ಚಿನ್ನ-ಬೆಳ್ಳಿ ದರ
Gold Rate Today -ಸ್ವರ್ಣಪ್ರಿಯರಿಗೆ ಶುಭಸುದ್ದಿ; ಚಿನ್ನ-ಬೆಳ್ಳಿ ದರ ಅಲ್ಪ ಇಳಿಕೆ; ಇಲ್ಲಿದೆ ಇಂದಿನ ದರಗಳ ಮಾಹಿತಿ
ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಅಲ್ಪ ಇಳಿಕೆಯಾಗಿದ್ದು ಮಹಿಳೆಯರಿಗೆ ಹಾಗೂ ಗ್ರಾಹಕರಿಗೆ ಸಂತಷವನ್ನುಂಟುಮಾಡಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 10 ರೂ.ನಷ್ಟು ಕಡಿಮೆಗೊಂಡಿದೆ. ಚಿನ್ನದಂತೆ ಬೆಳ್ಳಿ ಬೆಲೆಗಳೂ ಕೂಡ ಕೆಲವೆಡೆ ಅಲ್ಪ ಇಳಿಕೆ ಆಗಿದೆ.
ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಅಲ್ಪ ಇಳಿಕೆಯಾಗಿದ್ದು ಮಹಿಳೆಯರಿಗೆ ಹಾಗೂ ಗ್ರಾಹಕರಿಗೆ ಸಂತಷವನ್ನುಂಟುಮಾಡಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 10 ರೂ.ನಷ್ಟು ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ ಇನ್ನೂ 8,200 ರೂ ಮಟ್ಟಕ್ಕಿಂತ ಮೇಲೆಯೇ ಇದೆ. 8,220 ರೂನಿಂದ 8,210 ರೂಗೆ ಅದು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,956 ರೂಗೆ ಇಳಿಕೆ ಆಗಿದೆ. ಚಿನ್ನದಂತೆ ಬೆಳ್ಳಿ ಬೆಲೆಗಳೂ ಕೂಡ ಕೆಲವೆಡೆ ಅಲ್ಪ ಇಳಿಕೆ ಆಗಿದೆ. ಕೆಲ ನಗರಗಳಲ್ಲಿ ಅದರ ಬೆಲೆ ಗ್ರಾಮ್ಗೆ 10 ಪೈಸೆಯಷ್ಟು ಮಾತ್ರ ತಗ್ಗಿದೆ. ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಹೇಗಿದೆ ಎಂಬ ಮಾಹಿತಿ ಇಲ್ಲಿದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾ. 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,560 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 82,100 ರೂ
ಚೆನ್ನೈ: 82,100 ರೂ
ಮುಂಬೈ: 82,100 ರೂ
ದೆಹಲಿ: 82,250 ರೂ
ಕೋಲ್ಕತಾ: 82,100 ರೂ
ಕೇರಳ: 82,100 ರೂ
ಅಹ್ಮದಾಬಾದ್: 82,150 ರೂ
ಜೈಪುರ್: 82,250 ರೂ
ಲಕ್ನೋ: 82,250 ರೂ
ಭುವನೇಶ್ವರ್: 82,100 ರೂ
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
Uncategorized17 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ19 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್5 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ4 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ5 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ5 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ಬಿಗ್ ನ್ಯೂಸ್4 hours agoDr. Rajesh Rai Savanuru-ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್ಹ್ಯಾಮ್ಶೆರ್ನ ಕಿಂಗ್ಸ್ ಮಿಲ್ ಆಸ್ಪತ್ರೆಯ ಕನ್ಸಲ್ಟಾಂಟ್ ಫಿಶಿಷಿಯನ್ ಡಾ. ರಾಜೇಶ್ ರೈ ಸವಣೂರು ಅವರಿಗೆ ಪ್ರತಿಷ್ಠಿತ ಲಂಡನ್ ರಾಯಲ್ ಕಾಲೇಜ್ ಆಫ್ ಫಿಶಿಷಿಯನ್ಸ್ನ ಫೆಲೋ ( FRCP London) ಗೌರವ


















