ರಾಜಕೀಯ
CM’s budget-ಸ್ಕೌಟ್ – ಗೈಡ್ಸ್ ತರಬೇತಿ ಕೇಂದ್ರ ಅಭಿವೃದ್ಧಿಗೆ ಪಿಲಿಕುಳಕ್ಕೆ 2 ಕೋಟಿ ರೂ : ಬಿಸಿಯೂಟ ಸಿಬ್ಬಂದಿಗೆ 1000 ರೂ ಗೌರವಧನ ಹೆಚ್ಚಳ – ಸರ್ಕಾರಿ ಶಾಲೆಗೂ ಕೋಡಿಂಗ್ ತರಬೇತಿ – ಹಾಲು ಮೊಟ್ಟೆ ಇನ್ನು 6 ದಿನ : ಸಿಎಂ ಬಜೆಟ್ ನಲ್ಲಿ ಶಾಲಾ ಕಾಲೇಜಿಗೆ ಏನೆಲ್ಲಾ ಇದೆ ಓದಿ
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
ಶಾಲಾ ಮಕ್ಕಳಿಗೆ ಶ್ರೀ ಸತ್ಯ
ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.
ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು :
i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,
ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ.
ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.
ii) ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
iii) ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.
iv) ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
vii) ʻಜ್ಞಾನಸೇತುʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,೦೦೦ ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
ix) ʻವಿದ್ಯಾವಿಜೇತʼ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸಲಾಗುವುದು.
- ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
- ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.
- ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ ೫೦೦ ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು.
- ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು.
- ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ.
- ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು.
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 2೦೦ ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
- ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಸ್ಥಳೀಯ
B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.
ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
-
ನಿಧನ ವಾರ್ತೆ12 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್17 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ17 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ16 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ17 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ15 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ17 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ11 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















