿ ಜಿಲ್ಲೆಯಲ್ಲಿ ಉಷ್ಣಅಲೆ; ಆರೋಗ್ಯ ರಕ್ಷಣೆಗೆ ಹವಾಮಾನ ಇಲಾಖೆ ನೀಡಿದೆ ಹಲವು ಸಲಹೆ
ಕರ್ನಾಟಕದ ಕರಾವಳಿಯಲ್ಲಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.
ಕರ್ನಾಟಕದ ಕರಾವಳಿಯಲ್ಲಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ.
ಕಾರವಾರ, ಪಣಂಬೂರು, ಮಂಗಳೂರು, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ, ಮೈಸೂರು, ಮಂಡ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗಿದೆ. ಚಾಮರಾಜನಗರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೆಚ್ಚಿನ ತಾಪಮಾನ, ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಶಾಖ ಅಲೆಯು ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮವನ್ನುಂಟುಮಾಡುತ್ತದೆ.
ಶಿಶುಗಳು, ದುರ್ಬಲರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.
ಮಧ್ಯಾಹ್ನ 12 ರಿಂದ 3ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು. ಅಲ್ಲದೇ ಬಾಯಾರಿಕೆ ಇಲ್ಲದಿದ್ದರೂ ಕೂಡ ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ , ಸಡಿಲವಾದ ಬಟ್ಟೆ ಧರಿಸಬೇಕು, ತಲೆಗೆ ಬಿಸಿಲ ಶಾಖ ತಾಕದಂತೆ ನೋಡಿಕೊಳ್ಳಬೇಕು.
ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಕೊಡಬೇಕು.. ನಿಮ್ಮನ್ನು ಹೈಡ್ರೇಟ್ ಆಗಿರಿಸಿಕೊಳ್ಳಲು ಒಆರ್ಎಸ್ ಅಥವಾ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು ಇತ್ಯಾದಿಗಳನ್ನು ಕುಡಿಯಿರಿ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















