Connect with us

ದಕ್ಷಿಣ ಕನ್ನಡ

Mangalore, Love, Sex, Dhoka: ಲಿವ್‌ ಇನ್‌ ರಿಲೇಶನ್‌ ಶಿಪ್‌ʼನಲ್ಲಿದ್ದ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯಿಂದ ಮೋಸ –ಮಂಗಳೂರಿನ ಲಾಡ್ಜ್‌ ನಲ್ಲಿ ಯುವಕ ಆತ್ಮಹತ್ಯೆ; ಸಾವಿಗೂ ಮುನ್ನಾ ಮಾಡಿದ ವಿಡಿಯೋದಲ್ಲಿ ಮಹಿಳೆಯನ್ನು ಗುಂಡಿಟ್ಟು ಸಾಯಿಸುವಂತೆ ಬಂಧುಗಳಲ್ಲಿ ಆಗ್ರಹ

Published

on



Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಒಂದೂವರೆ ವರ್ಷಗಳ ಹಿಂದೆ ಫ್ರೆಂಡ್ ಆಗಿದ್ದ ಆಕೆಯೊಡನೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದೆ. ಮೊದಲು ಆಕೆಗೆ ಮದುವೆಯಾಗಿರುವುದನ್ನು ಮುಚ್ಚಿಟ್ಟಿದ್ದಳು. ಆನಂತರ, ಮದುವೆ ಆಗಿರುವುದು ಮತ್ತು ಮಗು ಇರೋದು ತಿಳಿದುಬಂದಿತ್ತು. ಆದರೆ ತನ್ನ ಗಂಡ ಸರಿ ಇಲ್ವ ನಿನ್ನನ್ನೇ ಮದುವೆಯಾಗುತ್ತೇನೆಂದು ಹೇಳಿ ನಂಬಿಸಿದ್ದಳು. ನಾವು ಲಿವಿಂಗ್ ರಿಲೇಶನ್ ಹೊಂದಿದ್ದೆವು

Ad Widget

Ad Widget

Ad Widget

Ad Widget

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯನ್ನು ಪ್ರೀತಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿರುವುದಾಗಿ 20 ನಿಮಿಷದ ವಿಡಿಯೋದಲ್ಲಿ ಆರೋಪಿಸಿ ಯುವಕನೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ (40) ಆತ್ಮಹತ್ಯೆಗೈದವ. ಹರಿಯಾಣ ಮೂಲದ  ಸಿಐಎಸ್‌ಎಫ್ ಅಧಿಕಾರಿ ಮೋನಿಕಾ ಸಿಂಗ್‌ ತನಗೆ ಮೋಸ ಮಾಡಿರುವುದಾಗಿ ಆತ ಆರೋಪಿಸಿದ್ದಾನೆ

Ad Widget

Ad Widget

Ad Widget alt="Ad Widget"/>

Ad Widget

ಸಾವಿಗೂ  ಮುನ್ನ ಆತ ಸುದೀರ್ಘ 20 ನಿಮಿಷಗಳ ವಿಡಿಯೋ ಮಾಡಿದ್ದು  ಅದರಲ್ಲಿ ಮೋನಿಕಾ ಸಿಂಗ್ ವಿರುದ್ದ ಗುರುತರ ಆರೋಪ ಮಾಡಿದ್ದಾನೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮಿನಲ್ಲಿ ಅಪ್ಲೋಡ್   ಮಾಡಿದ್ದಾನೆ.

Ad Widget

Ad Widget <> Ad Widget

ವಿಡಿಯೋದಲ್ಲಿ ಏನಿದೆ ?



Ad Widget

ಸಾಮಾಜಿಕ ಜಾಲತಾಣದಲ್ಲಿ ಒಂದೂವರೆ ವರ್ಷಗಳ ಹಿಂದೆ ಫ್ರೆಂಡ್ ಆಗಿದ್ದ ಆಕೆಯೊಡನೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದೆ. ಮೊದಲು ಆಕೆಗೆ ಮದುವೆಯಾಗಿರುವುದನ್ನು ಮುಚ್ಚಿಟ್ಟಿದ್ದಳು. ಆನಂತರ, ಮದುವೆ ಆಗಿರುವುದು ಮತ್ತು ಮಗು ಇರೋದು ತಿಳಿದುಬಂದಿತ್ತು. ಆದರೆ ತನ್ನ ಗಂಡ ಸರಿ ಇಲ್ವ ನಿನ್ನನ್ನೇ ಮದುವೆಯಾಗುತ್ತೇನೆಂದು ಹೇಳಿ ನಂಬಿಸಿದ್ದಳು. ನಾವು ಲಿವಿಂಗ್ ರಿಲೇಶನ್ ಹೊಂದಿದ್ದೆವು. ಆದರೆ ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಹಣ ಭ ಪಡೆದು ಮೋಸ ಮಾಡಿದ್ದಾಳೆ. ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ.

Ad Widget

Ad Widget

ಮೋನಿಕಾಗೆ ಎಂಟು ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ. ರಾತ್ರಿಯಲ್ಲಿ ನಗ್ನ ವಿಡಿಯೋಗಳನ್ನು ಕಳಿಸಿ ಸೆಕ್ಸ್ ಗೆ ಆಹ್ವಾನಿಸುತ್ತಿದ್ದಳು. ಆಕೆ ಒಂದು ರೀತಿಯಲ್ಲಿ ವೇಶ್ಯಯಾಗಿದ್ದು, ಹಲವರೊಂದಿಗೆ ಮಲಗಿದ್ದಾಳೆ. ಇದೆಲ್ಲವನ್ನು ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಮುಗ್ಧ ಪ್ರೀತಿಯನ್ನು ಬದಿಗೊತ್ತಿ ಮೋಸ ಮಾಡಿದ್ದಾಳೆ.

ಆಕೆಯನ್ನು ಹಾಗೆಯೇ ಬಿಡಬಾರದು, ಈ ವಿಡಿಯೋ ನೋಡಿದ ನನ್ನ ಬಂಧುಗಳು ಆಕೆಯನ್ನು ಗುಂಡಿಟ್ಟು ಸಾಯಿಸಬೇಕು. ಪೊಲೀಸ್ ಅಧಿಕಾರಿಗಳು ಇದೇ ವಿಡಿಯೋ ಮತ್ತು ನನ್ನ ಮೊಬೈಲ್ ನಲ್ಲಿರುವ ಆಕೆಯ ವಿಡಿಯೋಗಳನ್ನು ಆಧರಿಸಿ ಕೇಸು ದಾಖಲಿಸಬೇಕು. ಆಕೆ ಇದೇ ರೀತಿ ಹಲವರಿಗೆ ಮೋಸ ಮಾಡಿದ್ದಾಳೆ ಎಂದು ವಿಡಿಯೋದಲ್ಲಿ ಅಭಿಷೇಕ್  ಹೇಳಿದ್ದಾನೆ.

ಸದ್ಯ  ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದು,  ಪೊಲೀಸರ ತಂಡ ಅಲ್ಲಿಗೆ ತೆರಳಿದೆ.

 

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading