ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬ ‘ವಿವೇಕ ಚೇತನ್’ 2025; ದೇಶದ ಅಭಿವೃದ್ಧಿಯಲ್ಲಿ ಮಾಧ್ಯಮದ ಪಾತ್ರ ಅವಶ್ಯವಾದುದು-ರಂಜಿತ್ ಶಿರಿಯಾರ; ಸುರತ್ಕಲ್ ಗೋವಿಂದದಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
‘’ಪ್ರಸ್ತುತ ದಿನಗಳಲ್ಲಿ ಬರವಣಿಗೆ, ಸಂವಹನ ಇತ್ಯಾದಿ ಕೌಶಲಗಳೊಂದಿಗೆ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪ್ರವೇಶಿಸಿದರೆ ಒಳ್ಳೆಯ ಭವಿಷ್ಯವಿದೆ. ಅನೇಕ ಸವಾಲುಗಳನ್ನು ಎದುರಿಸಿ ಒಬ್ಬ ಪತ್ರಕರ್ತ ವರದಿಯನ್ನು ಸಿದ್ಧಪಡಿಸಬೇಕಾಗುತ್ತದೆ. ಪತ್ರಿಕೋದ್ಯಮಿಯೊಬ್ಬ ರಾಷ್ಟ್ರಾಭಿಮಾನವನ್ನೂ ಮೈಗೂಡಿಸಿಕೊಳ್ಳಬೇಕು’’ ಎಂದು ರಿಪಬ್ಲಿಕ್ ಕನ್ನಡ ವಾಹಿನಿಯ ಖ್ಯಾತ ನಿರೂಪಕ ರಂಜಿತ್ ಶಿರಿಯಾರ ನುಡಿದರು.
ಪುತ್ತೂರು: ‘’ಪ್ರಸ್ತುತ ದಿನಗಳಲ್ಲಿ ಬರವಣಿಗೆ, ಸಂವಹನ ಇತ್ಯಾದಿ ಕೌಶಲಗಳೊಂದಿಗೆ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪ್ರವೇಶಿಸಿದರೆ ಒಳ್ಳೆಯ ಭವಿಷ್ಯವಿದೆ. ಅನೇಕ ಸವಾಲುಗಳನ್ನು ಎದುರಿಸಿ ಒಬ್ಬ ಪತ್ರಕರ್ತ ವರದಿಯನ್ನು ಸಿದ್ಧಪಡಿಸಬೇಕಾಗುತ್ತದೆ. ಪತ್ರಿಕೋದ್ಯಮಿಯೊಬ್ಬ ರಾಷ್ಟ್ರಾಭಿಮಾನವನ್ನೂ ಮೈಗೂಡಿಸಿಕೊಳ್ಳಬೇಕು’’ ಎಂದು ರಿಪಬ್ಲಿಕ್ ಕನ್ನಡ ವಾಹಿನಿಯ ಖ್ಯಾತ ನಿರೂಪಕ ರಂಜಿತ್ ಶಿರಿಯಾರ ನುಡಿದರು.

ಇವರು ವಿವೇಕಾನಂದ ಮಹಾವಿದ್ಯಾಲಯ( ಸ್ವಾಯತ್ತ) ಇಲ್ಲಿ ಪದವಿ ಪತ್ರಿಕೋದ್ಯಮ ವಿಭಾಗ, ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ವಿವೇಕ್ ಚೇತನ’ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಅಮೃತ ವಿಶ್ವ ವಿದ್ಯಾಪೀಠಂ ಇಲ್ಲಿನ ದೃಶ್ಯ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಡಾ. ಮೌಲ್ಯ ಬಾಲಾಡಿ ” ಒಳ್ಳೆಯ ಪತ್ರಿಕೋದ್ಯಮಿಯಾಗಲು ಉತ್ತಮ ಕೇಳುಗನಾಗಿರಬೇಕು. ಮೊಬೈಲ್ ಬಳಕೆಯಲ್ಲೇ ನಾವು ಕಳೆದು ಹೋಗಬಾರದು. ವಿದ್ಯಾರ್ಥಿಗಳು ಸದಭಿರುಚಿಯ ಚಟುವಟಿಕೆಗಳನ್ನು ಬೆಳೆಸಿಕೊಳ್ಳಬೇಕು. ಕಥೆಗಾರ, ಬರಹಗಾರರ ಅಗತ್ಯ ಇಂದು ಮಾಧ್ಯಮ ಕ್ಷೇತ್ರಕ್ಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ವಿನೂತನ’ ಹಾಗೂ ‘ವಿಕಸನ’ವನ್ನು ಬಿಡುಗಡೆಗೊಳಿಸಲಾಯಿತು.
ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಿಗ್ಬಾಸ್ ಖ್ಯಾತಿಯ ಧನರಾಜ್ ಆಚಾರ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ವಿದ್ಯೆಯೊಂದಿಗೆ ಸಂಸ್ಕಾರವನ್ನೂ ನೀಡಿ ವಿದ್ಯಾರ್ಥಿಗಳನ್ನು ರೂಪಿಸುತ್ತದೆ. ಅದನ್ನು ವಿದ್ಯಾರ್ಥಿಗಳು ಮನಗಾಣಬೇಕು. ಸಾಧಿಸುತ್ತೇನೆ ಎಂಬ ಛಲದಿಂದ ಮುಂದುವರಿದಾಗ ಯಶಸ್ಸಿನ ಮೆಟ್ಟಿಲೇರಬಹುದು. ಯುವ ಮನಸ್ಸುಗಳು ಕ್ರಿಯಾಶೀಲರಾಗಿ ಮುಂದುವರಿಯಬೇಕು ” ಎಂದು ನುಡಿದರು. ಅಧ್ಯಕ್ಷತೆಯನ್ನು ವಹಿಸಿದ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹಿತನುಡಿಗಳನ್ನಾಡಿದರು
ಮೀಡಿಯಾ ಹಬ್ಬದಲ್ಲಿ 23 ಕಾಲೇಜುಗಳು ಭಾಗವಹಿಸಿದ್ದು ಸಮಗ್ರ ಪ್ರಶಸ್ತಿಯನ್ನು ಗೋವಿಂದ ದಾಸ ಕಾಲೇಜು ಸುರತ್ಕಲ್ ಪಡೆದುಕೊಂಡಿತು. ಎಸ್ಡಿಎಂ ಕಾಲೇಜು ಉಜಿರೆ ರನ್ನರ್ ಅಪ್ ಆಗಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ಕರ್ಯಕ್ರಮ ಸಂಯೋಜಕ ಸುತನ್ ಕೇವಳ, ವಿಶೇಷಾಧಿಕಾರಿ ಡಾ.ಶ್ರೀಧರ್ ನಾಯಕ್, ಪಿಜಿ ಡೀನ್ ಡಾ.ವಿಜಯಸರಸ್ವತಿ, ವಿವೇಕ ಚೇತನ್ ಕಾರ್ಯಕ್ರಮದ ಸಂಯೋಜಕ ಹರಿಪ್ರಸಾದ್ ಈಶ್ವರಮಂಗಲ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಹೆಚ್.ಜಿ ಶ್ರೀಧರ ಸ್ವಾಗತಿಸಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ ಪಿ.ಆರ್ ನಿಡ್ಪಳ್ಳಿ ವಂದಿಸಿದರು. ದೀಕ್ಷಾ, ಪಂಚಮಿ, ಶೈನಿತಾ , ಚೈತನ್ಯ ಮತ್ತು ಭೂಮಿಕಾ ನಿರ್ವಹಿಸಿದರು. ಉಪನ್ಯಾಸಕಿಯರಾದ ಹವ್ಯಾ ಪುರ ಹಾಗೂ ಅಕ್ಷತಾ ಸಹಕರಿಸಿದರು.
ಮೈತ್ರೇಯಿ ಗುರುಕುಲಕ್ಕೆ ಈ ಬಾರಿಯ ವಿವೇಕ ಚೇತನ ಪ್ರಶಸ್ತಿ
ಈ ಬಾರಿಯ ವಿವೇಕ ಚೇತನ ಪ್ರಶಸ್ತಿಯನ್ನು ಬಂಟ್ವಾಳದ ಮೈತ್ರೇಯಿ ಗುರುಕುಲದ ಅಧ್ಯಾಪಕಿ ಶ್ರೀಮತಿಯವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ನೀಡಿ ಮಾತನಾಡಿ, ‘’ಹೆಣ್ಣು ಸಮಾಜಕ್ಕೊಂದು ಆಸ್ತಿ. ನೈತಿಕ ಮೌಲ್ಯ, ಸಂಸ್ಕಾರಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವಲ್ಲಿ ಸ್ತ್ರೀಯರ ಪಾತ್ರ ಮಹತ್ವದ್ದಾಗಿದೆ. ಅಂತಹಾ ಸ್ತ್ರೀಯರಿಗೆ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ನೀಡುವ ಮೈತ್ರೇಯಿ ಗುರುಕುಲಕ್ಕೆ ಪ್ರಶಸ್ತಿ ನೀಡಿದ ವಿವೇಕಾನಂದ ಮಹಾವಿದ್ಯಾಲಯದ ನಡೆ ಶ್ಲಾಘನೀಯ ” ಎಂದು ನುಡಿದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು16 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್23 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ16 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ21 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ22 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ22 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ22 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















