ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ಫಲಕ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಫಿಲೋ ಮಿಲನ ಕಾರ್ಯಕ್ರಮದ ಯಶಸ್ಸಿಗೆ ನೀವೆಲ್ಲಾ ಕಾರಣಕರ್ತರಾಗಿದ್ದೀರಿ. ಕೋವಿಡ್ […]" /> ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ಫಲಕ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಫಿಲೋ ಮಿಲನ ಕಾರ್ಯಕ್ರಮದ ಯಶಸ್ಸಿಗೆ ನೀವೆಲ್ಲಾ ಕಾರಣಕರ್ತರಾಗಿದ್ದೀರಿ. ಕೋವಿಡ್ […]"> Philomena-ಪುತ್ತೂರು: ಸಂತ ಪಿಲೋಮಿನಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ʻಫಿಲೋ ಮಿಲನ-2025ʼ - Nikhara News | Kannada News Website
Connect with us

ಶಿಕ್ಷಣ

Philomena-ಪುತ್ತೂರು: ಸಂತ ಪಿಲೋಮಿನಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ʻಫಿಲೋ ಮಿಲನ-2025ʼ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಗಣದಲ್ಲಿ ಮಾ.8ರಂದು ಹಿರಿಯ ವಿದ್ಯಾರ್ಥಿಗಳ ಸಮಾಗಮ ʻಫಿಲೋ ಮಿಲನ-2025ʼ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಗಣದಲ್ಲಿ ಮಾ.8ರಂದು ಹಿರಿಯ ವಿದ್ಯಾರ್ಥಿಗಳ ಸಮಾಗಮ ʻಫಿಲೋ ಮಿಲನ-2025ʼ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ಫಲಕ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಫಿಲೋ ಮಿಲನ ಕಾರ್ಯಕ್ರಮದ ಯಶಸ್ಸಿಗೆ ನೀವೆಲ್ಲಾ ಕಾರಣಕರ್ತರಾಗಿದ್ದೀರಿ. ಕೋವಿಡ್ ಬಳಿಕ ಫಿಲೋಮಿಲನ ಕಾರ್ಯಕ್ರಮ ಮತ್ತೆ ಆರಂಭಮಾಡಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಬಾಂಧವ್ಯ, ಸಂಬಂಧವನ್ನು ಸಂಸ್ಥೆಯೊಂದಿಗೆ ಇಟ್ಟುಕೊಳ್ಳಬೇಕು. ಮತ್ತೊಮ್ಮೆ ಉಪನ್ಯಾಸಕರನ್ನು ಪ್ರಾಂಶುಪಾಲರನ್ನು ಭೇಟಿಯಾಗುವ ಅವಕಾಶ ಬಂದಿದೆ ಎಂದು ಹೇಳಿದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

Ad Widget

Ad Widget <> Ad Widget

ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ. ಮಾತನಾಡಿ ಸಂತ ಫಿಲೋಮಿನಾ ಕಾಲೇಜಿಗೆ ತನ್ನದೇ ಆದ ಪರಂಪರೆ ಇದೆ. ವಿದ್ಯಾರ್ಥಿ ಜೀವನದಲ್ಲಿ ನಮ್ಮನ್ನು ಪಾಕ ಮಾಡಿದ ಸ್ಥಳ ಇದಾಗಿದೆ. ನಾವು ಕಲಿತ ಸಂಸ್ಥೆಯ ಮೇಲೆ ನಮಗೆ ಅಭಿಮಾನ ಇದೆ. ಈ ಅಭಿಮಾನದಿಂದ ನಮ್ಮನ್ನು ಇಲ್ಲಿಗೆ ಕರೆತಂದಿದೆ ಎಂದರು. ಹಳೆಯ ದಿನಗಳ ಸವಿನೆನಪುಗಳನ್ನು ಬಾಂಧವ್ಯಗಳನ್ನು ಮೆಲುಕು ಹಾಕೋಣ ಎಂದರು.

ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರತಿಮಾ ಹೆಗ್ಡೆ ಮಾತನಾಡಿ ಹಿರಿಯ ವಿದ್ಯಾರ್ಥಿ ಸಂಘದ ಮೂಲಕ ಮತ್ತೊಮ್ಮೆ ಕಾಲೇಜಿಗೆ ಆಗಮಿಸಲು ಅವಕಾಶ ಬಂದಿದೆ. ಕಾಲೇಜು ನನ್ನ ವ್ಯಕ್ತಿತ್ವವನ್ನು ರೂಪಿಸಲು ಸಹಕಾರಿಯಾಗಿದೆ. ಎಲ್ಲಾ ಹಿರಿಯ ವಿದ್ಯಾರ್ಥಿಗಳು ಆಸಕ್ತಿಯಿಂದ ಬಂದಿದ್ದೀರಿ ಎಂದು ಹೇಳಿದ ಅವರು ಭೂಮಿ ಮೇಲೆ ಬಾಂಧವ್ಯಗಳು ಮುಖ್ಯವಾದ ಸಂಪತ್ತು ಆಗಿದೆ ಎಂದರು.

Ad Widget

Ad Widget

ಸನ್ಮಾನ
ಮುಖ್ಯ ಅತಿಥಿಯಾಗಿದ್ದ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋರವರನ್ನು ಹಾರ, ಶಾಲು, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಉಪನ್ಯಾಸಕಿ ಉಷಾ ಸನ್ಮಾನಿತರ ಪರಿಚಯ ಮಾಡಿದರು.

ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ರಚನೆ
ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚಿಸಲು 15 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಕಾರ್ಯಕಾರಿ ಸಮಿತಿಗೆ 5 ಮಂದಿ ಉಪನ್ಯಾಸಕರು ಹಾಗೂ 10 ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೆಂದು ಪ್ರಾಂಶುಪಾಲರಾದ ಫಾ.ಅಶೋಕ್ ರಾಯನ್ ಕ್ರಾಸ್ತಾ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಆ್ಯಂಟನಿ ಪತ್ರಾವೋರವರು ನೆಟ್ಟಗಿಟ ಹೆಮ್ಮರವಾಗಿ ಬೆಳೆದಿದೆ. ಅವರ ಕನಸಿನ ದಾರಿಯಲ್ಲಿ ನಾವು ಬೆಳೆದಿದ್ದೇವೆ. ವಿದ್ಯಾರ್ಥಿಗಳಿಗೆ ಕಲಿಕೆ ಮಾತ್ರವಲ್ಲ ಅವರ ಪ್ರತಿಭೆಗಳಿಗೆ ವೇದಿಕೆ ಕೊಡುವ ಕೆಲಸ ಇಲ್ಲಿ ಆಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಬೇಕು ಎಂದರು. ಕಲಿತ ಶಾಲೆಗೆ ಮರಳಿ ಬರುವ ಅವಕಾಶ ನಿಮಗೆ ಸಿಕ್ಕಿದೆ. ಸಹಪಾಠಿಗಳೊಂದಿಗೆ ಕಳೆದ ಕ್ಷಣಗಳನ್ನು ಮೆಲಕು ಹಾಕಲು ಅವಕಾಶ ಬಂದಿದೆ. ನಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸಲು ನೀವು ಕಾರಣರಾಗಿದ್ದೀರಿ. ಹಿರಿಯ ವಿದ್ಯಾರ್ಥಿ ಸಂಘದ ಬೆಳವಣಿಗೆಗೆ ಸಹಕಾರವಿರಲಿ ಎಂದರು.

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಮಾಡಬೇಕೆಂಬ ಉದ್ದೇಶದಿಂದ ಸಂಘ ಆರಂಭಿಸಲಾಗಿದೆ. 2020ರಲ್ಲಿ ಫಿಲೋ ಮಿಲನ ಕಾರ್ಯಕ್ರಮ ಮಾಡಲಾಗಿತ್ತು. ಬಳಿಕ ಕೊರೋನಾ ಕಾರಣದಿಂದ ಕಾರ್ಯಕ್ರಮ ನಿಂತು ಹೋಗಿತ್ತು. ಇದೀಗ 4 ವರ್ಷದ ಬಳಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾಲೇಜಿಗೆ ಮರಳಿ ಬರಲು ಅವಕಾಶ ನೀಡಲು ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್. ಡಿ ಕೋಸ್ಟಾ, ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಭರತ್‌ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸಂದೇಶ್ ಜಾನ್ ಲೋಬೋ ವಂದಿಸಿ ಹಿರಿಯ ವಿದ್ಯಾರ್ಥಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.

Ad Widget

Ad Widget <> Ad Widget

ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.

ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

Ad Widget

Ad Widget <> Ad Widget

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.

Ad Widget

Ad Widget

ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್‌ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್‌ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.

Ad Widget

Ad Widget <> Ad Widget

ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.

ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

Ad Widget

Ad Widget

ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.

ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.

ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!