ಅಪರಾಧ
Bengaluru-ಬೆಂಗಳೂರು : ಅತ್ತೆ ಮಾವನ ಮೇಲೆ ವಿಕ್ಟೋರಿಯ ಆಸ್ಪತ್ರೆಯ ವೈದ್ಯೆಯಿಂದ ದೌರ್ಜನ್ಯ : ವಿಡಿಯೋ ವೈರಲ್
ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ವಯಸ್ಸಾದ ಅತ್ತೆ ಮಾವನ ಮೇಲೆ ದೌರ್ಜನ್ಯವೆಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿರುವ ನೆಟ್ಟಿಗರು ಸೊಸೆಯಿಂದ ಹಲ್ಲೆಗೊಳಗಾಗಿರುವ ವಯಸ್ಸಾದ ಅತ್ತೆ ಮಾವನಿಗೆ ನ್ಯಾಯಕೊಡಿಸಿ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ವಯಸ್ಸಾದ ಅತ್ತೆ ಮಾವನ ಮೇಲೆ ದೌರ್ಜನ್ಯವೆಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿರುವ ನೆಟ್ಟಿಗರು ಸೊಸೆಯಿಂದ ಹಲ್ಲೆಗೊಳಗಾಗಿರುವ ವಯಸ್ಸಾದ ಅತ್ತೆ ಮಾವನಿಗೆ ನ್ಯಾಯಕೊಡಿಸಿ ಎಂದು ಆಗ್ರಹಿಸಿದ್ದಾರೆ.
ಮಾ.10 ರಂದು ರಾತ್ರಿ 8:15 ಕ್ಕೆ ಘಟನೆ ನಡೆದಿದ್ದು, ಗುರುವಾರ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಹಿಳೆ ಬೆಂಗಳೂರಿನ ವೈದ್ಯೆ ಡಾ. ಪ್ರಿಯದರ್ಶಿನಿ ಎಂದು ಹೇಳಲಾಗುತ್ತಿದೆ.
ಏಕಾಏಕಿ ಮನೆಗೆ ಬಂದು ವಯಸ್ಸಾದ ಅತ್ತೆ ಮಾವನ ಮೇಲೆ ಹಲ್ಲೆ ಮಾಡಿದ ವೈದ್ಯೆ ಅತ್ತೆಯ ತಾಳಿ ಹಿಡಿದು, ಕಾಲಿಂದ ಹೊಡೆದು ಹಿಂಸೆ ನೀಡಿದ್ದಾರೆ. ಟ್ವೀಟರ್ನಲ್ಲಿ ಹಲ್ಲೆ ಮಾಡಿರುವ ವಿಡಿಯೋ ಹಂಚಿಕೊಂಡಿರುವ ಹಲವರು ಬೆಂಗಳೂರು ನಗರ ಪೊಲೀಸ್ಗೆ ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದೂರು ನೀಡಿದ ವೈದ್ಯೆಯ ಮಾವ:
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯೆ ವಿರುದ್ಧ ಮಾವನಾದ ನರಸಿಂಹಯ್ಯ ಎಂಬುವವರು ದೂರು ನೀಡಿದ್ದಾರೆ. 2007 ರಲ್ಲಿ ನನ್ನ ಮಗ ಹಾಗೂ ಪ್ರಿಯದರ್ಶಿನಿ ಎಂಬುವವರಿಗೆ ಮದುವೆಯಾಗಿತ್ತು. ಸದ್ಯ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಕರಣವು ಕೋರ್ಟ್ನಲ್ಲಿದೆ. ಮಾರ್ಚ್ 10 ರ ರಾತ್ರಿ ಏಕಾಏಕಿ ಪ್ರಿಯದರ್ಶಿನಿ ತನ್ನ ಮಕ್ಕಳೊಂದಿಗೆ ಮನೆಗೆ ಬಂದು ನನಗೆ, ನನ್ನ ಪತ್ನಿ ಹಾಗೂ ಮಗನಿಗೆ ಅವ್ಯಾಚ್ಯ ಪದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ದೂರುದಾರರು ವಿವರಿಸಿದ್ದಾರೆ.
ಕರ್ನಾಟಕ ಪೋರ್ಟ್ ಫೋಲಿಯೊ ಟ್ವೀಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ವಯಸ್ಸಾದ ಪೋಷಕರು ತಮ್ಮ ಸೊಸೆಯಿಂದ ದೌರ್ಜನ್ಯಕ್ಕೊಳಗಾಗುವುದನ್ನು ನೋಡುವುದು ತುಂಬಾ ಬೇಸರದ ಸಂಗತಿ ” ಎಂದು ಬರೆದಿದ್ದಾರೆ.
“ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರು ಒಂದು ದಶಕಕ್ಕೂ ಹೆಚ್ಚು ಕಾಲ ತನ್ನ ಅತ್ತೆ ಮಾವನಿಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಅವರು ತಮ್ಮ ಸ್ವಂತ ಮನೆಯನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ವಾಸಿವಿದ್ದಾರೆ. ನ್ಯಾಯಾಲಯವು ಅತ್ತೆ ಮಾವನ ಭೇಟಿಗೆ ಅವಕಾಶ ನೀಡಿಲ್ಲ. ಆದರೂ, ವೈದ್ಯೆ ಮತ್ತು ಇಬ್ಬರು ಮಕ್ಕಳು ಬಲವಂತವಾಗಿ ಅತ್ತೆ ಮಾವನ ಮನೆಗೆ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾವ ಕ್ಯಾನ್ಸರ್, ಅತ್ತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೌಟುಂಬಿಕ ಹಿಂಸಾಚಾರವು ಕೇವಲ ಮಹಿಳೆಯರ ವಿರುದ್ಧದ ಅಪರಾಧವಲ್ಲ. ವಯಸ್ಸಾದ ಪೋಷಕರು ಸೊಸೆಯಿಂದ ದೌರ್ಜನ್ಯಕ್ಕೊಳಗಾಗಿರುವುದು ನಾಚಿಕೆಗೇಡಿನ ಸಂಗತಿ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ” ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಸ್ಥಳೀಯ2 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್48 minutes agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ3 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ2 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















