ಸ್ಥಳೀಯ
Timarody-ಬೆಳ್ತಂಗಡಿ: ಆದೇಶ ಉಲ್ಲಂಘನೆ ಆರೋಪ; ತಿಮರೋಡಿ ವಿರುದ್ಧ ಪ್ರಕರಣ ದಾಖಲು
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯವರು ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳ್ತಂಗಡಿ, ಮಾ. 7: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿಯಲ್ಲಿ ಫೆ. 8ರಂದು ನಡೆದ ಹಿಂದೂ ಸಮಾಜ ರಕ್ಷಣ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಆದೇಶಿಸಿತ್ತು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















