ದಕ್ಷಿಣ ಕನ್ನಡ
Hit and Run ಪುತ್ತೂರು : ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಪಿಕಪ್ – ಸುಳ್ಯದ ನಿವೃತ್ತ ಶಿಕ್ಷಕ ಮೃತ್ಯು

ಕಾರ್ಯ ನಿಮಿತ್ತ ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ , ಬೈಕ್ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು , ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ, ಪಿಕಪ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದೆ. ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್ ಸವಾರ. ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಕಾರ್ಯ ನಿಮಿತ್ತ ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ , ಬೈಕ್ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು , ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ, ಪಿಕಪ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳದಲ್ಲಿ ಸೇರಿದವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ತಲೆಗೆ ತೀವ್ರ ತರವಾದ ಗಾಯವಾದ ಹಿನ್ನಲೆಯಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು . ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ. ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು
ಸ್ಪರ್ಧೆಯ ಫಲಿತಾಂಶ:
ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.
ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.
ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.
ಶಿಕ್ಷಣ
Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.
ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್23 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ22 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ4 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಅಂತರ ರಾಜ್ಯ23 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ


















