ಶಿಕ್ಷಣ
Sahyadri College-ವಿಟಿಯು 26ನೇ ಅಂತರಕಾಲೇಜು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಹೊಸ ಇತಿಹಾಸ ಸೃಷ್ಠಿಸಿದ ಸಹ್ಯಾದ್ರಿ ಕಾಲೇಜು
ವಿಟಿಯು 26ನೇ ಅಂತರಕಾಲೇಜು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜು ಹೊಸ ಇತಿಹಾಸ ಸೃಷ್ಟಿಸಿದೆ.
ವಿಟಿಯು 26ನೇ ಅಂತರಕಾಲೇಜು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜು ಹೊಸ ಇತಿಹಾಸ ಸೃಷ್ಟಿಸಿದೆ.
ಸಹ್ಯಾದ್ರಿ ಅಥ್ಲೆಟಿಕ್ ತಂಡವು 104 ಅಂಕಗಳೊಂದಿಗೆ 8 ನೇ ಬಾರಿಗೆ ಹೊರಹೊಮ್ಮಿದ ಒಟ್ಟಾರೆ ಚಾಂಪಿಯನ್ಗಳನ್ನು ಗೆದ್ದುಕೊಂಡಿತು, ಮಾರ್ಚ್ 15 ರಿಂದ 18 ರವರೆಗೆ ಶಿವಮೊಗ್ಗದ ಜೆಎನ್ಎನ್ಸಿಇಯಲ್ಲಿ ನಡೆದ ವಿಟಿಯು 26 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಪುರುಷರ ವಿಭಾಗ ಚಾಂಪಿಯನ್ಗಳು ಮತ್ತು ಮಹಿಳಾ ವಿಭಾಗ ಚಾಂಪಿಯನ್ಗಳು ಮತ್ತು ತಂಡವು ಮಾರ್ಚ್ ಪಾಸ್ಟ್ ನಲ್ಲಿ ಎರಡನೇ ಸ್ಥಾನವನ್ನು ಗಳಿಸಿತು.

ಒಟ್ಟು 126 ಕಾಲೇಜುಗಳಿಂದ ಒಟ್ಟು 1,434 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಇವರು ಹೊಸ ಚರಿತ್ರೆ ಬರೆದಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ 201ಕಾಲೇಜು 4 ಲಕ್ಷ ವಿದ್ಯಾರ್ಥಿಗಳಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಮಾನ್ಯ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ರವರ ನೇತೃತ್ವದಲ್ಲಿ 2007- 2008 ರಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜು ಮಂಗಳೂರಿನಲ್ಲಿ ಸ್ಥಾಪನೆಯಾಗಿರುತ್ತದೆ.
2008-2009ರಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆರಂಭಿಸಿದ್ದು ಅಂದಿನಿಂದ ಇಂದಿನವರೆಗೆ ಸುಮಾರು 16 ಕ್ರೀಡಾಕೂಟದಲ್ಲಿ ಭಾಗವಹಿಸಿದ ಸುಮಾರು 8 ಬಾರಿ ಓವರ್ ಆಲ್ ಚಾಂಪಿಯನ್ 5 ರನ್ನರ್ಸ್ ಹಾಗೂ 3ನೇ ಭಾರಿ 4 ನೇ ಸ್ಥಾನ ಪಡೆದಿದೆ.

ಮಹಿಳೆಯರ ವಿಭಾಗದಲ್ಲಿ ಪದಕ ವಿಜೇತರು:
ಅಕ್ಷ ಕೆ ಬಿ 400 ಮೀಟರ್ ಹರ್ಡಲ್ಸ್ನಲ್ಲಿ 3 ನೇ ಸ್ಥಾನ, ಪಲ್ಲವಿ ಜೆಎಸ್ ಲಾಂಗ್ ಜಂಪ್ನಲ್ಲಿ 2 ನೇ ಸ್ಥಾನ, ಸಾನಿಯಾ ಶೆಟ್ಟಿ 800 ಮೀಟರ್ ಓಟದಲ್ಲಿ 2 ನೇ ಸ್ಥಾನ, ಪಲ್ಲವಿ ಜೆ ಎಸ್ ಟ್ರಿಪಲ್ ಜಂಪ್ನಲ್ಲಿ 2 ನೇ ಸ್ಥಾನ, ಪ್ರಾಂಜಲಿ ಎ ಡಿಸ್ಕಸ್ ಥ್ರೋನಲ್ಲಿ 2 ನೇ ಸ್ಥಾನ, ಪ್ರಾಂಜಲಿ ಎ ಶಾಟ್ಪುಟ್ನಲ್ಲಿ 1 ನೇ ಸ್ಥಾನ, 20 ಕಿಮೀ ನಡಿಗೆ ಓಟ ಚಶ್ಮಿತಾ 2 ನೇ ಸ್ಥಾನ, ಸಾಹಿತ್ಯ 3 ನೇ ಸ್ಥಾನ, ಸಾನ್ವಿ ರೈ 400 ಮೀಟರ್ ಓಟದಲ್ಲಿ 2 ನೇ ಸ್ಥಾನ, ಸಾನಿಯಾ ಶೆಟ್ಟಿ 1500 ಮೀಟರ್ ಓಟದಲ್ಲಿ 2 ನೇ ಸ್ಥಾನ, ಗೌತಮಿ ಹೆಪ್ಟಾಥ್ಲಾನ್ನಲ್ಲಿ 1 ನೇ ಸ್ಥಾನ, ಗೌತಮಿ ಪೋಲ್ ವಾಲ್ಟ್ನಲ್ಲಿ 2 ನೇ ಸ್ಥಾನ
4×100 ಮೀಟರ್ಸ್ ರಿಲೇ ತಂಡ ಪ್ರಥಮ ಸ್ಥಾನ – ಶ್ರೀಯಾ ಎಲ್ ಸಾಲಿಯಾನ್, ಗೌತಮಿ ಎಂ ಎನ್, ಕುಶಿ ರೈ ಮತ್ತು ಪಲ್ಲವಿ ಜೆ ಎಸ್; 14.4×400 ಮೀಟರ್ ಮಿಶ್ರ ರಿಲೇ 1 ನೇ ಸ್ಥಾನ – ಸಾನಿಯಾ ಶೆಟ್ಟಿ, ಸಾನ್ವಿ ರೈ, ಕಾರ್ತಿಕ್ ಪಿ ಮತ್ತು ಮನ್ವಿತ್ ಯು; 4×400 ಮೀಟರ್ಸ್ ರಿಲೇ 1ನೇ ಸ್ಥಾನ – ಸಾನ್ವಿ ರೈ, ಸಾನಿಯಾ ಶೆಟ್ಟಿ, ವಿಭಾ ಬಿಕೆ ಮತ್ತು ಅಕ್ಷ.
ಪುರುಷರ ವಿಭಾಗದಲ್ಲಿ ಪದಕ ವಿಜೇತರು:
ಕೀರ್ತನ್ ಆರ್ ಶೆಟ್ಟಿ 400 ಮೀಟರ್ ಹರ್ಡಲ್ಸ್ ನಲ್ಲಿ 3 ನೇ ಸ್ಥಾನ, ಕಾರ್ತಿಕ್ ಪಿ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಮಾನ್ವಿತ್ ಯು 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಪ್ರವಿತ್ 20 ಕಿ.ಮೀ ನಡಿಗೆ ಓಟದಲ್ಲಿ ದ್ವಿತೀಯ ಸ್ಥಾನ, ಮಾನ್ವಿತ್ ಯು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಪ್ರಣಯ್ ಶೆಟ್ಟಿ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಕಾರ್ತಿಕ್ ಪಿ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, 4×400 ಮೀಟರ್ ಮಿಶ್ರ ರಿಲೇ 1 ನೇ ಸ್ಥಾನ – ಸಾನಿಯಾ ಶೆಟ್ಟಿ, ಸಾನ್ವಿ ರೈ ಕಾರ್ತಿಕ್ ಪಿ ಮತ್ತು ಮಾನ್ವಿತ್, 4×400 ಮೀಟರ್ ರಿಲೇ 1 ನೇ ಸ್ಥಾನ – ಕೀರ್ತನ್ ಶೆಟ್ಟಿ, ಮಾನ್ವಿತ್ ಯು, ಕಾರ್ತಿಕ್ ಎಸ್ ಮತ್ತು ಮಾನ್ವಿತ್
ಇಷ್ಟೊಂದು ಬಾರಿ ಚಾಂಪಿಯನ್ ಆದ ಕಾಲೇಜು ವಿಶ್ವವಿದ್ಯಾಲಯ ಇತಿಹಾಸದಲ್ಲಿಲ್ಲ
ಪುರುಷರು ವಾಲಿಬಾಲ್ – 7 ಬಾರಿ, ಮಹಿಳೆಯರು ವಾಲಿಬಾಲ್ 8 ಬಾರಿ, ಥ್ರೋಬಾಲ್ – 9 ಬಾರಿ ರಾಜ್ಯ 4 ಬಾರಿ; ಮಹಿಳೆಯರು ಕರಾಟೆ ಚಾಂಪಿಯನ್ಗಳು-1 ಬಾರಿ; ಭಾರ ಎತ್ತುವುದು – ಮಹಿಳೆಯರು 5 ಬಾರಿ ಪುರುಷರು 4 ಬಾರಿ; ಮಹಿಳೆಯರು ಪವರ್ಲಿಫ್ಟಿಂಗ್ 4 ಬಾರಿ ಪುರುಷರು 2 ಬಾರಿ; ಅತ್ಯುತ್ತಮ ಮೈಕಟ್ಟು – 1 ಬಾರಿ; ಈಜು ಓಟಗಾರರು 1 ಬಾರಿ; ಕುಸ್ತಿ – 5 ಪದಕಗಳು; ಚೆಸ್, ಕ್ರಿಕೆಟ್ ಹಾಕಿ,ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ 4 ಬಾರಿ; ಪ್ರತೀ ವರ್ಷ 10-14 ವಿದ್ಯಾರ್ಥಿಗಳು ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ WUSHU – ಬೆಳ್ಳಿ ಪದಕ ಹಾಗೂ ಹಲವಾರು ಪದಕ
ರಾಜ್ಯದ ಅತ್ಯುತ್ತಮ ಕಾಲೇಜುಗಳಲ್ಲಿ ಒಂದು ಎಂಬುದಾಗಿ ಹೆಸರು ಪಡೆದಿರುವ ಸಹ್ಯಾದ್ರಿ ಕಾಲೇಜ್ ವಿದ್ಯಾಲಯದ ಮಟ್ಟದಲ್ಲಿ ಹಲವಾರು ರಾಂಕ್ ಗಳಿಸಿರುತ್ತದೆ ಅಲ್ಲದೆ ಪ್ಲೇಸ್ಮೆಂಟ್ ಅಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುತ್ತದೆ. ಅತೀ ಹೆಚ್ಚು ಸಂಬಳ 48ಲಕ್ಷ ಸಹ್ಯಾದ್ರಿ ವಿದ್ಯಾರ್ಥಿಗಳಿಗೆ ದೊರಕಿರುವುದು ಕಾಲೇಜಿನ ಗುಣಮಟ್ಟವನ್ನು ತೋರಿಸುತ್ತದೆ.
ಶಿಕ್ಷಣದೊಂದಿಗೆ ಕ್ರೀಡಾ, ಕೌಶಲ್ಯವನ್ನು ಕೊಡುವುದು ಕಾಲೇಜಿನ ಮುಖ್ಯನಿರ್ಣಯಗಳಲ್ಲಿ ಒಂದಾಗಿರುತ್ತದೆ. ಈ ಕಾಲೇಜಿನ ಅಭಿವೃದ್ಧಿಗೆ ದುಡಿಯುತ್ತಿರುವ ಕಾಲೇಜಿನ ಚೇರ್ಮನ್ ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಹಾಗೂ ಅವರೊಂದಿಗೆ ಎಲ್ಲಾ ಟ್ರಸ್ಟಿಗಳು , ಪ್ರಾಂಶುಪಾಲರು ಹಾಗೂ ಶಿಕ್ಷಕ ವರ್ಗ ಮುಖ್ಯವಾಗಿ ಈ ಕೀರ್ತಿಯನ್ನು ಗಳಿಸಲು ಮಾರ್ಗದರ್ಶನ ನೀಡುತ್ತಿರುವ ದೈಹಿಕ ನಿರ್ದೇಶಕರಾದ ಶ್ರೀ ಕರ್ಣ ಕುಮಾರ್ ಕೆ.ಎಸ್. ಹಾಗೂ ಶ್ರೀಮತಿ ರಮ್ಯಾ ಪಿ. ಹಾಗೂ ಇದಕ್ಕಿಂತ ಮುಂಚೆ ಮಾರ್ಗದರ್ಶನ ನೀಡಿದಂತಹ ಶ್ರೀಮತಿ ನಿತೀಶ ರೊಡ್ರಿಗಸ್ ಮತ್ತು ಶ್ರೀ ಸದಾನಂದ ಗೌಡ ಇವರ ಮಾರ್ಗದರ್ಶನ ವಿದ್ದು ಈ ಸಾಧನೆಯಲ್ಲಿ ಇವರೆಲ್ಲರ ಸಹಕಾರ ಇರುತ್ತದೆ.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.















