Uncategorized
Vitla Blast Case : ವಿಟ್ಲ ಸ್ಪೋಟಕ ಬ್ಲಾಸ್ಟ್ ಪ್ರಕರಣ : ಇಬ್ಬರ ವಿರುದ್ದ ಸ್ಪೋಟಕ ಕಾಯ್ದೆಯಡಿ ಪ್ರಕರಣ – ನೈಜ ಆರೋಪಿಗಳ ರಕ್ಷಣೆ ?

ಸ್ಪೋಟ ಸಂಭವಿಸಿದ ವೇಳೆಯೇ ತನಿಖೆಯ ದಾರಿ ತಪ್ಪಿಸುವ ಹಾಗೂ ಸಾಕ್ಷ್ಯ ನಾಶದ ಯತ್ನ ನಡೆದ ಬಗ್ಗೆ ಸ್ಥಳೀಯರಿಂದ ಆರೋಪ ಕೇಳಿ ಬಂದಿತ್ತು. ಆದಾದ ಬಳಿಕವು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿಲ್ಲ, ನೈಜ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ವಿಟ್ಲ ಸಮೀಪದ ಮಾಡತ್ತಡ್ಕ ಎಂಬಲ್ಲಿನ ಕಲ್ಲಿನ ಕೋರೆ ಬಳಿ ಮಂಗಳವಾರ ಮಧ್ಯಾಹ್ನ ಸ್ಪೋಟಕ ಸ್ಪೋಟಿಸಿ ಮನೆಗಳಿಗೆ ಹಾನಿಯಾದ ಪ್ರಕರಣದಲ್ಲಿ ಇಬ್ಬರ ವಿರುದ್ದ ಬಿಎನ್ ಎಸ್ ಹಾಗೂ ಸ್ಪೋಟಕ ಕಯ್ದೆಯಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳದ ಶ್ರೀ ರಾಮ್ ಕನ್‌ಸ್ಟ್ಟ್ರಕ್ಷನ್ ನ ಅಶೋಕ ಮತ್ತು ಅದರ ಬ್ಲಾಸ್ಟರ್ ಕೆಲಸ ಮಾಡುತ್ತಿದ್ದಾತ ಪ್ರಕರಣದ ಆರೋಪಿಗಳು
ಈ ಆಪಾಯಕಾರಿ ಸ್ಪೋಟಕಗಳನ್ನು ಎನ್.ಎಸ್ ಕೋರೆಯ ಗಣಿಗಾರಿಕೆಗಾಗಿ ತಂದಿರುವುದಾಗಿ ಪೊಲೀಸರು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದರೇ ಇದೇ ವೇಳೆ ಈ ಸ್ಪೊಟಕಗಳನ್ನು ನಿರ್ಲಕ್ಷ್ಯತನದಿಂದ ಮತ್ತು ಬೇಜವಾಬ್ದಾರಿಯಿಂದ ಇಡಲಾಗಿದರೂ ಕೋರೆಯವರ ಮೇಲೆ ಯಾವುದೇ ಪ್ರಕರಣ ದಾಖಲಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಸ್ಪೋಟ ಸಂಭವಿಸಿದ ವೇಳೆಯೇ ತನಿಖೆಯ ದಾರಿ ತಪ್ಪಿಸುವ ಹಾಗೂ ಸಾಕ್ಷ್ಯ ನಾಶದ ಯತ್ನ ನಡೆದ ಬಗ್ಗೆ ಸ್ಥಳೀಯರಿಂದ ಆರೋಪ ಕೇಳಿ ಬಂದಿತ್ತು. ಆದಾದ ಬಳಿಕವು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿಲ್ಲ, ನೈಜ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಪೋಟ ಸಂಭವಿಸುತ್ತಲೇ ಪ್ರಕರಣದ ಗಂಭೀರತೆಯನ್ನು ಕಡಿಮೆ ಮಾಡಲು ಹಲವರಿಗೆ ಅಲ್ಲಿನ ಗಣಿ ಧಣಿಗಳು ಆಮಿಷ ಒಡ್ಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
FIR ನಲ್ಲಿ ಏನಿದೆ ?
ಬಂಟ್ವಾಳದ ಶ್ರೀ ರಾಮ್ ಕನ್‌ಸ್ಟ್ಟ್ರಕ್ಷನ್ ನ ಅಶೋಕ ಮತ್ತು ಅದರ ಬ್ಲಾಸ್ಟರ್ ಕೆಲಸ ಮಾಡುತ್ತಿದ್ದಾತ ಎನ್.ಎಸ್ ಕೋರೆಯ ಗಣಿಗಾರಿಕೆಗಾಗಿ ತಂದ ಸ್ಫೊಟಕಗಳನ್ನು ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕದಲ್ಲಿರುವ ಎನ್ ಎಸ್ ಕೋರೆಯ ಬಳಿಯಿರುವ ಮೋನಪ್ಪ ಪೂಜಾರಿಯವರಿಗೆ ಸೇರಿದ ಜಾಗದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಕಲ್ಲು ಬಂಡೆಗಳ ಮೇಲೆ ಇಟ್ಟಿದ್ದರು. ಈ ಸ್ಪೋಟಕಗಳು ಬಿಸಿಲಿನ ತಾಪದಿಂದ ಸ್ಪೋಟಗೊಂಡು ಸುತ್ತಮುತ್ತಲಿನ ಮರಗಿಡಗಳು ಛಿದ್ರಗೊಂಡಿರುತ್ತದೆ ಹಾಗೂ ಪರಿಸರದ ಈಶ್ವರ ನಾಯ್ಕ ಮತ್ತು ವಸಂತ ಮೋಹನ ಎಂಬವರುಗಳ ಮನೆಗಳಿಗೆ ಹಾನಿಯಾಗಿದೆ.
ಆರೋಪಿಗಳ ವಿರುದ್ದ Explossive Act 1884 ನ ಕಲಂ 9ಬಿ ಮತ್ತು BNS 2023ರ ಕಲಂ 288 ರಂತೆ ಪ್ರಕರಣ ದಾಖಲಾಗಿರುತ್ತದೆ.
Uncategorized
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.
ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.
ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Uncategorized
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.
ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Uncategorized
Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.
ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.
ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು.
ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಅಂತರ ರಾಜ್ಯ12 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು7 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಮಂಗಳೂರು14 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ11 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ13 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಅಂತರ ರಾಜ್ಯ12 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
ಉದ್ಯೋಗ8 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ6 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















