ಬಿಗ್ ನ್ಯೂಸ್
Sameer MD-ಸೌಜನ್ಯ ಪ್ರಕರಣದ ವಿಡಿಯೋ; ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ
ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪೋಸ್ಟ್ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ವಿಡಿಯೋ ಪ್ರಸಾರ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆ ಎಂಬ ಆರೋಪ ಹೊರಿಸಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪೋಸ್ಟ್ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ವಿಡಿಯೋ ಪ್ರಸಾರ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆ ಎಂಬ ಆರೋಪ ಹೊರಿಸಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299ರ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಮೀರ್ ಎಂ.ಡಿ. ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಈ ಆದೇಶ ನೀಡಿದೆ.
ವಾದ ಆಲಿಸಿದ ಬಳಿಕ ನ್ಯಾಯಾಲಯ, ಎಫ್‌ಐಆರ್‌ಗೆ ತಡೆ ನೀಡಿ ರಾಜ್ಯ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.
ಸಮೀರ್ ಎಂಡಿ ಪರ ಹಾಜರಾಗಿ ವಾದ ಮಂಡಿಸಿದ ಸುಪ್ರೀಂ ಕೋರ್ಟ್ ವಕೀಲರಾದ ಎ. ವೇಲನ್ ಮತ್ತು ಕೆ.ವಿ. ಧನಂಜಯ, “ಎಫ್‌ಐಆರ್ ದಾಖಲಿಸಿರುವುದು ಕಾನೂನು ಬಾಹಿರವಾಗಿದೆ. ಇದು ನಾಗರಿಕರಿಗೆ ಸಾಂವಿಧಾನಿಕವಾಗಿ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು 19(1) ಮತ್ತು 21ನೇ ವಿಧಿಗೆ ವಿರುದ್ಧವಾಗಿದೆ,” ಎಂದರು.
ಅಲ್ಲದೆ, ”ಧಾರ್ಮಿಕ ವ್ಯಕ್ತಿಯ ಹೇಳಿಕೆ ಧರ್ಮದ ವಿರುದ್ಧ ಹೇಳಿಕೆ ಆಗುವುದಿಲ್ಲ. ಅದರ ವ್ಯಾಪ್ತಿ ಸೀಮಿತವಾದುದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆರೋಪಗಳು ಈ ಪ್ರಕರಣದಲ್ಲಿ ಅನ್ವಯವಾಗುವುದಿಲ್ಲ” ಎಂದು ವಾದಿಸಿದರು.
ಪೊಲೀಸ್ ನೋಟಿಸ್‌ಗೂ ತಡೆ
ಈ ಹಿಂದೆ ಯೂಟ್ಯೂಬ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ.ಗೆ ಪೊಲೀಸರು ಜಾರಿ ಮಾಡಿದ್ದ ನೋಟಿಸ್‌ಗೆ ಕಳೆದ ಗುರುವಾರ (ಮಾ. 6) ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಎಫ್‌ಐಆರ್ ಪ್ರತಿ ನೀಡದೆಯೇ ವಿಚಾರಣೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಹೈಕೋರ್ಟ್‌ನ ಇನ್ನೊಂದು ಪೀಠ ಎಪ್‌ಐಆರ್‌ಗೇ ತಡೆ ನೀಡಿದೆ.
ಪ್ರಕರಣವೇನು?
ಎಂ.ಡಿ ಧರ್ಮಸ್ಥಳದ ವಿದ್ಯಾರ್ಥಿನಿ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಅರ್ಜಿದಾರ ಸಮೀರ್ ವಿಡಿಯೋ ಮಾಡಿದ್ದರು. ಯೂಟ್ಯೂಬ್‌ನಲ್ಲಿ ಧೂತ ಸಮೀರ್ ಎಂಡಿ ಹೆಸರಿನ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಇದನ್ನು ಪೋಸ್ಟ್ ಮಾಡಿದ್ದರು. ಭಾರೀ ವೈರಲ್ ಆಗಿರುವ ಈ ವಿಡಿಯೋದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಅಲ್ಲದೆ, ಸಮೀರ್ ಕಚೇರಿಗೆ ಭೇಟಿ ನೀಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದೂ ಸೂಚಿಸಿದ್ದರು. ಈ ನೋಟಿಸ್ ಹಾಗೂ ಎಫ್‌ಐಆರ್ ಪ್ರಶ್ನಿಸಿ ಸಮೀರ್ ಹೈಕೋರ್ಟ್ ಮೊರೆ ಹೋಗಿದ್ದರು.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















