ಆರೋಗ್ಯ
Plastic-ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಕೆ ಪತ್ತೆ; ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಸಚಿವ ಗುಂಡೂರಾವ್
ಇಡ್ಲಿ ಬೇಯಿಸಲು ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರು : ಇಡ್ಲಿ ಬೇಯಿಸಲು ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಅವರು ತಿಳಿಸಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದ್ದು, ರಾಜ್ಯದಲ್ಲಿ ಆಹಾರ ಬೇಯಿಸಲು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುವುದು.
ಹಸಿರು ಬಟಾಣಿಗಳಲ್ಲಿ ರಾಸಾಯನಿಕ ಬಳಕೆ ಕುರಿತು 31 ಮಾದರಿ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 26 ಅಸುರಕ್ಷಿತ ಎಂದು ದೃಢಪಟ್ಟಿದೆ ಎಂದರು.
ಈ ವರ್ಷದ ಜನವರಿಯಿಂದ ವಿವಿಧ ಹೋಟೆಲ್, ಮಳಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಬಳಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 26 ಮಾದರಿ ಅಸುರಕ್ಷಿತ ಹಾಗೂ 28 ತೀರಾ ಕಳಪೆ ಎಂಬುದು ತಿಳಿದುಬಂದಿದೆ.
ಜನವರಿಯಲ್ಲಿ 681 ರಷ್ಟು ಇಡ್ಲಿ ಮಾದರಿ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆ ನಿಷೇಧಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಮಂಗಳೂರು20 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ19 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized21 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು15 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















