Connect with us

ಕಾರ್ಯಕ್ರಮಗಳು

Puttur-ಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್.ಸಿ.ಆರ್. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ. ಎಂ. ಎನ್. ಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ನ ನೂತನ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟುಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರು ಬಂಟರ ಭವನದಲ್ಲಿ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಬೇಗ ಯಶಸ್ವಿ ಲಭಿಸುತ್ತದೆ. ಕೃಷಿಕರ ಆರ್ಥಿಕ ಸ್ಥಿತಿ ಸದೃಢಗೊಳಿಸುವಲ್ಲಿ ಸಹಕಾರಿ ಸಂಘಗಳು ಬಹಳಷ್ಪು ಸಹಕಾರಿಯಾಗಿದೆ. ಸಹಕಾರಿಯಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದಾಗ ಸಹಕಾರಿ ಉತ್ತಮವಾಗಿ ಬೆಳೆಯುತ್ತದೆ. ಸಹಕಾರ ಕ್ಷೇತ್ರದ ವಿವಿಧ ಮಜಲುಗಳಲ್ಲಿ ಸೇವೆಯನ್ನು ನೀಡಿದ ರಾಜೇಂದ್ರ ಕುಮಾರ್ ಕೇಂದ್ರ ಸಹಕಾರಿ ಬ್ಯಾಂಕನ್ನು ಉತ್ತುಂಗಕ್ಕೇರಿಸುವಲ್ಲಿ ದೊಡ್ಡ ಪಾತ್ರವಹಿದ್ದಾರೆ. ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಸಹಕಾರಿ ಕ್ಷೇತ್ರ ಬಲಿಷ್ಠ ಗೊಳ್ಳಲು ಸಾಧ್ಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರು ಬಂಟರ ಭವನದಲ್ಲಿ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ಅವಹಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ತಾವು ಬೆಳೆಯುವ ಜತೆಗೆ ಸಮಾಜವನ್ನು ಬೆಳೆಸುವ ಕಾರ್ಯ ಮಾಡಿದವರು ರಾಜೇಂದ್ರ ಕುಮಾರ್. ಆರ್ಥಿಕವಾಗಿ ರೈತರು ಮುಂದೆ ಬರಬೇಕಾಗಿದ್ದು, ಸರಕಾರದ ಸಹಕಾರಗಳು ಅಗತ್ಯವಿದೆ. ಸಹಕಾರಿಯ ನಡಿಗೆಗೆ ಸರ್ಕಾರಗಳು ಸ್ಪಂದಿಸುವ ಕೆಲಸ ಮಾಡುತ್ತಿದೆ. ಬ್ಯಾಂಕ್ ಗಳು ಬೆಳೆಯಬೇಕಾಗಿದ್ದರೆ, ಊರಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಉದ್ಯೋಗ ಸೃಷ್ಠಿಯಾಗುವ ಕಾರ್ಯವಾಗಬೇಕಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುವುದರಿಂದ ಊರಿನ ಜನರಿಗೆ ವ್ಯವಹಾರ ನಡೆಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್.ಸಿ.ಆರ್. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೋಟ್ಟು ಅವರನ್ನು ಅಭಿನಂದಿಸಲಾಯಿತು. ಸಹಕಾರಿ ಯೂನಿಯನ್ ನಿರ್ದೇಶಕರಾದ ವಿಷ್ಣು ಭಟ್ ಮೂಲೆತೋಟ, ಮಂಜುನಾಥ್ ಎನ್. ಎಸ್., ಸತೀಶ್ ಕಾಶಿಪಟ್ನ, ಪ್ರವೀಣ್ ಗಿಲ್ಬರ್ಟ್ ಡಿಸೋಜ ಅವರನ್ನು ಗೌರವಿಸಲಾಯಿತು. ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಡಾ. ಶಾಮ್ ಭಟ್ ಅಭಿನಂದಿಸಿದರು. ಅಭಿನಂದನಾ ಭಾಷಣವನ್ನು ಮಂಗಳೂರು ಮಾಜಿ ಸಂಸದ ನಡೆಸಿದರು.

Ad Widget

Ad Widget

ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ಮಾಸ್ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು, ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಅಭಿನಂದನಾ ಸಮತಿ ಗೌರವ ಸಲಹೆಗಾರ ನನ್ಯ ಅಚ್ಚುತ ಮೂಡತ್ತಾಯ, ಸಂಚಾಲಕರಾದ ಎಸ್. ಎನ್. ಮನ್ಮಥ, ಕುಶಾಲಪ್ಪ ಗೌಡ ಪೂವಾಜೆ, ಕೆ. ಗೋಪಾಲಕೃಷ್ಣ ಭಟ್, ಪ್ರಕಾಶ್ಚಂದ್ರ ರೈ, ಸಂತೋಷ್ ಕುತ್ತಮೊಟ್ಟೆ, ಗಣೇಶ್ ಉದನಡ್ಕ, ರಾಘವೇಂದ್ರ ನಾಯಕ್, ಹರೀಶ್ ರೈ ಪಿ ಮತ್ತಿತರರು ಉಪಸ್ಥಿತರಿದ್ದರು.

ಅಪೇಕ್ಷ ಪೈ ಪ್ರಾರ್ಥಿಸಿದರು. ಅಭಿನಂದನಾ ಸಮಿತಿ ಅಧ್ಯಕ್ಷ ಎಸ್. ಬಿ. ಜಯರಾಮ ರೈ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯದರ್ಶಿ ಜಯಪ್ರಕಾಶ್ ರೈ ಸಿ. ವಂದಿಸಿದರು. ರಾಕೇಶ್ ರೈ ಕೆಡೆಂಜಿ, ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Silver Jubilee-ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ: ಡಿ.26ರಂದು ಬೆಳ್ಳಿಹಬ್ಬ ʻರಜತ ರಶ್ಮಿʼ; ಜ ಸಮಾಲೋಚನಾ ಸಭೆಯಲ್ಲಿ ಸವಣೂರು ಸೀತಾರಾಮ ರೈ ಘೋಷಣೆ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ನ. 24 ರಂದು ಸಂಸ್ಥೆಯ ಸಭಾಂಗಣದಲ್ಲಿ ಬೆಳ್ಳಿಹಬ್ಬ ಆಚರಣೆಯ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಮ್ಮ ಸಂಸ್ಥೆಯು 2001 ಮೇ 23 ರಂದು ಪ್ರಾರಂಭಗೊಂಡಿತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಅಂಗ್ಗಮಾಧ್ಯಮ ಶಿಕ್ಷಣದೊಂದಿಗೆ ಸಕಲ ಸೌಲಭ್ಯಗಳನ್ನು ಒಳಗೊಂಡ ವ್ಯವಸ್ಥೆಯನ್ನು ನೀಡುವುದರ ಜೊತೆಗೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳು ಕಲಿಕೆಗೆ ಇಲ್ಲಿಗೆ ಆಗಮಿಸಿ, ಉತ್ತಮ ಶಿಕ್ಷಣ ಪಡೆದು, ಇಂದು ದೇಶ-ವಿದೇಶಗಳಲ್ಲಿ ಉನ್ನತವಾದ ಹುದ್ದೆಗಳಲ್ಲಿ ಇದ್ದಾರೆ. ಇದು ನಮಗೆ ತುಂಬಾ ಸಂತೋಷದ ವಿಚಾರ, ಸಂಸ್ಥೆಯ ಬೆಳ್ಳಿಹಬ್ಬವನ್ನು ಅರ್ಥಪೂರ್ಣ ಕಾರ್‍ಯಕ್ರಮವಾಗಿ ರೂಪಿಸುವ ನಿಟ್ಟಿನಲ್ಲಿ ದ. 26 ರಂದು ಬೆಳಿಗ್ಗೆ ಸವಣೂರು ಬಸದಿ ವಠಾರದಿಂದ ಮುಖ್ಯರಸ್ತೆಯಾಗಿ ಸಂಸ್ಥೆಯ ವಠಾರಕ್ಕೆ ಅದ್ದೂರಿಯಾದ ಮೆರವಣಿಗೆಯನ್ನು ಆಯೋಜಿಸಲಿವೆ.

Ad Widget

Ad Widget <> Ad Widget

ಬಳಿಕ ಸಭಾ ಕಾರ್‍ಯಕ್ರಮ, ಸಾಂಸ್ಕೃತಿಕ ವೈವಿಧ್ಯಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಿವೆ ಎಂದು ಹೇಳಿದರು.

ವೈವಿಧ್ಯಮಯ 40 ಸ್ಟಾಲ್‌ಗಳು: ರಜತ ಸಂಭ್ರಮದ ನಿಟ್ಟಿನಲ್ಲಿ ನಾವು ಸಂಸ್ಥೆಯ ಅವರಣದಲ್ಲಿ 40 ಬಗೆಯ ವಿವಿಧ ಸ್ಟಾಲ್‌ಗಳನ್ನು ಹಾಕಲಿವೆ. ಈ ಸ್ಟಾಲ್‌ನಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಅನೇಕ ಬಗೆಯ ವಸ್ತುಗಳ ಮಾರಾಟ, ಪ್ರದರ್ಶನ ಇರಲಿದೆ ಎಂದು ಸೀತಾರಾಮ ರೈ ತಿಳಿಸಿದರು.

Ad Widget

Ad Widget

ಮಾದರಿ ಕಾರ್‍ಯಕ್ರಮ ಆಗಬೇಕು-ಬಾಲ್ಯೊಟ್ಟು: `ರಜತರಶ್ಮಿ’ ಕಾರ್‍ಯಕ್ರಮದ ಗೌರವಾಧ್ಯಕ್ಷ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಮಾತನಾಡಿ ಕಾರ್‍ಯಕ್ರಮ ಸಂಘಟಿಸುವುದರಲ್ಲಿ ಸೀತಾರಾಮ ರೈ ಅವರು ಬಹಳಷ್ಟು ಹೆಸರನ್ನು ಪಡೆದಿದ್ದಾರೆ, ವಿದ್ಯಾರಶ್ಮಿ ವಿದ್ಯಾಲಯ ಮತ್ತು ಆದರ್ಶ ವಿವಿಧೋzಶ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸಿರುವ ಸೀತಾರಾಮ ರೈ ಅವರನ್ನು ವಿದ್ಯಾರಶ್ಮಿ ಸಂಸ್ಥೆಯ ರಜತ ಸಂಭ್ರಮ ಕಾರ್‍ಯಕ್ರಮದಲ್ಲಿ ಸವಣೂರು ಬಸದಿ ವಠಾರದಿಂದ ವಿದ್ಯಾರಶ್ಮಿ ವಿದ್ಯಾಲಯದ ತನಕ ರಥದ ಮೂಲಕ ವೈಭವಯುತವಾದ ಮೆರವಣಿಗೆಯಲ್ಲಿ ಕರೆತರಲಾಗುವುದು, ಮೆರವಣಿಗೆಯನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಗುವುದು.

ಕಲ್ಲಡ್ಕಗೊಂಬೆಗಳ ಕುಣಿತದೊಂದಿಗೆ ಮೆರವಣಿಗೆಯ ಮೆರಗು ಹೆಚ್ಚಲಿದೆ ಎಂದರು. ಸೀತಾರಾಮ ರೈ ಓರ್ವ ಸಾಧಕರು, ಅವರ ನೇತೃತೃದಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿಹಬ್ಬ ಮಾದರಿ ಕಾರ್‍ಯಕ್ರಮವಾಗಬೇಕು ಎಂದು ಬಾಲ್ಯೊಟ್ಟು ಹೇಳಿದರು.

ನ್ಯಾಯವಾದಿ ಎನ್.ಜಯಪ್ರಕಾಶ್ ರೈ ಸುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಪ್ರಮುಖರಾದ ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯ, ಸುದರ್ಶನ್ ನಾಕ್ ಕಂಪ, ಕುಸುಮಾ ಶೆಟ್ಟಿ ಕೆರೆಕ್ಕೋಡಿ, ಸುರೇಶ್ ರೈ ಸೂಡಿಮುಳ್ಳು, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ರಾಜಲಕ್ಷ್ಮಿ ಎಸ್ ರೈ, ಸಂಸ್ಥೆಯ ರಕ್ಷಕ-ಶಿಕ್ಷಕ ಅಧ್ಯಕ್ಷ ಡಾ. ಜೀವನ್ ಪ್ರಕಾಶ್ ರೈ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಸ್ವಾಗತಿಸಿ, ಉಪನ್ಯಾಸಕಿ ಕಸ್ತೂರಿ ವಂದಿಸಿದರು. ಶಿಕ್ಷಕಿ ಚೇತನಾ ಕಾರ್‍ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರತಿಭಾ ಸ್ಮರಣ ಸಂಚಿಕೆ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಜಿ.ಪಂ, ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಸವಣೂರು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಸವಣೂರು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಸತೀಶ್ ಬಲ್ಯಾಯ ಕನ್ನಡಕುಮೇರು, ಸವಣೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಂಗೀತ ಪ್ರತಿಭೆ ಅಖಿಲಾ ನೆಕ್ರಾಜೆ, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ರಜತ ರಶ್ಮಿ ಊರಿನ ಹಬ್ಬ
ವಿದ್ಯಾರಶ್ಮಿ ವಿದ್ಯಾಲಯದ ರಜತ ಸಂಭ್ರಮದ ಬೆಳ್ಳಿಹಬ್ಬ `ರಜತ ರಶ್ಮಿ’ ದ. 26 ರಂದು ದಿನಪೂರ್ತಿ ಅದ್ದೂರಿಯಾಗಿ ನಡೆಯಲಿದೆ. ಈ ಸುಂದರವಾದ ಕಾರ್‍ಯಕ್ರಮ ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಊರ-ಪರವೂರ ಹಿತೈಷಿಗಳ ಪೂರ್ಣ ಸಹಕಾರ ಅಗತ್ಯ ಇದೆ. ರಜತ ರಶ್ಮಿ ಕಾರ್‍ಯಕ್ರಮ ಊರಿನ ಹಬ್ಬದಂತೆ ಆಗಲಿದೆ.
-ಸವಣೂರು ಸೀತಾರಾಮ ರೈ, ಸಂಚಾಲಕರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್‌ ಸಹಿತ ಹಲವು ಸೇವೆಗಳು

Published

on

Ad Widget

Ad Widget

Ad Widget

Ad Widget

ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ ಎಂದು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ನಿರ್ಮಾಣ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಪಯಣ ನಡೆಸಿರುವ ಸಂಸ್ಥೆಯು ಆರಂಭದಲ್ಲಿ ಪಡೀಲು ಬಾಳಪ್ಪ ಕಾಂಪ್ಲೆಕ್ಸ್, ಬೊಳುವಾರು, ಕಬಕ ಹಾಗೂ ಸರ್ಕಾರಿ ನೌಕರರ ಕಟ್ಟಡದಲ್ಲಿ ಕಚೇರಿ ಹೊಂದಿ ಕಾರ್ಯಾಚರಿಸುತ್ತಿತ್ತು. ಇದೀಗ ಸ್ವಂತ ಕಟ್ಟಡದಲ್ಲಿ ಸಂಸ್ಥೆಯ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರ. ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

Ad Widget

Ad Widget <> Ad Widget

ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ
ನೂತನ ವಾಣಿಜ್ಯ ಸೌಧದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಿಕ್ಷಣ ಕರ್ಮಯೋಗಿ ಪದ್ಮಶ್ರೀ ಡಾ. ಹರೇಕಳ ಹಾಜಬ್ಬ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಮಾಸ್ಟರ್ ಪ್ಲಾನರಿ ಸಂಸ್ಥೆಯ ಎಸ್.ಕೆ. ಆನಂದ ಕುಮಾರ್, ಹಿರಿಯ ಉದ್ಯಮಿ ಮಂಜುನಾಥ್ ನಾಯಕ್, ಐಶ್ವರ್ಯ ಕನ್‌ಸ್ಟ್ರಕ್ಷನ್‌ನ ರಘುರಾಮ ಭಟ್ ಉಪ್ಪಂಗಳ, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೋ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಎ.ಬಿ. ಹಾಗೂ ಹೋಟೆಲ್ ಅಶ್ವಿನಿ ಮಾಲಕ ಕರುಣಾಕರ ರೈ ದೇರ್ಲ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಗೋಪಾಲಕೃಷ್ಣ ಭಟ್ ವಿವರಿಸಿದರು.

‘ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್’ ಪ್ರಮುಖ ಆಕರ್ಷಣೆ
ನಾಲ್ಕು ಅಂತಸ್ತಿನ ಈ ವಾಣಿಜ್ಯ ಸೌಧದ ನೆಲಹಂತ ಹಾಗೂ ಮೊದಲ ಮಹಡಿಯಲ್ಲಿ ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್ ಕಾರ್ಯಾಚರಿಸಲಿದೆ. ಇಲ್ಲಿ ದ್ವಾರಕಾ ಹಾಲಿನ ಉತ್ಪನ್ನಗಳು, ತರಕಾರಿ, ದಿನಸಿ ಸಾಮಗ್ರಿಗಳು, ಹಣ್ಣು, ಚಾಟ್ಸ್, ಜ್ಯೂಸ್, ಕೂಲ್‌ಝೋನ್, ಬೇಕರಿ ತಿನಿಸುಗಳು, ಸ್ಟೇಶನರಿ ಸೇರಿದಂತೆ ಗ್ರಾಹಕರ ನಿತ್ಯ ಬಳಕೆಯ ನೂರಾರು ವಸ್ತುಗಳು ಮಿತದರದಲ್ಲಿ ಲಭ್ಯವಾಗಲಿವೆ.

Ad Widget

Ad Widget

ಎರಡನೇ ಮಹಡಿಯಲ್ಲಿ ಹಾರ್ಡ್‌ವೇರ್, ಸ್ಯಾನಿಟರಿ, ಟೈಲ್ಸ್, ಪೇಂಟ್ಸ್, ಯುನಿಸೆಕ್ಸ್ ಸಲೂನ್, ಡೆಂಟಲ್ ಕ್ಲಿನಿಕ್, ಸಾಫ್ಟ್‌ವೇರ್ ಸಂಸ್ಥೆ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿ ಹಾಗೂ ಟೆಕ್ಸ್‌ಟೈಲ್ಸ್ ಮಳಿಗೆಗಳು ಕಾರ್ಯನಿರ್ವಹಿಸಲಿವೆ.

ಮೂರನೇ ಮಹಡಿಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಪ್ರಧಾನ ಕಚೇರಿ ಇರಲಿದ್ದು, ನಾಲ್ಕನೇ ಮಹಡಿಯಲ್ಲಿ ಸುಮಾರು 200 ಮಂದಿ ಆಸೀನರಾಗಬಹುದಾದ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ.

ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕಟ್ಟಡ
ಗ್ರಾಹಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 20 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಟ್ಟಡದಲ್ಲಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!