ಸ್ಥಳೀಯ
Gejjegiri-ಶ್ರೀ ಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವ : ಧೂಮಾವತಿ ದೈವದ ನೇಮೋತ್ಸವ
ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರು ಪೀಠ ದೇಯಿ ಬೈದೈತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.3 ರಂದು ಬೆಳಗ್ಗೆ 6 ರಿಂದ ಶ್ರೀ ಗಣಪತಿ ಹೋಮ, ಗುರುಪೂಜೆ, ದೈವಸಾನಿಧ್ಯದಲ್ಲಿ ಶುದ್ದಿಕಲಶ ಧೂಮಾವತಿ ದೈವದ ಭಂಡಾರ ಇಳಿದ ನಂತರ ದರ್ಶನ ಧೂಮಾವತಿ ದೈವದ ನೇಮೋತ್ಸವ ಪ್ರಸಾದ ವಿತರಣೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಬಡಗನ್ನೂರು: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರು ಪೀಠ ದೇಯಿ ಬೈದೈತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.3 ರಂದು ಬೆಳಗ್ಗೆ 6 ರಿಂದ ಶ್ರೀ ಗಣಪತಿ ಹೋಮ, ಗುರುಪೂಜೆ, ದೈವಸಾನಿಧ್ಯದಲ್ಲಿ ಶುದ್ದಿಕಲಶ ಧೂಮಾವತಿ ದೈವದ ಭಂಡಾರ ಇಳಿದ ನಂತರ ದರ್ಶನ ಧೂಮಾವತಿ ದೈವದ ನೇಮೋತ್ಸವ ಪ್ರಸಾದ ವಿತರಣೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ಧೂಮಾವತಿ ಬಲಿ ಉತ್ಸವ, ಮಹಾಪೂಜೆ, ಕುಪ್ಪೆ ಪಂಜುರ್ಲಿ ದೈವದ ಭಂಡಾರ ಇಳಿದು ಬಳಿಕ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ ನಡೆಯಿತು..
ಕುಪ್ಪೆ ಪ೦ಜುರ್ಲಿ ನೇಮೋತ್ಸವ: ಕಲ್ಲಲ್ತಾಯ ನೇಮೋತ್ಸವ, ಕೊರತಿ ನೇಮೋತ್ಸವ ರಾತ್ರಿ 8ರಿಂದ ನಡೆಯಿತು.
ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರವಿ ಪೂಜಾರಿ ಚಿಲಿಂಬಿ, ಗೌರವ ಅಧ್ಯಕ್ಷರಾದ ಪೀತಾಂಬರ ಹೇರಾಜೆ, ಜಯಂತ ನಡುಬೈಲು, ಮೊತ್ತೇಸರ ಶ್ರೀಧರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾದ ಕೆ.ಬಿ. ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಕೋಶಾಧಿಕಾರಿ ಮೋಹನ್ ದಾಸವಾಮಂಜೂರು, ಜತೆ ಕಾರ್ಯದರ್ಶಿ ಜಯ ವಿಕ್ರಮ್, ಶಿವಾನಂದ ಕೋಟ್ಯಾನ್ ಮಸ್ಕತ್, ಶಿವಪ್ಪ ಪೂಜಾರಿ ಮುಂಬೈ, ಸತೀಶ್ ಕುಮಾರ್ ಕೆಡೆಂಜಿ, ಹರೀಶ್ ಕೆ ಪೂಜಾರಿ ಮಂಗಳೂರು, ಜನಾರ್ದನ ಪೂಜಾರಿ ಪದಡ್ಡ ಕೆ.ಟಿ ಪೂಜಾರಿ, ಜಯರಾಮ ಬಂಗೇರ ಹೇರಾಜೆ, ರಾಜೇಂದ್ರ ಚಿಲಿಂಬಿ, ಚಂದ್ರಹಾಸ ಅಮೀನ್, ಸುಜಿತ ಬಂಗೇರ, ಶಶಿಧರ ಕಿನ್ನಿಮಜಲು, ನಾರಾಯಣ ಮಚ್ಚಿನ, ರಮಣಿ ಕೋಡಿಕಲ್ ವಿಜಯ ಕುಮಾರ್ ಸುರತ್ಕಲ್, ಉಪಸ್ಥಿತರಿದರು.

ಮಾ.4 ರಂದು ಬೆಳಗ್ಗೆ 6 ರಿಂದ ಗಣಪತಿ ಹೋಮ, ಗುರುಪೂಜೆ, ಮೂಲಸ್ಥಾನ ಗರಡಿ, ಬೆಮ್ಮೆರೆ ಗುಂಡ, ಸತ್ಯಧರ್ಮ ಚಾವಡಿಯಲ್ಲಿ ನವಕ ಪ್ರಧಾನ ಹೋಮ, ನವಕ ಕಲಶಾಭಿಷೇಕ, ಅಲಂಕಾರ ಪೂಜೆ, ಗರಡಿಯಲ್ಲಿ ಮಹಾಪೂಜೆ ನಡೆದು ಮಧ್ಯಾಹ್ನ 12.30 ಕೈ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ ನೆರವೇರಿತು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷರಾದ ಪೀತಾಂಬರ ಹೇರಾಜೆ, ಜಯಂತ ನಡುಬೈಲು, ಮೊತ್ತೇಸರ ಶ್ರೀಧರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ ಕೆ.ಬಿ., ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್ ಗುರುಪುರ, ಕೋಶಾಧಿಕಾರಿ ಮೋಹನ್ ದಾಸ ವಾಮಂಜೂರು, ಜತೆ ಕಾರ್ಯದರ್ಶಿ ಜಯ ವಿಕ್ರಮ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಕಾನೂನು ಸಲಹೆಗಾರ ನವನೀತ್ ಹಿಂಗಾಣಿ, ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಆಯುಶ್ಚಾನ್ ಇಲಾಖೆ ಅಧಿಕಾರಿ ಜಗನ್ನಾಥ್ ಶಿರ್ಲಾಲು, ಕೆ.ಪಿ.ಸಿಸಿಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಸಂತ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಜಯರಾಮ ಬಂಗೇರ ಹೇರಾಜೆ, ರಾಜೇಂದ್ರ ಚಿಲಿಂಬಿ, ಚಂದ್ರಹಾಸ ಅಮೀನ್, ಸುಜಿತ ಬಂಗೇರ, ಶಶಿಧರ ಕಿನ್ನಿಮಜಲು, ನಾರಾಯಣ ಮಚ್ಚಿನ, ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಅಮಿತ್ ರಾಜ್, ಬಂಜರಂಗದಳದ ಸಂಚಾಲಕರಾದ ದೀಕ್ಷಿತ್ ಅಶೋಕ್ ನಗರ, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ, ಬಿ.ಯಸ್.ಎನ್.ಎಲ್. ದಕ್ಷಿಣ ಕನ್ನಡ ಜಿಲ್ಲಾ ಸಲಹಾ ಸಮಿತಿಯ ಸದಸ್ಯ ನಿತೀಶ್ ಶಾಂತಿವನ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾಡ್ತಾ, ವಿದ್ಯಾಧರ ಜೈನ್, ನೆಟ್ಟಣಿಗೆ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ, ಪರ್ಷಂಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ24 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು22 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ23 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ19 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ23 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















