ಸಿನೆಮಾ
Katrina Kaif-ಕುಕ್ಕೆಯಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್; ಸಂತಾನ ಪ್ರಾಪ್ತಿಗಾಗಿ ಸರ್ಪಸಂಸ್ಕಾರ ಸೇವೆ
ಇಂದು ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ವಿಶೇಷ ಪೂಜೆ ನೆರವೇರಿಸಿದ ನಟಿ ಕತ್ರಿನಾ ಕೈಫ್, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ನಾಗ ಪ್ರತಿಷ್ಠೆ ಪೂಜೆಯಲ್ಲಿ ಭಾಗಿಯಾದರು. ಅವರು ವಿಶೇಷ ಸಂಕಲ್ಪ ಮಾಡಿ ಸರ್ಪ ಸಂಸ್ಕಾರ ಸೇವೆಯನ್ನು ಮಾಡಿದ್ದು ಅವರಿಗೆ ಪತಿ ವಿಕ್ಕಿ ಕೌಶಲ್, ತಂದೆ-ತಾಯಿ ಸಾಥ್ ನೀಡಿದ್ದರು
ಸುಬ್ರಹ್ಮಣ್ಯ, ಮಾ. 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಂಗಳವಾರ ಆಗಮಿಸಿದ್ದು ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಮಂಗಳವಾರ ಪೂಜೆಯಲ್ಲಿ ಪಾಲ್ಗೊಂಡ ಅವರು ಖಾಸಗಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿದರು. ಇಂದು ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ವಿಶೇಷ ಪೂಜೆ ನೆರವೇರಿಸಿದ ನಟಿ ಕತ್ರಿನಾ ಕೈಫ್, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ನಾಗ ಪ್ರತಿಷ್ಠೆ ಪೂಜೆಯಲ್ಲಿ ಭಾಗಿಯಾದರು. ಅವರು ವಿಶೇಷ ಸಂಕಲ್ಪ ಮಾಡಿ ಸರ್ಪ ಸಂಸ್ಕಾರ ಸೇವೆಯನ್ನು ಮಾಡಿದ್ದು ಅವರಿಗೆ ಪತಿ ವಿಕ್ಕಿ ಕೌಶಲ್, ತಂದೆ-ತಾಯಿ ಸಾಥ್ ನೀಡಿದ್ದರು
ಸಂತಾನ ಪ್ರಾಪ್ತಿಗಾಗಿ ಸರ್ಪ ಸಂಸ್ಕಾರ ಸೇವೆ
ಸಂತಾನ ಪ್ರಾಪ್ತಿ, ವೃತ್ತಿ ಜೀವನ ಹಾಗೂ ಕುಟುಂಬದ ಹಿತಕ್ಕಾಗಿ ಕತ್ತಿನಾ ಸರ್ಪ ಸಂಸ್ಕಾರ ಸೇವೆ ನೆರವೇರಿಸಿರುವುದಾಗಿ ತಿಳಿದುಬಂದಿದೆ. ಆಶ್ಲೇಷ ನಕ್ಷತ್ರದಂದೇ ಸೇವೆ ನೆರವೇರಿಸುವ ಹಿನ್ನೆಲೆಯಲ್ಲಿ ಕತ್ರಿನಾ ಮಂಗಳವಾರ ಕ್ಷೇತ್ರಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ತಮಿಳು ಚಿತ್ರರಂಗದ ನಿರ್ದೇಶಕರೋರ್ವರ ನಿರ್ದೇಶನದಂತೆ ಅವರಿಂದ ಮಾಹಿತಿ ಪಡೆದು ಕತ್ರಿನಾ ಕುಕ್ಕೆಗೆ ಬಂದಿರುವುದಾಗಿ ತಿಳಿದುಬಂದಿದೆ.
ಮಾಧ್ಯಮಗಳಿಂದ ಅಂತರಕಾಯ್ದುಕೊಂಡ ನಟಿ
ಕತ್ರಿನಾ ಖಾಸಗಿ ವಸತಿ ಗೃಹದಿಂದ ಕಾರಿನಲ್ಲಿ ದೇವಸ್ಥಾನದವರೆಗೆ ಆಗಮಿಸಿದ್ದು ಈ ವೇಳೆ ಮುಖಕ್ಕೆ ಮಾಸ್ಕ್ ತಲೆಗೆ ದುಪಟ್ಟ ಹಾಕಿಕೊಂಡಿದ್ದರು. ಪೂಜೆಯ ಸಂದರ್ಭದಲ್ಲೂ ಮಾಸ್ಕ್ ಹಾಗೂ ದುಪಟ್ಟ ಧರಿಸಿದ್ದರು. ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದರು. ಮಧ್ಯಾಹ್ನ ದೇವಸ್ಥಾನದ ಭೋಜನ ಶಾಲೆಯಲ್ಲಿ (ವಿಐಪಿ) ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲೂ ಸ್ವಲ್ಪ ಹೊತ್ತು ಕಾದು ಮಾಧ್ಯಮದವರ ಕಣ್ಣು ತಪ್ಪಿಸಿಯೇ ತೆರಳಿದರು.
ಕತ್ರಿನಾರ ವೀಡಿಯೋ ಚಿತ್ರೀಕರಣಕ್ಕೆ ಮಾಧ್ಯಮದವರು ಮುಂದಾದಾಗ ಆಕೆಯ ಜತೆಗಿದ್ದವರು ವೀಡಿಯೋ, ಫೋಟೊ ತೆಗೆಯದಂತೆ ವಾಗ್ವಾದ ನಡೆಸಿದ್ದು ವೀಡಿಯೋ ಮಾಡಿದ ಪತ್ರಕರ್ತರೋರ್ವರ ಮೊಬೈಲನ್ನು ಕತ್ರಿನಾ ಜತೆಗಿದ್ದ ಮಹಿಳೆಯೋರ್ವರು ಕಸಿದುಕೊಂಡ ಘಟನೆಯೂ ನಡೆದಿದೆ. ಇದಕ್ಕೆ ತೀವ್ರ ಆಕ್ರೋಶವೂ ವ್ಯಕ್ತವಾಯಿತು.
ಗೌಪ್ಯತೆ ಕಾಪಾಡುವಂತೆ ಕೋರಿಕೆ:
ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ವಿಶೇಷ ಪೂಜೆ ನೆರವೇರಿಸಿದ ನಟಿ ಕತ್ರಿನಾ ಕೈಫ್, ಸರ್ಪ ಸಂಸ್ಕಾರ,ಆಶ್ಲೇಷ ಬಲಿ ಪೂಜೆ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ನಾಗ ಪ್ರತಿಷ್ಠೆ ಪೂಜೆಯಲ್ಲಿ ಭಾಗಿಯಾದರು. ಅವರು ವಿಶೇಷ ಸಂಕಲ್ಪ ಮಾಡಿ ಸರ್ಪ ಸಂಸ್ಕಾರ ಸೇವೆಯನ್ನು ಮಾಡಿದ್ದಾರೆ. ಒಂದು ವಾರದ ಮುಂಚೆಯೇ ಸರ್ಪಸಂಸ್ಕಾರ ಸೇವೆ ಬುಕ್ ಮಾಡಿದ್ದರು ಹಾಗೂ ಬಹಳ ಗೌಪ್ಯತೆಯನ್ನು ಕಾಪಾಡುವಂತೆ ಕೋರಿಕೊಂಡಿದ್ದರು ಎಂದು ಕುಕ್ಕೆ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮಾಹಿತಿ ನೀಡಿದ್ದಾರೆ.
ಪತಿ ವಿಕ್ಕಿ ಕೌಶಲ್, ತಂದೆ-ತಾಯಿಯೊಂದಿಗೆ ಎರಡು ದಿನ ಶ್ರದ್ಧಾ ಭಕ್ತಿಯಿಂದ ಪೂಜೆಗಳಲ್ಲಿ ಭಾಗವಹಿಸಿದ ಕತ್ರಿನಾ, ಪೂಜೆಗಳನ್ನು ಮುಗಿಸಿದ ದೇವಸ್ಥಾನದಿಂದ ನಿರ್ಗಮಿಸಿದ್ದಾರೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಸಿನೆಮಾ
Bethlehem Family Unit-ಮಲಯಾಳಂ ಚಿತ್ರರಂಗದಲ್ಲಿ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’: ಅ.2ಕ್ಕೆ ಒಟಿಟಿ ಎಂಟ್ರಿ
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಗಿರೀಶ್ ಎ.ಡಿ. ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 326 ಕೋಟಿ ರೂ. ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ‘ಲೋಕಾ ಚಾಪ್ಟರ್ 1: ಚಂದ್ರ’ ಚಿತ್ರ 304 ಕೋಟಿ ರೂ. ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿತ್ತು. ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಈ ದಾಖಲೆಯನ್ನು ಹಿಂದಿಕ್ಕಿದೆ.
ಚಿತ್ರವು ಕೇರಳದಲ್ಲಿ ಮೊದಲ ಬಾರಿಗೆ 150 ಕೋಟಿ ರೂ. ಗಳಿಕೆ ದಾಖಲಿಸಿದ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅತಿ ವೇಗವಾಗಿ 300 ಕೋಟಿ ರೂ. ಕ್ಲಬ್ ಸೇರಿದ ಚಿತ್ರ ಎಂಬ ದಾಖಲೆಗೂ ಪಾತ್ರವಾಗಿದೆ.
ಸಿನೆಮಾ
Hanuman Ansh-₹2 ಕೋಟಿ ಬಜೆಟ್ ಸಿನಿಮಾ ₹347 ಕೋಟಿ ಗಳಿಕೆ; ‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ‘ಹನುಮಾನ್ ಅಂಶ್ʼ
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ.
ಮುಂಬಯಿ: ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ.
ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯಾಗಿ 45 ದಿನಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಗಳಿಕೆ ಮುಂದುವರಿದಿರುವುದು ವಿಶೇಷವಾಗಿದೆ.
‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ಸಿನಿಮಾ
ಭಾನುವಾರ (ಸೆ.20) ‘ಹನುಮಾನ್ ಅಂಶ್’ ಭಾರತದಲ್ಲಿ ₹13.75 ಕೋಟಿ ಹಾಗೂ ವಿದೇಶದಲ್ಲಿ ₹1.50 ಕೋಟಿ ಗಳಿಕೆ ಮಾಡಿದೆ. ಇದರೊಂದಿಗೆ ಚಿತ್ರದ ಒಟ್ಟು ಜಾಗತಿಕ ಗಳಿಕೆ ₹347.05 ಕೋಟಿಗೆ ತಲುಪಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ.
ಈ ಮೂಲಕ ರಾಮ್ ಚರಣ್ ಅಭಿನಯದ ‘ಪೆದ್ದಿ’ ಹಾಗೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗಳ ವಿಶ್ವದಾದ್ಯಂತದ ಗಳಿಕೆಯನ್ನು ‘ಹನುಮಾನ್ ಅಂಶ್’ ಹಿಂದಿಕ್ಕಿದೆ.
‘ಪೆದ್ದಿ’ ₹341.90 ಕೋಟಿ ಹಾಗೂ ‘ಟಾಕ್ಸಿಕ್’ ₹341.99 ಕೋಟಿ ಗಳಿಕೆ ಮಾಡಿದ್ದರೆ, ‘ಹನುಮಾನ್ ಅಂಶ್’ ₹347.05 ಕೋಟಿ ಗಳಿಕೆಯೊಂದಿಗೆ ಈ ಎರಡೂ ಸಿನಿಮಾಗಳನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲಾ’ ಸಿನಿಮಾದ ಗಳಿಕೆಯನ್ನೂ ಹಿಂದಿಕ್ಕಿರುವ ‘ಹನುಮಾನ್ ಅಂಶ್’, ಈ ವರ್ಷದ ಹಿಂದಿ ಸಿನಿಮಾಗಳ ಪೈಕಿ ಅತಿ ಹೆಚ್ಚು ಗಳಿಕೆ ಕಂಡ ಮೂರನೇ ಚಿತ್ರವಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ.
ಇತರ ಭಾಷೆಯ ಸಿನಿಮಾಗಳನ್ನೂ ಹಿಂದಿಕ್ಕಿದ ‘ಹನುಮಾನ್ ಅಂಶ್’
ಕಳೆದ ವಾರದಲ್ಲಿಯೂ ಸಿನಿಮಾ ತನ್ನ ಗಳಿಕೆಯ ಓಟ ಮುಂದುವರಿಸಿದ್ದು, ‘ಜನಾ ನಾಯಕನ್’, ‘ಬೆತ್ತೆಹೇಮ್ ಕುಟುಂಬ ಯೂನಿಟ್’, ‘ಮಾನ ಶಂಕರ ವರಪ್ರಸಾದ್ ಗಾರು’ ಹಾಗೂ ‘ಕರುಪ್ಪು’ ಸೇರಿದಂತೆ ವಿವಿಧ ಚಿತ್ರರಂಗಗಳ ಪ್ರಮುಖ ಸಿನಿಮಾಗಳ ಜಾಗತಿಕ ಗಳಿಕೆಯನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ‘ಮಹಾರಾಜ್ ಜಿ’ ಎಂದೇ ಜನಪ್ರಿಯರಾಗಿದ್ದ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದೆ.
ಸ್ವಯಂಭೂ ಮೀಡಿಯಾ ನೆಟ್‌ವರ್ಕ್, ರಾಗಿಣಿ ಎಸ್., ನಮ್ರತಾ ಜಿ.ಎಸ್. ಹಾಗೂ ಅನುಪ್ರಿಯಾ ಎ. ನಗರ್ ನಿರ್ಮಿಸಿರುವ ಚಿತ್ರದಲ್ಲಿ ಚಂದನ್ ಕೆ. ಆನಂದ್ ಮತ್ತು ಶೋಭಿನವ್ ಸತ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿಖಿಲ್ ದುಬೆ, ಉದಯಸಿಂಹ ರಜಪೂತ್, ಪೂರ್ಣಿಮಾ ತಿವಾರಿ ಹಾಗೂ ಮನೀಶ್ ಚೌಧರಿ ಸೇರಿದಂತೆ ಹಲವು ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


















