ಬಿಗ್ ನ್ಯೂಸ್
Bantwal-ಬಂಟ್ವಾಳ: ಹಲವು ಅನುಮಾನಗಳತ್ತ ದಿಗಂತ್ ನಾಪತ್ತೆ ಪ್ರಕರಣ; ಪೂರ್ವನಿಯೋಜಿತವಾಗಿಯೇ ಬಟ್ಟೆ, ಶೂ ಜೊತೆ ಮನೆ ಬಿಟ್ಟಿದ್ದ ದಿಗಂತ್
ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ ತನಿಖೆ ವೇಳೆ ಹಲವು ವಿಚಾರಗಳು ತಿಳಿದುಬಂದಿದೆ.
ಬಂಟ್ವಾಳ: ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ ತನಿಖೆ ವೇಳೆ ಹಲವು ವಿಚಾರಗಳು ತಿಳಿದುಬಂದಿದೆ.
ಮನೆಗೆ ಮರಳಲು ನಕಾರ:
ದಿಗಂತ್ ಉಡುಪಿಯಲ್ಲಿ ಪತ್ತೆಯಾದ ಕೂಡಲೇ ಆತನನ್ನು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಮಂಗಳೂರಿಗೆ ಕರೆತಂದಿದ್ದರು. ಆತನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರಿಗೆ ಯಾವ ಕಾರಣಕ್ಕೆ ಮನೆ ಬಿಟ್ಟು ತೆರಳಿರುವುದು ಎಂದು ತಿಳಿಸಿ, ಮಹತ್ವದ ಹೇಳಿಕೆ ಕೂಡ ನೀಡಿದ್ದಾನೆ.
ತಾನು ವಾಪಸು ಮನೆಗೆ ಹೋಗುವುದಿಲ್ಲ ಎಂಬ ಮಾತನ್ನು ಪೋಲೀಸರಲ್ಲಿ ಹೇಳಿಕೊಂಡಿದ್ದಾನೆ. ಆದರೆ ಯಾವ ಕಾರಣಕ್ಕಾಗಿ ವಾಪಸು ಮನೆಗೆ ಹೋಗುವುದಿಲ್ಲ ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ. ಇದೇ ಮಾತನ್ನು ಆತನ ಪೋಷಕರ ಬಳಿಯೂ ಹೇಳಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಬಟ್ಟೆ, ಶೂಗಳನ್ನು ತೆಗೆದುಕೊಂಡು ಹೋಗಿದ್ದ
ಫೆ. 25 ರಂದು ಕಾಣೆಯಾಗಿದ್ದ ದಿಗಂತ್, ಸತತ 12 ದಿನಗಳ ಕಾಲ ಊರೂರು ಸುತ್ತಿ ಉಡುಪಿಯಲ್ಲಿ ಸಿಕ್ಕಿಹಾಕಿಕೊಂಡ ಬಳಿಕ ಮನೆಗೆ ತೆರಳುವುದಿಲ್ಲ ಎಂಬ ಮಾತಿನ ಮರ್ಮವೇನು? ಎಂಬುದು ನಿಗೂಢವಾಗಿ ಉಳಿದಿದೆ. ಮನೆ ಬಿಟ್ಟುತೆರಳುವುದು ಪೂರ್ವನಿಯೋಜಿತ ಎಂಬಂತೆ, ದಿಗಂತ್ ಮನೆಯಿಂದ ಹೊರಟು ಹೋಗುವಾಗ ಆತನ ಜೊತೆ ಬಟ್ಟೆ ಹಾಗೂ ಶೂಗಳನ್ನು ಆತ ತೆಗೆದುಕೊಂಡು ಹೋಗಿದ್ದ ಎಂಬ ಮಹತ್ವದ ವಿಚಾರವನ್ನು ಪೊಲೀಸರು ದೃಢಪಡಿಸಿದ್ದಾರೆ. ಆತನ ಬಳಿಯಲ್ಲಿ ಇದ್ದ ಬಟ್ಟೆ ಹಾಗೂ ಶೂಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈಗ ದಿಗಂತ್ ಬೋಂದೆಲ್ನ ಬಾಲಕರ ಮಂದಿರದಲ್ಲಿದ್ದಾನೆ.
ತನಿಖೆಗೆ ಸಹಕಾರ ನೀಡದ ಪೋಷಕರು:
ದಿಗಂತ್ ನಾಪತ್ತೆಯಾದ ಬಳಿಕ ಈತನ ಪತ್ತೆಗಾಗಿ ಪೋಲೀಸ್ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿತು. ಈತನ ಪತ್ತೆಯ ಸಹಕಾರದ ದೃಷ್ಟಿಯಿಂದ ಪೋಲೀಸರ ತಂಡ ಪೋಷಕರನ್ನು ತನಿಖೆ ನಡೆಸುವ ವೇಳೆ ಸರಿಯಾದ ಸಹಕಾರ ನೀಡುತ್ತಿರಲಿಲ್ಲ. ಹಾಗಾಗಿಯೇ ಪ್ರಕರಣ ಜಟಿಲವಾಗಿ, ಯಾವುದೇ ಸ್ಪಷ್ಟವಾದ ಸುಳಿವು ಸಿಗಲು ಸಾಧ್ಯವಾಗಿರಲಿಲ್ಲ. ಈತ ಮನೆಯಿಂದ ಹೊರಟ ಸಮಯವನ್ನು ಕೂಡ ಸರಿಯಾದ ರೀತಿಯಲ್ಲಿ ಪೊಲೀಸರ ಬಳಿ ತಿಳಿಸಿಲ್ಲ ಎಂದು ಹೇಳಲಾಗಿದೆ.
ದಿಗಂತ್ ಮೂರು ಮೊಬೈಲ್ ಗಳು ಬಳಕೆ ಮಾಡುತ್ತಿರುವುದು ತನಿಖೆಯ ವೇಳೆ ತಿಳಿದಿದ್ದು, ಆರಂಭದಲ್ಲಿ ಮನೆಯವರು ನಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದರು. ಬಳಿಕ ಈತ ಬಳಕೆ ಮಾಡುತ್ತಿದ್ದ ಮೊಬೈಲ್ ಬಗ್ಗೆ ಒಪ್ಪಿಕೊಂಡಿದ್ದರು. ಮನೆಯಿಂದ ಹೋಗುವಾಗ ಆತ ಬಟ್ಟೆ ಹಾಗೂ ಶೂ ತೆಗೆದುಕೊಂಡು ಹೋಗಿರುವ ವಿಚಾರ ಪೋಲೀಸರಿಗೆ ತನಿಖೆಯ ವೇಳೆ ಗೊತ್ತಾಗಿದ್ದು, ಈ ವಿಚಾರವನ್ನು ಕೂಡ ಮನೆಯವರು ಮುಚ್ಚಿಟ್ಟಿದ್ದರು ಎಂದು ಪೋಲೀಸ್ ಮೂಲಗಳು ತಿಳಿಸಿವೆ.
ಮಾಹಿತಿಯಲ್ಲಿ ವೈರುಧ್ಯ:
ನಾಪತ್ತೆಯಾದ ಸಂದರ್ಭದಲ್ಲಿ ಆತ ಬಿಳಿ ಟೀ ಶರ್ಟ್ ಹಾಕಿಕೊಂಡು ತೆರಳಿದ್ದ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಬಿಳಿ ಟೀ ಶರ್ಟ್ ಹಾಕಿಕೊಂಡು ಹೋಗಿಲ್ಲ ಎಂಬುದರ ಬಗ್ಗೆ ಪೋಲೀಸರ ತನಿಖೆಯ ವೇಳೆ ಕಂಡು ಬಂದಿದೆ. ಈತ ಉಡುಪಿ ಡೀ ಮಾರ್ಟ್ ಮಳಿಗೆಯಲ್ಲಿ ಚಾಕು ಪಡೆದುಕೊಂಡಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮನೆಯವರಲ್ಲಿ ಪೊಲೀಸರು ಆತನ ಬಟ್ಟೆಬರೆಗಳ ಬಗ್ಗೆ ಕೇಳಿದಾಗ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ.
ದಿಗಂತ್ ಇಂದು ಹೈಕೋರ್ಟ್ಗೆ
ದಿಗಂತ್ ಮನೆಮಂದಿ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಮಾ.12 ರಂದು ಹೈಕೋರ್ಟ್ ಗೆ ಹಾಜರು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಹೈಕೋರ್ಟ್ ನಲ್ಲಿ ದಿಗಂತ್ ನೀಡಬಹುದಾದ ಹೇಳಿಕೆಗಳು ಒಟ್ಟು ಪ್ರಕರಣದ ಮುಂದಿನ ಹಾದಿಗೆ ದಿಕ್ಸೂಚಿಯಾಗಲಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















