Uncategorized
Ambika-ಅಂಬಿಕಾದಲ್ಲಿ ರಜಾ ದಿನಗಳ ತರಗತಿ ಉದ್ಘಾಟನೆ ಹಾಗೂ ಒರಿಯೆಂಟೇಷನ್ ಕಾರ್ಯಕ್ರಮ; ವಿದ್ಯಾರ್ಥಿಗಳು ಯೋಧರಂತೆ ಗುರಿ ಸಾಧಿಸುವ ಉತ್ಸಾಹದಲ್ಲಿರಬೇಕು : ಸುಬ್ರಮಣ್ಯ ನಟ್ಟೋಜ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗಾಗಿ ಆರಂಭಿಸಿದ ರಜಾದಿನಗಳ ತರಗತಿಗಳನ್ನು ಉದ್ಘಾಟಿಸಿ ಗುರುವಾರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿದರು.
ಪುತ್ತೂರು: ಸಾಧನಾ ಪಥದಲ್ಲಿ ಗುರಿ ಮುಟ್ಟಲು ವಿದ್ಯಾರ್ಥಿಗಳು ಶಸ್ತ್ರ ಸನ್ನದ್ಧರಾದ ಯೋಧರಂತೆ ಜಾಗೃತರಾಗಿರಬೇಕು. ನಮ್ಮ ನಮ್ಮ ಕರ್ತವ್ಯಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಬೇಕಾದದ್ದು ನಮ್ಮ ಧರ್ಮ. ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು.
ಅಂದಂದು ಮಾಡಬೇಕಾದ ಕೆಲಸ ಕಾರ್ಯಗಳನ್ನು ಅಂದದೇ ಮಾಡುವ ಅಭ್ಯಾಸವನ್ನು ವಿದ್ಯಾರ್ಥಿಗಳು ಜಾರಿಗೊಳಿಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗಾಗಿ ಆರಂಭಿಸಿದ ರಜಾದಿನಗಳ ತರಗತಿಗಳನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಸಿಇಟಿ, ನೀಟ್, ತರಗತಿ ಪರೀಕ್ಷೆ, ಸಮಯ ಪಾಲನೆ ಇವುಗಳ ಮಾಹಿತಿ ಹಾಗೂ ಸಲಹೆಗಳನ್ನು ನೀಡಿ ಶುಭ ಹಾರೈಸಿದರು. ತದನಂತರ ನಡೆದ ಒರಿಯಂಟೇಶನ್ ತರಗತಿಯಲ್ಲಿ ಸಿಇಟಿ ಕೋಚಿಂಗ್ ಸಂಯೋಜಕರಾದ ಕಿಶೋರ್ ಭಟ್ ಮಾತನಾಡಿ ಹೇಗೆ ಓದಬೇಕು? ಯಾವುದನ್ನು ಓದಬೇಕು? ಎಷ್ಟು ಓದಬೇಕು? ಸಮಯದ ಮಹತ್ವ ಮುಂತಾದ ವಿಷಯಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

















