ಸ್ಥಳೀಯ
Gejjegiri-ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಸಾವಿರಾರು ಮಾತೆಯರಿಂದ ‘ಅಮ್ಮನ ಮಡಿಲ ಪ್ರಸಾದ’ ಸ್ವೀಕಾರ
ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ-ಚೆನ್ನಯರ ಮೂಲಸ್ಥಾನವಾದ ನಂದನಬಿತ್ತಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಮಾ.2ರಂದು ವಿಜೃಂಭಣೆಯಿಂದ ಜರಗಿತು.
ಬಡಗನ್ನೂರು: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ-ಚೆನ್ನಯರ ಮೂಲಸ್ಥಾನವಾದ ನಂದನಬಿತ್ತಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಮಾ.2ರಂದು ವಿಜೃಂಭಣೆಯಿಂದ ಜರಗಿತು.
ಜಾತ್ರಾ ಮಹೋತ್ಸವದಲ್ಲಿ ಊರ-ಪರವೂರಿನ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ವಿಶೇಷವಾಗಿ ದಕ್ಷಿಣ ಭಾರತದಲ್ಲೇ ಪ್ರಥಮ ಬಾರಿಗೆ ನಡೆದ ಅಮ್ಮನ ಮಡಿಲ ಪ್ರಸಾದ’ ಕಾರ್ಯಕ್ರಮ ಕ್ಷೇತ್ರದ ಸತ್ಯಧರ್ಮ ಚಾವಡಿಯಲ್ಲಿ ನಡೆಯಿತು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಸಾವಿರಾರು ಮಾತೆಯರು ಅಮ್ಮನ ಮಡಿಲ ಪ್ರಸಾದ ಸ್ವೀಕರಿಸಿ ಪಾವನರಾದರು.
ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ಮೂಡಬಿದ್ರೆ ಶಿವಾನಂದ ತಂತ್ರಿಯವರ ನೇತೃತ್ವದಲ್ಲಿ ಗಣಪತಿ ಹೋಮ, ಗುರುಪೂಜೆ, ತೋರಣ ಮುಹೂರ್ತ, ನಾಗದೇವರ ಸಾನಿಧ್ಯದಲ್ಲಿ ಗಣಹೋಮ, ನವಕ ಕಲಶಾಭಿಷೇಕ, ಆಶ್ಲೇಷ ಬಲಿ ಸೇವೆ ನಡೆದು ಮಂಗಳಾರತಿ, ಧೂಮವತಿ ಸಾನಿಧ್ಯ ಹಾಗೂ ಎಲ್ಲಾ ಪರಿವಾರಗಳ ಸಾನಿಧ್ಯದಲ್ಲಿ ಶುದ್ದಿ ನವಕ ಕಲಶಾಭಿಷೇಕ ನಡೆಯಿತು.

ಬೆಳಿಗ್ಗೆ 11.18ರ ವೃಷಭ ಲಗ್ನದಲ್ಲಿ ಧ್ವಜಾರೋಹಣ, ಪರ್ವ ಸೇವೆ, ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. 12 ಗಂಟೆಯಿಂದ ಅಮ್ಮನ ಮಡಿಲ ಪ್ರಸಾದ ವಿತರಣೆ ಆರಂಭಗೊಂಡಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಧೂಮಾವತಿ ಬಲಿ ಉತ್ಸವ, ಧರ್ಮಚಾವಡಿಯಲ್ಲಿ ಭಗವತಿ ಸೇವೆ, ಮಹಾಪೂಜೆ ನಡೆಯಿತು.
ಇತಿಹಾಸದಲ್ಲೇ ಮೊದಲಬಾರಿ ಅಮ್ಮನ ಮಡಿಲ ಪ್ರಸಾದ ವಿತರಣೆ:
ಗೆಜ್ಜೆಗಿರಿ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಮಾಡಿದರೆ ನೋವು-ಕಷ್ಟಗಳು ಮಾಯವಾಗುತ್ತದೆ. ಶರೀರಕ್ಕೆ ಬಂದಿರುವ ರೋಗ ರುಜಿನಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಅದರಂತೆ ಕ್ಷೇತ್ರದಲ್ಲಿ ಆರಾಧಿಸುತ್ತಿರುವ ಮಾತೆ ದೇಯಿ ಬೈದೈತಿ ಅಮ್ಮನ ಆಶೀರ್ವಾದ ರೂಪದಲ್ಲಿ ಮಡಿಲು ತುಂಬಿಸುವ ಕಾರ್ಯಕ್ರಮ ಅಮ್ಮನ ಮಡಿಲ ಪ್ರಸಾದ ವಿತರಣೆ ಸತ್ಯ ಧರ್ಮ ಚಾವಡಿಯಲ್ಲಿ ನಡೆಯಿತು.
ದಕ್ಷಿಣ ಭಾರತದ ಇತಿಹಾಸದಲ್ಲೇ ಇದೊಂದು ವಿಶೇಷ ಕಾರ್ಯಕ್ರಮವಾಗಿ ಮೂಡಿಬಂತು. ಅಮ್ಮನ ಮಡಿಲ ಪ್ರಸಾದ ಸ್ವೀಕಾರಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಜನ ಸಾಗರವೇ ಬಂದಿತ್ತು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಮಾತೆಯರು ಸರತಿ ಸಾಲಿನಲ್ಲಿ ನಿಂತು ಸತ್ಯ ಧರ್ಮ ಚಾವಡಿಯಲ್ಲಿ ಅಮ್ಮನ ಮಡಿಲ ಪ್ರಸಾದ ಸ್ವೀಕರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಕನ್ಯಾಡಿ ಪೀಠಾಧಿಪತಿ:
ಕನ್ಯಾಡಿ ಪೀಠಾಧಿಪತಿ, 1008 ಮಹಾ ಮಂಡಲೇಶ್ವರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಪತಿ ಸ್ವಾಮೀಜಿಯವರು ಕ್ಷೇತ್ರಕ್ಕೆ ಆಗಮಿಸಿ, ಆಶೀರ್ವಚನ ನೀಡಿ, ಮಾತೆ ದೇಯಿ ಬೈದೆತಿಯ ಕ್ಷೇತ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಸೇರಿರುವುದು ನೋಡಿದಾಗ ಖುಷಿಯಾಗುತ್ತಿದೆ. ತಾಯಂದಿರಿಗೆ ಈ ಸಮಾಜವನ್ನು, ಸಂಸಾರವನ್ನು ತಿದ್ದುವ ಅದ್ಭುತ ಶಕ್ತಿ ಇದೆ. ತಾಯಂದಿರಿಂದಲೇ ಯಜ್ಞವನ್ನು ಕೂಡ ಮಾಡಿ ತೋರಿಸಿದ್ದೇವೆ. ಬಿಲ್ಲವರಿಗೆ ಇರುವ ಶಕ್ತಿಯನ್ನು ತೋರಿಸುವ ಕೆಲಸವನ್ನು ಗೆಜ್ಜೆಗಿರಿ ಮಾಡುತ್ತಿದೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ನಾರಾಯಣ ಗುರುಗಳ ಸಿದ್ದಾಂತದಂತೆ ಕೋಟಿ ಚೆನ್ನಯರ ಸಿದ್ದಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜ್ಞಾವಂತ ನಾಗರೀಕರಾಗಿ ಬದುಕೋಣ ಎಂದು ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕಾರ್ಯದರ್ಶಿ ಡಾ.ರಾಜಾರಾಮ್ ಬಿ.ಕೆ, ಗೌರವಾಧ್ಯಕ್ಷರಾದ ಪಿತಾಂಬರ ಹೇರಾಜೆ, ಜಯಂತ ನಡುಬೈಲ್, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮೊಕೇಸರ ಶ್ರೀಧರ ಪೂಜಾರಿ, ಕೋಶಾಧಿಕಾರಿ ಮೋಹನದಾಸ ಬಂಗೇರ, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್ ಗುರುಪುರ, ಸಂಜೀವ ಪೂಜಾರಿ ಕೂಚಿಗುಡ್ಡೆ, ಚಂದ್ರಹಾಸ ಅಮೀನ್, ಅಜಿತ್ ಪಾಲೇರಿ, ಸುಧಾಕರ ಪೂಜಾರಿ, ಶಶಿಧರ ಚೆನ್ನಿಮಜಲು, ಡಾ.ಗೀತಾ ಪ್ರಕಾಶ್, ಆನಂದ ಪೂಜಾರಿ ಸರ್ವೆದೋಳ, ರಾಜೇಂದ್ರ ಚಿಲಿಂಬಿ, ಅನಾರಾಯಣ ಮಚ್ಚಿನ, ಜಯವಿಕ್ರಮ್ ಕಲ್ಲಾಪು, ವರದರಾಜ್ ಎಂ. ಸುಧಾಕರ ಪೂಜಾರಿ ಕೇಪು, ಪದ್ಮನಾಭ ಪೂಜಾರಿ ಅಳಿಕೆ, ವಿಶ್ವಜಿತ್ ಅಮ್ಮುಂಜ, ಅಶೋಕ್ ಕುಮಾರ್ ಪಡ್ಡು, ಮಾಧವ ಪೂಜಾರಿ ವಿಟ್ಲ, ಎಲ್ಯಣ್ಣ ಪೂಜಾರಿ ಮೈರುಂಡ, ಕರುಣಾಕರ ಸುವರ್ಣ ಉಪ್ಪಿನಂಗಡಿ, ವಿನೋದ್ ಕುಂಡಡ್ಕ, ಮೋಹನ್ ಗುರ್ಜಿನಡ್ಕ, ಸಂತೋಷ್ ಕುಮಾರ್, ಎನ್.ಟಿ.ಪೂಜಾರಿ, ಸಂಜೀವ ಪೂಜಾರಿ, ಪ್ರಮಲ್ ಕುಮಾರ್, ಚಂದ್ರಹಾಸ ಅಮೀನ್, ಗಂಗಾಧರ ಅಮೀನ್. ಮುಂಬೈ, ಸುಜಿತ ಬಂಗೇರ, ನವೀನ್ ಸುವರ್ಣ ಸಜಿಪ, ನವೀನ್ ಅಮೀನ್ ಶಂಕರಪುರ, ಹರಿಶ್ಚಂದ್ರ ಅಮೀನ್, ಹರೀಶ್ ಕೆ ಪೂಜಾರಿ, ನಿತ್ಯಾನಂದ ನಾವರ, ವಿದ್ಯಾ ರಾಕೇಶ್, ಉಷಾ ಅಂಚನ್ ನೆಲ್ಯಾಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಿಗ್ಗೆ ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು, ಬಾಲಪ್ರತಿಭೆ ಸೋನಿಕಾ ಜನಾರ್ದನ್ ಬಳಗದವರಿಂದ ಭಕ್ತಿ ಗಾಯನ, ಮಧ್ಯಾಹ್ನ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗೆಜ್ಜೆಗಿರಿ ಮೇಳದವರಿಂದ ಶ್ರೀ ದೇವಿ ಮಹಾತ್ಮ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ರೈ:
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ. ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ತಂತ್ರಿಗಳಾದ ಮೂಡುಬಿದಿರೆ ಶಿವಾನಂದ ಶಾಂತಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಚಂದ್ರಹಾಸ ಅಮೀನ್, ಉಪಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಉಲ್ಲಾಸ್ ಕೋಟ್ಯಾನ್ ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಸದಸ್ಯರು, ಅಧ್ಯಕ್ಷರು, ಗೌರವಾಧ್ಯಕ್ಷ ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ
Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ
ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.
ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ಬಿಗ್ ನ್ಯೂಸ್19 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು21 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ19 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು20 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ21 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ21 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ20 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ2 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















