ಸ್ಥಳೀಯ
Sameer’s video-ಸೌಜನ್ಯ ಪ್ರಕರಣ: 2 ಕೋಟಿ ವೀಕ್ಷಣೆ ಕಂಡ ದೂತ ಸಮೀರ್ ವಿಡಿಯೋ ಡಿಲೀಟ್..! ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಕುಟುಂಬದ ವಿರುದ್ಧ ವಿಡಿಯೋ ಬಿತ್ತರಿಸುವುದು ನಿರ್ಬಂಧ – ಕೋರ್ಟ್ ಆದೇಶ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೋಗಳನ್ನು ನಿರ್ಮಿಸಿ ಹರಡಿರುವ ಯೂಟ್ಯೂಬರ್ ಎಂ. ಡಿ. ಸಮೀರ್ ಸೇರಿದಂತೆ ಇತರರು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಹಂಚಿಕೊಂಡಿರುವ ಆ ವಿಡಿಯೊಗಳನ್ನು ತೆಗೆದುಹಾಕುವಂತೆ ಬೆಂಗಳೂರಿನ ಸಿಸಿಎಚ್ 11ನೇ ನ್ಯಾಯಾಲಯವು ಆದೇಶಿಸಿದೆ.
ಬೆಂಗಳೂರು, ಮಾರ್ಚ್ 21: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೊಗಳನ್ನು ನಿರ್ಮಿಸಿ ಹರಡಿರುವ ಯೂಟ್ಯೂಬರ್ ಎಂ. ಡಿ. ಸಮೀರ್ ಸೇರಿದಂತೆ ಇತರರು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಹಂಚಿಕೊಂಡಿರುವ ಆ ವಿಡಿಯೊಗಳನ್ನು ತೆಗೆದುಹಾಕುವಂತೆ ಬೆಂಗಳೂರಿನ ಸಿಸಿಎಚ್ 11ನೇ ನ್ಯಾಯಾಲಯವು ಆದೇಶಿಸಿದೆ. ಸಮೀರ್ ಅವರು ಧರ್ಮಸ್ಥಳ ಹಾರರ್ ಎಂಬ ಹೆಸರಿನಲ್ಲಿ ಹಾಕಿರುವ ವಿಡಿಯೋ ಯೂಟ್ಯೂಬ್ ನಲ್ಲಿ ಸರಿ ಸುಮಾರು 2ಕೋಟಿ ವೀಕ್ಷಣೆಯನ್ನು ಪಡೆದಿತ್ತು. 13 ವರ್ಷಗಳ ಹಿಂದೆ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಳ ಸಾವಿಗೆ ನ್ಯಾಯ ಮರಿಚೀಕೆಯಾಗಿದ್ದು ಅದಕ್ಕಾಗಿ ತಾನು ಈ ವಿಡಿಯೋ ಮಾಡಿರುವುದಾಗಿ ಹೇಳಿಕೂಂಡಿದ್ದರು.
‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ’ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಅಂಗಸಂಸ್ಥೆಗಳ ಪರವಾಗಿ ಎ. ಎಸ್. ಸುಖೇಶ್, ಶೀನಪ್ಪ ಮತ್ತು ಇತರ ಇಬ್ಬರು ಸೇರಿದಂತೆ ನಾಲ್ವರು ಸಲ್ಲಿಸಿದ ಅಸಲು ದಾವೆಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್. ಎಸ್. ನಟರಾಜ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಕರಣದ ಮುಂದಿನ ವಿಚಾರಣೆಗಾಗಿ ದಿನಾಂಕವನ್ನು ಮುಂದೂಡಲಾಗಿದ್ದು, ಆದೇಶದ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ.ದಾವೆದಾರರು ತಮ್ಮ ಅರ್ಜಿಯಲ್ಲಿ, “ಡಿ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ ದಶಕಗಳಿಂದ ಸಾಮಾಜಿಕ ಸೇವೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಆದರೆ, ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ, ಅಪಪ್ರಚಾರದ ಆರೋಪಗಳನ್ನು ಹೊತ್ತ ಸುದ್ದಿಗಳು ಮತ್ತು ವಿಡಿಯೊಗಳನ್ನು ಉದ್ದೇಶಪೂರ್ವಕವಾಗಿ ನಿರ್ಮಿಸಿ ಹರಡಲಾಗುತ್ತಿದೆ. ಇದು ಅವರ ವೈಯಕ್ತಿಕ ಗೌರವಕ್ಕೆ ಮತ್ತು ಸಂಸ್ಥೆಯ ಖ್ಯಾತಿಗೆ ಧಕ್ಕೆ ತರುತ್ತಿದೆ. ಇಂತಹ ವಿಷಯಗಳನ್ನು ರಚಿಸುವುದು, ಪ್ರಕಟಿಸುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು, ಹಂಚಿಕೊಳ್ಳುವುದು ಸೇರಿದಂತೆ ಎಲ್ಲ ರೀತಿಯ ಬಿತ್ತರಿಕೆಯನ್ನು ಶಾಶ್ವತವಾಗಿ ನಿರ್ಬಂಧಿಸಬೇಕು” ಎಂದು ಕೋರಿದ್ದರು.ಈ ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ಹೈಕೋರ್ಟ್ ವಕೀಲ ರಾಜಶೇಖರ ಎಸ್. ಹಿಲಿಯಾರು ವಾದ ಮಂಡಿಸಿದರು.
“ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯ ಹರಡುವಿಕೆಯು ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತದೆ. ಇಂತಹ ಕೃತ್ಯಗಳನ್ನು ನಿಯಂತ್ರಿಸದಿದ್ದರೆ, ಜನರ ನಂಬಿಕೆ ಮತ್ತು ಸಂಸ್ಥೆಗಳ ವಿಶ್ವಾಸಾರ್ಹತೆಗೆ ತೀವ್ರ ಹಾನಿಯಾಗಲಿದೆ” ಎಂದು ಅವರು ನ್ಯಾಯಾಲಯದ ಮುಂದೆ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳವು ಗ್ರಾಮೀಣ ಭಾಗಗಳಲ್ಲಿ ಶಿಕ್ಷಣ, ಆರೋಗ್ಯ, ಮತ್ತು ಸ್ವಯಂ ಉದ್ಯೋಗದಂತಹ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದ ವಿರುದ್ಧದ ಆರೋಪಗಳು ಉದ್ದೇಶಪೂರ್ವಕ ಮತ್ತು ದುರುದ್ದೇಶದಿಂದ ಕೂಡಿದ್ದವೆಂದು ದಾವೆದಾರರು ಆರೋಪಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ
Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ
ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.
ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















