ಉಡುಪಿ
Udupi-ಗರುಡ ಗ್ಯಾಂಗ್ ಸದಸ್ಯ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸಾಕ್ ಪರಾರಿ : ಉಡುಪಿಯಲ್ಲೊಂದು ಸಿನಿಮೀಯ ಶೈಲಿಯ ರಾತ್ರಿ ನಡೆದ ಚೇಸಿಂಗ್..! ಹಲವು ಕಿಮೀ ಥಾರ್ ರಿವರ್ಸ್ ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ : ಪ್ರೇಯಸಿ ಸುಜೈನ್ ಮಧ್ಯರಾತ್ರಿ ಬಂಧನ
ದರೋಡೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಬುಧವಾರದಂದು ಆತನ ಗೆಳತಿ ಸುಜೈನ್ ಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಉಡುಪಿ: ದರೋಡೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಬುಧವಾರದಂದು ಆತನ ಗೆಳತಿ ಸುಜೈನ್ (25) ಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸೋಮಶೇಖರ್ ಅವರು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದ 2 ನೇ ಆರೋಪಿ ಇಸಾಕ್ ಪತ್ತೆಗಾಗಿ ಮಣಿಪಾಲಕ್ಕೆ ಆಗಮಿಸಿದ್ದರು. ಜಿಲ್ಲಾಧಿಕಾರಿ ಕಚೇರಿ ರಸ್ತೆ ಬಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಿರುವ ಗೆಳತಿ ಸುಜೈನ್ ಮನೆಗೆ ಆರೋಪಿ ಬಂದಿರುವ ಬಗ್ಗೆ ಸುಳಿವು ಸಿಕ್ಕಿತ್ತು. ಸೋಮಶೇಖರ್ ಮತ್ತು ನಿರೀಕ್ಷಕ ನರೇಂದ್ರ ಬಾಬು ನೇತೃತ್ವದ ತಂಡ ಸುಜೈನ್ ಮನೆಯನ್ನು ಪತ್ತೆ ಮಾಡಿ ಆರೋಪಿ ಹೊರಬರುವುದನ್ನೇ ಕಾಯುತ್ತಿದ್ದರು. ರಾತ್ರಿ ಸುಮಾರು 8 ಗಂಟೆಗೆ ಸುಜೈನ್ ಹಾಗೂ ಆಕೆಯ ತಂಗಿ ಹತ್ತಿರದ ಮೊಬೈಲ್ ಅಂಗಡಿಗೆ ಹೋಗಿದ್ದರು.
ಆರೋಪಿಯ ಆಗಮನ
ನಕಲಿ ನೋಂದಣಿ ಸಂಖ್ಯೆಯಿದ್ದ ಕಪ್ಪು ಬಣ್ಣದ ಮಹೀಂದ್ರ ಥಾರ್ ಈ ವೇಳೆ ವಾಹನದಲ್ಲಿ ವ್ಯಕ್ತಿಯೊಬ್ಬ ಆಗಮಿಸಿದ. ಆದರೆ ಆತ ಆರೋಪಿಯೇ ಎಂಬ ಬಗ್ಗೆ ಪೊಲೀಸರಿಗೆ ಖಚಿತತೆ ಇರಲಿಲ್ಲ. ಕೂಡಲೇ ಪೊಲೀಸರು ತಾವಿದ್ದ ವಾಹನದಲ್ಲಿ ಆ ವಾಹನವನ್ನು ಹಿಂಬಾಲಿಸಿದರು. ಈ ವೇಳೆ ಆ ವಾಹನ ಸ್ವಲ್ಪ ದೂರ ಹೋಗಿ ಯೂ ಟರ್ನ್ ತೆಗೆದು ಬಂದು ಜಿಲ್ಲಾಧಿಕಾರಿ ರಸ್ತೆಯ ಅರೇಬಿಯನ್ ಹೊಟೇಲ್ ಮೊಬೈಲ್ ಅಂಗಡಿಯ ಮುಂಭಾಗ ನಿಂತಿತು.
ಆಗ ಸುಜೈನ್ ವಾಹನವನ್ನು ಹತ್ತಿದ್ದು, ಅದರಲ್ಲಿ ಆರೋಪಿ ಇಸಾಕ್ ಇದ್ದದ್ದು ಪೊಲೀಸರಿಗೆ ಖಚಿತವಾಗಿ ಆತನ ಬೆನ್ನು ಬಿದ್ದರು. ಇದನ್ನರಿತ ಆರೋಪಿ, ಪೊಲೀಸ್ ಸಿಬಂದಿ ವಿಶ್ವನಾಥ ಅವರಿಗೆ ಕಾರನ್ನು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ. ಪರಿಣಾಮವಾಗಿ ಅವರು ಫುಟ್‌ಪಾತ್‌ಗೆ ಬಿದ್ದು ತೀವ್ರ ಗಾಯಗೊಂಡರು. ಈ ಸಂದರ್ಭ ನಡೆದ ಜಟಾಪಟಿಯಲ್ಲಿ ನಿರೀಕ್ಷಕ ನರೇಂದ್ರ ಬಾಬು, ಸಿಬಂದಿ ಕೇಶಾವನಂದ, ಬಾಲಾಜಿ ಸಿಂಗ್ ಮತ್ತು ರಾಯಗೊಂಡ ಅವರಿಗೂ ಗಾಯಗಳಾಗಿವೆ.
ರಿವರ್ಸ್ ಚಲಾಯಿಸಿ ಸರಣಿ ಅಪಘಾತ
ಆರೋಪಿಯು ವಾಹನವನ್ನು ಅತಿ ವೇಗವಾಗಿ ರಿವರ್ಸ್ ನಲ್ಲಿ ಚಲಾಯಿಸಿದ್ದು, ಈ ಸಂದರ್ಭ ಕಾರು ಢಿಕ್ಕಿ ಹೊಡೆಯುವುದರಿಂದ ಸೋಮಶೇಖರ್ ಅವರು ಕೂದಲೆಳೆ ಅಂತರದಲ್ಲಿ ಪಾರಾದರು. ಬಳಿಕ ಅವರ ಕಾರಿಗೆ ಆರೋಪಿ ತನ್ನ ಕಾರನ್ನು ಢಿಕ್ಕಿ ಹೊಡೆಸಿ ಜಖಂಗೊಳಿಸಿದ. ರಿವರ್ಸ್‌ನಲ್ಲೇ ಕಾರನ್ನು ಓಡಿಸಿ ಅಲ್ಲಿದ್ದ ಎಸ್‌ಯುವಿ 700 ಕಾರಿಗೆ ಢಿಕ್ಕಿ ಹೊಡೆಸಿದ. ಪುನಃ ಕಾರನ್ನು ಅತಿವೇಗದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಕ್ರೆಟಾ ಕಾರಿಗೆ ಢಿಕ್ಕಿ ಹೊಡೆದ.
ಮಣ್ಣಪಳ್ಳದಲ್ಲಿ ಕಾರು ಪತ್ತೆ
ಸರಣಿ ಅಪಘಾತ ನಡೆಸಿದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾದ. ಈ ವೇಳೆ ಪೊಲೀಸರು ಆತನ ವಾಹನವನ್ನು ಹಿಂಬಾಲಿಸಿದ್ದು, ಮಣ್ಣಂಪಳ್ಳ ಬಳಿ ಆರೋಪಿಯ ವಾಹನದ ಟಯರ್ ಪಂಕ್ಚರ್ ಆಯಿತು. ಕೂಡಲೇ ವಾಹನವನ್ನು ಮಾರ್ಗ ಮಧ್ಯೆ ನಿಲ್ಲಿಸಿ ಗೆಳತಿಯೊಂದಿಗೆ ಕತ್ತಲೆಯಲ್ಲಿ ತಪ್ಪಿಸಿಕೊಂಡ. ಈ ಸಂದರ್ಭ ಚೇಸಿಂಗ್ ಬಗ್ಗೆ ಪೊಲೀಸರಿಗೂ ಮತ್ತು ಸಾರ್ವಜನಿಕರಿಗೂ ವಾಗ್ವಾದ ನಡೆಯಿತು. ಇದು ಆರೋಪಿಗೆ ತಪ್ಪಿಸಿಕೊಳ್ಳಲು ಅನುಕೂಲವಾಯಿತು. ಪೊಲೀಸರು ಆ ವಾಹನವನ್ನು ವಶಕ್ಕೆ ಪಡೆದಿದ್ದು, ಅದು ಬಾಡಿಗೆಗೆ ಪಡೆದ ವಾಹನವಾಗಿದೆ.
ಇಂದ್ರಾಳಿಯಲ್ಲಿ ಆರೋಪಿಯ ಪ್ರೇಯಸಿ ವಶಕ್ಕೆ
ಮೊದಲೇ ಲೊಕೇಷನ್ ಆಧಾರದಲ್ಲಿ ಆರೋಪಿಯ ಪ್ರೇಯಸಿಯ ಬೆನ್ನು ಬಿದ್ದಿದ್ದ ಪೊಲೀಸರಿಗೆ ಆಕೆ ಇಂದ್ರಾಳಿಯಲ್ಲಿರುವ ಬಗ್ಗೆ ಮಾಹಿತಿ ಲಭಿಸಿತು. ಅಲ್ಲಿಗೆ ತೆರಳಿದಾಗ ತನ್ನ ಅಕ್ಕನ ಮನೆಯಲ್ಲಿ ಆಕೆ ಇದ್ದದ್ದು ತಿಳಿದು, ರಾತ್ರಿ 2 ಗಂಟೆ ವೇಳೆಗೆ ಆಕೆಯನ್ನು ಬಂಧಿಸಲಾಯಿತು.
ಉಡುಪಿ ಕುಂಜಿಬೆಟ್ಟು ಗ್ಯಾಂಗ್‌ವಾರ್ ಸೂತ್ರಧಾರ
ಮೂಲತಃ ಬೈಂದೂರಿನವನಾದ ಆರೋಪಿ ಇಸಾಕ್ ಮಾದಕ ವಸ್ತು ಪೂರೈಕೆ, ಹಲ್ಲೆ, ದರೋಡೆ ಹಲವು ಪ್ರಕರಣಗಳು ಈತನ ಮೇಲಿವೆ. ಕಳೆದ ವರ್ಷ ಉಡುಪಿಯ ಕುಂಜಿಬೆಟ್ಟು ಬಳಿ ನಡೆದ ಗ್ಯಾಂಗ್‌ವಾರ್‌ನ ಸೂತ್ರ ಧಾರನಾಗಿದ್ದ. ವಾಹನದಲ್ಲಿ ರಾದ್ಧಾಂತ ನಡೆಸಿ, ತಲವಾರು ಝಳಪಿಸಿ ಹಲ್ಲೆ ನಡೆಸಿದ್ದ. ಉಡುಪಿ, ಮಂಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳಿದ್ದು, ಪೊಲೀಸರು ಈತನ ಮೇಲೆ ನಿಗಾ ಇಟ್ಟಿದ್ದರು.
ಪ್ರೇಯಸಿ ಸುಜೈನ್ ಹಿನ್ನೆಲೆಯೇನು?
ಮೂಲತಃ ಕೇರಳದವಳಾದ ಸುಜೈನ್ ಕಾನೂನು ಪದವಿಧರೆಯಾಗಿದ್ದು, ಹಲವು ವರ್ಷಗಳಿಂದ ಉಡುಪಿ ಯಲ್ಲೇ ನೆಲೆಸಿದ್ದಳು. ಆಕೆಯ ಖರ್ಚು ವೆಚ್ಚಗಳನ್ನು ಆರೋಪಿಯೇ ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ. ದೊಡ್ಡಣಗುಡ್ಡೆಯಲ್ಲಿ ಆಕೆಯ ತಾಯಿ ವಾಸ್ತವ್ಯವಿದ್ದು, ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಈಕೆ ಡಿಸಿ ಕಚೇರಿ ರಸ್ತೆಯ ಫ್ಲ್ಯಾಟೊಂದರಲ್ಲಿ ತಾಯಿ ಹಾಗೂ ಸಹೋದರಿಯೊಂದಿಗೆ ವಾಸವಿದ್ದಳು. ಆರೋಪಿಯು ಆಗಾಗ್ಗೆ ಬಂದು ಹೋಗುತ್ತಿದ್ದ ಬಗ್ಗೆ ಪೊಲೀಸರಿಗೆ ತಿಳಿದಿತ್ತು.
ಆರೋಪಿಯ ಕಾರಿನಲ್ಲಿದ್ದ ಕತ್ತಿ, ತಲ್ವಾರ್, ಮಾದಕ ವಸ್ತು ವಶಕ್ಕೆ:
ಆರೋಪಿಯ ಕಾರಿನಲ್ಲಿ ಬ್ಯಾಗೊಂದು ಪತ್ತೆಯಾಗಿದ್ದು, ಅದರಲ್ಲಿ ತಲ್ವಾರು, ಕತ್ತಿ, ಮಾದಕ ವಸ್ತುಗಳು ಸಹಿತ ಸುಮಾರು 10ರಿಂದ 15 ನಿಷ್ಕ್ರಿಯ ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ. ಪೊಲೀಸರು ಇವೆಲ್ಲವನ್ನೂ ವಶಕ್ಕೆ ಪಡೆದಿದ್ದಾರೆ.
ಏನಿದು ನೆಲಮಂಗಲ ಪ್ರಕರಣ:
ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಲ.ರೂ.ದರೋಡೆ ಪ್ರಕರಣ ನಡೆದಿತ್ತು. ಇದಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಅದರಂತೆ ಇಬ್ಬರನ್ನು ಸುರತ್ಕಲ್‌ನಲ್ಲಿ ಬಂಧಿಸಲಾಗಿತ್ತು. ಇದೇ ರೀತಿ ಇಸಾಕ್‌ನನ್ನು ಕೂಡ ಬಂಧಿಸಬಹುದು ಎಂಬ ಲೆಕ್ಕಾಚಾರ ಬೆಂಗಳೂರು ಪೊಲೀಸರದ್ದಾಗಿತ್ತು. ಆದರೆ ಆರೋಪಿ ತಪ್ಪಿಸಿಕೊಂಡಾಗ ಸ್ಥಳೀಯ ರಸ್ತೆಗಳ ಮಾಹಿತಿ ಇಲ್ಲದೇ ಪೊಲೀಸರು ಗೊಂದಲಕ್ಕೆ ಒಳಗಾದರು. ಸ್ಥಳೀಯರಿಂದ ಮಾಹಿತಿ ಪಡೆದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಸಹಕರಿಸಿದರು.
ಮಾದಕ ವಸ್ತು ಪೂರೈಕೆ?
ಆರೋಪಿಯು ಹೆಚ್ಚಾಗಿ ಬೆಂಗಳೂರಿನಲ್ಲಿದ್ದರೂ ಅವಿಭಜಿತ ದ.ಕ.ಜಿಲ್ಲೆಗೆ ಹಲವು ಬಾರಿ ಬಂದು ಹೋಗಿದ್ದ. ಗೆಳತಿಯ ಮೂಲಕ ಮಾದಕ ವಸ್ತುಗಳನ್ನು ಸ್ಥಳೀಯವಾಗಿ ಪೂರೈಸುತ್ತಿದ್ದನೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಕಂಡುಬಂದ ಕಪ್ಪು ಬಣ್ಣದ ವಾಹನ, ಹಲವು ದಿನಗಳಿಂದ ಉಡುಪಿ, ಮಣಿಪಾಲ ಭಾಗದಲ್ಲಿ ಸುತ್ತಾಡುತ್ತಿತ್ತು ಎಂದಿದ್ದಾರೆ ಜನರು.
ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೂ ಕಳ್ಳ-ಪೊಲೀಸ್ ಆಟ
ಮಣ್ಣಪಳ್ಳದಿಂದ ಆರೋಪಿ ಎತ್ತ ಹೋಗಿದ್ದಾನೆ ಎಂಬ ಮಾಹಿತಿ ಸಿಕ್ಕಿಲ್ಲ. ಇಂದ್ರಾಳಿ ರೈಲು ನಿಲ್ದಾಣದ ಮೂಲಕ ಬೆಂಗಳೂರು ಅಥವಾ ಇತರ ಊರಿಗೆ ತೆರಳಿರುವ ಸಾಧ್ಯತೆ ಇದೆ. ರಸ್ತೆ ಮಾರ್ಗದಲ್ಲಿ ಇತರ ವಾಹನಗಳಲ್ಲಿ ತೆರಳಿರುವ ಸಾಧ್ಯತೆಯೂ ಇದೆ. ಆರೋಪಿ ಪ್ರೇಯಸಿ ಜತೆ ಮಣ್ಣಪಳ್ಳದಿಂದ ಇಂದ್ರಾಳಿಗೆ ನಡೆದು ಅಥವಾ ಇತರ ವಾಹನಗಳ ಸಹಕಾರದಲ್ಲಿ ಹೋಗಿರಲೂಬಹುದು ಎನ್ನಲಾಗುತ್ತಿದೆ. ರಾತ್ರಿ 8 ಕ್ಕೆ ಆರಂಭಗೊಂಡ ಈ ಕಳ್ಳ-ಪೊಲೀಸ್ ಆಟ ಬೆಳಗ್ಗೆ 6 ರವರೆಗೂ ಮುಂದುವರಿದಿತ್ತು. ಆದರೆ ಆರೋಪಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ದೃಶ್ಯಾವಳಿ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ19 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















