Connect with us

ನಿಧನ ವಾರ್ತೆ

Puttur-Big Shocking: ಪುತ್ತೂರು ಪ್ರಭು ಚರುಂಬುರಿ ಖ್ಯಾತಿಯ ಸುಧಾಕರ ಪ್ರಭು ಕೆಮ್ಯಾಯಿ ನೇಣು ಬಿಗಿದು ಆತ್ಮ*ಹತ್ಯೆ; ಕಡು ಬಡತನದಿಂದ ಮೇಲೆ ಬಂದಿದ್ದ ಅಪ್ಪಟ ಶ್ರಮಜೀವಿ

Published

on



Ad Widget

Ad Widget

Ad Widget

Ad Widget

ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದ ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೈದ ಘಟನೆ ವರದಿಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದ ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೈದ ಘಟನೆ ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮನೆಯಲ್ಲಿ ನಾಳೆ ಪೂಜೆ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ಇದ್ದ ಅವರು ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget <> Ad Widget

ಅವರು ಪುತ್ತೂರು ಆಸುಪಾಸಿನಲ್ಲಿ ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದರು. ಇದೀಗ ಇವರ ಈ ದುಡುಕಿನ ನಿರ್ಧಾರ ಕುಟುಂಬದಲ್ಲಿ, ಸ್ನೇಹಿತರಲ್ಲಿ ದು:ಖವನ್ನುಂಟುಮಾಡಿದೆ.



Ad Widget

ಎರಡು ವರ್ಷದ ಹಿಂದೆ ಅವರ ತಮ್ಮ ಪ್ರಭಾಕರ ಪ್ರಭು ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ತಮ್ಮ ಪ್ರಭಾಕರ ಪ್ರಭು ಹಾಗೂ ಸುಧಾಕರ ಪ್ರಭು ಅವರು ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಅವರ ನಿಧನದ ಬಳಿಕ ಸುಧಾಕರ ಪ್ರಭು ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

Ad Widget

Ad Widget

ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಸುಧಾಕರ ಪ್ರಭು ಅವರು ಸ್ವಂತ ಪರಿಶ್ರಮದಿಂದ ಆರ್ಥಿಕವಾಗಿ ಮೇಲೆ ಬಂದವರು. ಜಾತ್ರೆ, ನೇಮೋತ್ಸವ ಇತ್ಯಾದಿ ಜನ ಸಂದಣಿ ಇರುವ ಸ್ಥಳಗಳಲ್ಲಿ ಚರುಂಬುರಿ ಅಂಗಡಿ ಹಾಕಿ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಂಡಿದ್ದರು.

ಅಪ್ಪಟ ಶ್ರಮ ಜೀವಿಯಾಗಿದ್ದ ಇವರ ಚರುಂಬುರಿಯ ಸವಿಗೆ ಮರುಳಾಗದವರೇ ಪುತ್ತೂರು ಆಸುಪಾಸಿನಲ್ಲಿ ಇರಲಿಲ್ಲ. ಜಾತ್ರೆ ನೇಮೋತ್ಸವಗಳಲ್ಲಿ ಇವರ ಚರುಂಬುರಿ ಸ್ಟಾಲ್ ತನ್ನದೇ ಆದ ಬ್ರ್ಯಾಂಡ್ ನಿರ್ಮಿಸಿತ್ತು

ಮೃತರು ಮೆಸ್ಕಾಂನಲ್ಲಿ ಉದ್ಯೋಗಿಯಾಗಿರುವ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Ad Widget
Click to comment

Leave a Reply

ನಿಧನ ವಾರ್ತೆ

Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

Published

on



Ad Widget

Ad Widget

Ad Widget

Ad Widget

ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget

Ad Widget

ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Ad Widget

ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Ad Widget

Ad Widget

ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading