ರಾಜಕೀಯ
Sanjeev Matandur-ಮೆಡಿಕಲ್ ಕಾಲೇಜು ಘೋಷಿಸದಿರುವುದು ಸ್ವಾಗತಾರ್ಹ, ಆದ್ರೆ ಮೆಡಿಕಲ್ ಕೌನ್ಸಿಲ್ ಅನುಮತಿ ಸಿಗಬೇಕಾದ್ರೆ 300 ಬೆಡ್ ಆಸ್ಫತ್ರೆ ಕಡ್ಡಾಯ – ಸಂಜೀವ ಮಠಂದೂರು; ತನ್ನ ವಿರುದ್ದ ಶಾಸಕರು ಮಾಡಿದ ಟೀಕೆಗೆ ಮಾಜಿ ಶಾಸಕರು ನೀಡಿದ ಉತ್ತರವೇನು ಗೊತ್ತೇ ?
ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನೀಡಲು ಉದ್ದೇಶಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಸಂಗತಿ. ಇದಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಈ ವರ್ಷ ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿರುವುದು ಕೂಡ ಸ್ವಾಗತಾರ್ಹ ಸಂಗತಿ. ಇವರಡನ್ನೂ ನಾನು ಸ್ವಾಗತಿಸುತ್ತೇನೆ.
ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನೀಡಲು ಉದ್ದೇಶಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಸಂಗತಿ. ಇದಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಈ ವರ್ಷ ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿರುವುದು ಕೂಡ ಸ್ವಾಗತಾರ್ಹ ಸಂಗತಿ. ಇವರಡನ್ನೂ ನಾನು ಸ್ವಾಗತಿಸುತ್ತೇನೆ.
ಆದರೆ ಎಷ್ಟು ಹಾಸಿಗೆಯ ಆಸ್ಪತ್ರೆಯಾಗಿ ಮಾಡಲಾಗುವುದು ಎಂಬ ಉಲ್ಲೇಖವಿಲ್ಲ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಉಳಿದ ಕೆಲ ಜಿಲ್ಲೆಗಳಿಗೂ ಆಸ್ಫತ್ರೆ ಮೇಲ್ದರ್ಜೆಗೆರಿಸುವ ಬಗ್ಗೆ ಉಲ್ಲೇಖಿಸಲಾಗಿದೆ ಮಾತ್ರವಲ್ಲದೇ, ಮೆಲ್ದರ್ಜೇಗೇರಿಸುವ ಬೆಡ್ ನ ಸಂಖ್ಯೆಯನ್ನು ನಮೊದಿಸಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಅದೇ ರೀತಿ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜು ಯಾವಾಗ ಮಾಡಲಾಗುವುದು ಎಂಬುದೂ ಇಲ್ಲ. 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಗೊಂಡ ಮೇಲಷ್ಟೇ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದವರು ಬಂದು ಪರಿಶೀಲಿಸಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶಿಫಾರಸು ಮಾಡುತ್ತಾರೆ. ಅಲ್ಲಿಯವರೆಗೆ ಮೆಡಿಕಲ್ ಕಾಲೇಜು ಮಂಜೂರಾಗಲು ಸಾಧ್ಯವಿಲ್ಲ ಎಂದರು.
ಹಾಗಾಗಿಯೂ ಸರಕಾರ ಹಾಗೂ ಮುಖ್ಯಮಂತ್ರಿಗಳು ಮನಸ್ಸು ಮಾಡಿದ್ರೆ ಮೆಡಿಕಲ್ ಕಾಲೇಜ್ ಆರಂಭಿಸಬಹುದು, ಆದ್ರೆ ಮನಸ್ಸು ಮಾಡ್ತಾರ ಎನ್ನುವುದು ಸದ್ಯ ಜನರನ್ನು ಕಾಡುತ್ತಿರುವ ಪ್ರಶ್ನೆ ಎಂದರು.
ನಾನು ಶಾಸಕನಾಗಿದ್ದಾಗ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಪ್ರಯತ್ನಿಸಿದ್ದೆ. ಇದಕ್ಕಾಗಿಯೇ ಆಸ್ಪತ್ರೆಗೆ ಹೆಚ್ಚುವರಿ ಜಮೀನು ಒದಗಿಸಿ 5.16 ಎಕರೆ ಜಾಗ ಲಭ್ಯವಾಗುವಂತೆ ಮಾಡಿದ್ದೆ. ಹಾಲಿ ಆಸ್ಪತ್ರೆಗೆ ಧಕ್ಕೆ ಆಗದಂತೆ ಪಕ್ಕದಲ್ಲೇ 300 ಹಾಸಿಗೆಗಳ ಹೊಸ ಆಸ್ಪತ್ರೆ ಸಂಕೀರ್ಣ ನಿರ್ಮಿಸುವುದು ನನ್ನ ಉದ್ದೇಶವಾಗಿತ್ತು.
ಹಾಲಿ ಶಾಸಕರು ಒಂದು ವೇಳೆ 300 ಹಾಸಿಗೆಗಳ ಆಸ್ಪತ್ರೆ ಮಂಜೂರು ಮಾಡಿಸಿ ಅದನ್ನು ಸೇಡಿಯಾಪುವಿನ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸುವುದಾದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಪುತ್ತೂರಿನ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ ಎಂದರು.
ಮೆಡಿಕಲ್ ಕಾಲೇಜಿಗೆಂದು ಶಕುಂತಳಾ ಶೆಟ್ಟಿ ಶಾಸಕರಾಗಿದ್ದಾಗ 40 ಎಕರೆ ಜಾಗ ಮಂಜೂರು ಮಾಡಿದ್ದು, ಆ ಜಾಗದಲ್ಲಿ ಸಂಜೀವ ಮಠಂದೂರು ಶಾಸಕರಾಗಿದ್ದಾಗ ಮೀನು ಕಾರ್ಖಾನೆ ಸ್ಥಾಪಿಸಲು ಮುಂದಾಗಿದ್ದರು ಎಂದು ಶಾಸಕ ಅಶೋಕ್ ರೈ ಮಾಡಿದ ಆರೋಪಕ್ಕೆ ಉತ್ತರಿಸಿದ ಅವರು, ಕೇಂದ್ರ ಸರಕಾರದ ಯೋಜನೆಯಲ್ಲಿ ಜಿಲ್ಲೆಗೆ ಸೀಫುಡ್ ಪಾರ್ಕ್ ಜಿಲ್ಲೆಗೆ ಮಂಜೂರಾಗಿತ್ತು. ಸಾವಿರಾರು ಉದ್ಯೋಗ ಸೃಷ್ಟಿಸಲಿರುವ ಹಿನ್ನೆಲೆಯಲ್ಲಿ ಅದನ್ನು ಸೇಡಿಯಾಪು ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿದ್ದೆ. ಆದರೆ ಜನ ವಿರೋಧ ಕಂಡು ನಿಲ್ಲಿಸಿದೆ. ಹಾಗೆಂದು ನಾನು ಮೆಡಿಕಲ್ ಕಾಲೇಜಿಗೆ ವಿರೋಧವಲ್ಲ. ಮೆಡಿಕಲ್ ಕಾಲೇಜು ದೂರಗಾಮಿ ಯೋಜನೆಯಾದ ಕಾರಣ ಭವಿಷ್ಯದಲ್ಲಿ ಬೇರೆ ಜಾಗ ಹುಡುಕಿಕೊಳ್ಳಬಹುದು. ಸೀ ಫುಡ್ ಪಾರ್ಕ್ ತಕ್ಷಣವೇ ಮಂಜೂರಾದ ಕಾರಣ ತುರ್ತಾಗಿ ಆ ಜಾಗ ನೀಡಲು ಮುಂದಾದೆ. ಜನ ವಿರೋಧ ಬಂದ ಕಾರಣ ಹಿಂದಕ್ಕೆ ಪಡೆದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಸ್ಥಳೀಯ
B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.
ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
-
ನಿಧನ ವಾರ್ತೆ11 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್16 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ16 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ15 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ16 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ14 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ16 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ10 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















