ನಿಧನ ವಾರ್ತೆ
Belthangady-ಬೆಳ್ತಂಗಡಿ: ನವವಿವಾಹಿತೆ ನೇಣುಬಿಗಿದು ಆತ್ಮಹತ್ಯೆ
ಕಣಿಯೂರು ನಿವಾಸಿ, ನವವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶರವರ ಪತ್ನಿ ಪೂಜಾಶ್ರೀ (23 ವ.) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಬೆಳ್ತಂಗಡಿ, ಮಾ.3: ಕಣಿಯೂರು ನಿವಾಸಿ, ನವವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶರವರ ಪತ್ನಿ ಪೂಜಾಶ್ರೀ (23 ವ.) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಅಲ್ಲಿ ಮಾ.1ರಂದು ಪೂಜಾ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾರವರು ಮೂಲತ: ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿ.
ನಿಧನ ವಾರ್ತೆ
Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.
ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.
ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.
ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಬಿಗ್ ನ್ಯೂಸ್11 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ10 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ9 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ8 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ10 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ10 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ಅಂತರ ರಾಜ್ಯ8 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸುಳ್ಯ5 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

















