ಬಿಗ್ ನ್ಯೂಸ್
Puttur-ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಸಿದ್ದತೆ – ಅನ್ನಛತ್ರಕ್ಕೆ ಚಪ್ಪರ ಮುಹೂರ್ತ; ಅನ್ನದ ಅಗಲು ಮುತ್ತಾಗಿ ಪರಿವರ್ತನೆಗೊಂಡ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ ಈ ಬಾರಿಯ ವಿಶೇಷತೆ
ಕಾರಣಿಕ ಪ್ರಸಿದ್ದ ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಜಾತ್ರಾರಂಭಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತ್ರತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಜಾತ್ರೋತ್ಸವದ ಸಂದರ್ಭ ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಲು ದೇವಸ್ಥಾನದ ಹಿಂಬದಿಯಲ್ಲಿರುವ ಕೆರೆಯ ಪಕ್ಕದಲ್ಲಿರುವ ವಿಶಾಲ ಖಾಲಿ ಜಾಗದಲ್ಲಿ ತಾತ್ಕಲಿಕ ಅನ್ನಛತ್ರ ನಿರ್ಮಿಸಲು ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದ್ದು,ಇದಕ್ಕೆ ಚಪ್ಪರ ಮುಹೂರ್ತ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆ, ನಿತ್ಯ ಬಲಿ ನಡೆದ ಬಳಿಕ ಮಾ. 24 ರಂದು ಬೆಳಿಗ್ಗೆ ನಡೆಯಿತು.
ಪುತ್ತೂರು: ಕಾರಣಿಕ ಪ್ರಸಿದ್ದ ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಜಾತ್ರಾರಂಭಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತ್ರತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಜಾತ್ರೋತ್ಸವದ ಸಂದರ್ಭ ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಲು ದೇವಸ್ಥಾನದ ಹಿಂಬದಿಯಲ್ಲಿರುವ ಕೆರೆಯ ಪಕ್ಕದಲ್ಲಿರುವ ವಿಶಾಲ ಖಾಲಿ ಜಾಗದಲ್ಲಿ ತಾತ್ಕಲಿಕ ಅನ್ನಛತ್ರ ನಿರ್ಮಿಸಲು ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದ್ದು,ಇದಕ್ಕೆ ಚಪ್ಪರ ಮುಹೂರ್ತ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆ, ನಿತ್ಯ ಬಲಿ ನಡೆದ ಬಳಿಕ ಮಾ. 24 ರಂದು ಬೆಳಿಗ್ಗೆ ನಡೆಯಿತು.

ಕೆರೆಯ ಪಕ್ಕದಲ್ಲಿ ದೇಗುಲದ ಹೆಸರಿನಲ್ಲಿದ್ದ ಜಮೀನಿನಲ್ಲಿ ಹಲವು ದಶಕಗಳಿಂದ ಮನೆ ಕಟ್ಟಿಕೊಂಡಿದವರನ್ನು ತೆರವುಗೊಳಿಸುವ ಕಾರ್ಯ ಎರಡು ತಿಂಗಳ ಹಿಂದೆ ನಡೆದಿತ್ತು. ಇದಾದ ಬಳಿಕ ನಡೆಯುತ್ತಿರುವ ಮೊದಲು ಜಾತ್ರೆಗೆ ಅಲ್ಲಿ ಅನ್ನಛತ್ರ ನಿರ್ಮಿಸುವ ಮಹತ್ವದ ನಿರ್ಧಾರವನ್ನು ದೇವಸ್ಥಾನದ ಆಡಳಿತ ಮಂಡಲಿ ತೆಗೆದುಕೊಂಡಿದೆ. ಕೆರೆಯಲ್ಲಿ ನೀರು ಉಕ್ಕಿ ಬಂದು ಅಲ್ಲಿ ಬಿದ್ದಿದ್ದ ಅನ್ನದ ಅಗುಲುಗಳು ಮುತ್ತಾಗಿ ಪರಿವರ್ತನೆಗೊಂಡ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಶ್ರೀಮಹಾದೇವನ ಜಾತ್ರೋತ್ಸವದ ಅನ್ನದಾನ ನಡೆಯಲಿರುವುದುಈ ಬಾರಿಯ ಜಾತ್ರೋತ್ಸವದ ವಿಶೇಷವಾಗಿರಲಿದೆ.
ಕೆರೆಯ ಎಡಭಾಗದಲ್ಲಿ ಹಾಗೂ ದೇವರ ಕೆರೆಯಲ್ಲಿರುವ ಕಟ್ಟೆಗೆ ಸಮಾನಂತರವಾಗಿರುವ ಸ್ಥಳದಲ್ಲಿ ದೇವಳದ ಪ್ರಧಾನ ಅರ್ಚಕ ವೇ. ಮೂ. ವಸಂತ ಕೆದಿಲಾಯರವರು ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಬಳಿಕ ಆರ್ಚಕರು ಹಾಗೂ ಈಶ್ವರ ಭಟ್ ಪಂಜಿಗುಡ್ಡೆರವರು ಒಡೆದ ತೆಂಗಿನಕಾಯಿ ಶುಭ ಶಕುನ ತೋರಿಸಿ ದೈವ ಬೆಂಬಲ ಸೂಚಿಸಿದೆ ಎಂದು ತಿಳಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ,ಈಶ್ವರ ಬೇಡೆಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ ಅವರು ಚಪ್ಪರ ಮುಹೂರ್ತ ನೆರವೇರಿಸಿದರು.ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಮಾಜಿ ಸದಸ್ಯೆ ವೀಣಾ ಬಿ.ಕೆ, ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಉದ್ಯಮಿಗಳಾದ ಕರುಣಾಕರ ರೈ ದೇರ್ಲ, ನುಳಿಯಾಲು ರವೀಂದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.
ಅನ್ನಛತ್ರದ ವಿಶೇಷತೆ
300 ಅಡಿ ಉದ್ದ ಹಾಗೂ ಸುಮಾರು 70 ಅಡಿ ಅಗಲದ ಜಾಗವನ್ನು ಈ ಬಾರಿ ಅನ್ನಪ್ರಸಾದ ವಿತರಣೆಗೆ ಮೀಸಲಿಡಲಾಗಿದೆ. ಸರಿ ಸುಮಾರು 20 ಸಾವಿರ ಚದರ ಅಡಿ ವಿಸ್ತೀರ್ಣದ ಈ ವಿಶಾಲ ಜಾಗದಲ್ಲಿ ಪಾಕಶಾಲೆ, ಉಗ್ರಾಣ, ತರಕಾರಿ ಹೆಚ್ಚಲು ಕೊಠಡಿ, ಬಾಣಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶ್ರಾಂತಿ ಕೊಠಡಿ ಹಾಗೂ ತಾತ್ಕಲಿಕ ಶೌಚಲಯ ನಿರ್ಮಿಸಲಾಗುತ್ತದೆ ವಿಶೇಷ ಆಹ್ವಾನಿತರಿಗೆ ಅನ್ನಪ್ರಸಾದ ವಿತರಿಸಲು ಅನುಕೂಲವಾಗುವಂತೆ 100 ಆಸನ ವ್ಯವಸ್ಥೆಯಿರುವ ಕೌಂಟರ್, ಅಶಕ್ತರಿಗೆ ಹಾಗೂ ವೃದ್ದರಿಗೆ ಕುಳಿತು ಊಟ ಮಾಡಲು ಅವಕಾಶ ಕಲ್ಪಿಸಲು 100 ಆಸನ ವ್ಯವಸ್ಥೆಯಿರುವ ಕೌಂಟರನ್ನು ಇದೇ ಜಾಗದಲ್ಲಿ ನಿರ್ಮಿಸಲಾಗುತ್ತದೆ ಉಳಿದ ಜಾಗದಲ್ಲಿ ಬಫೆ ಊಟದ ವ್ಯವಸ್ಥೆಯನ್ನು ಮಾಡುವ ಯೋಚನೆಯನ್ನು ಆಡಳಿತ ಮಂಡಲಿ ಹೊಂದಿದೆ.
ಪಂಜಿಗುಡ್ಡೆ ಈಶ್ವರ ಭಟ್ ಹೇಳಿದ್ದೇನು?
ಸೋಮವಾರ, ಶಿವನಿಗೆ ತುಂಬಾ ಪ್ರಿಯವಾದ ದಿನವಾಗಿದ್ದು ಈ ದಿನ ಚಪ್ಪರ ಮುಹೂರ್ತ ನಡೆದಿದೆ ಹಾಗೂ 2 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣದ ಕೆಲಸ ಸಹ ಆರಂಭಗೊಂಡಿದ್ದು ಈ ಕೆಲಸ ನಾಲ್ಕು-ಐದು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ವೈದಿಕರಿಗೆ, ಉಗ್ರಾಣದ ವ್ಯವಸ್ಥೆ ಹಾಗೂ ವಿಐಪಿಗಳಿಗೆ ಇಲ್ಲಿ ಊಟ, ಕಾಫಿ, ತಿಂಡಿಯ ವ್ಯವಸ್ಥೆ ಬಹಳ ಅಚ್ಚುಕಟ್ಟಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಯಲಿದೆ.
ತಂತ್ರಿವರ್ಗದವರಿಗೆ, ಅರ್ಚಕರಿಗಾಗಿ 10ರಿಂದ 30 ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕೂಡಾ ಮಾಡಲಿದ್ದೇವೆ. ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದರಿಂದಾಗಿ ಮೊದಲು ಅನ್ನದಾನ ನಡೆಯುತ್ತಿದ್ದ ಜಾಗ ಅಂಗಡಿ ಇಡಲು ಮತ್ತು ಜಾತ್ರೆಯನ್ನು ವೀಕ್ಷಿಸಲು ಉಪಯೋಗವಾಗಲಿದೆ. ಈ ಎಲ್ಲಾ ಕಾರ್ಯಗಳಿಗೆ ಮಹಾಲಿಂಗೇಶ್ವರ ದೇವರ ಸಂಪೂರ್ಣ ಅನುಗ್ರಹವಿದೆ ಎನ್ನುವುದು ತೆಂಗಿನ ಕಾಯಿ ಒಡೆಯುವ ವೇಳೆ ಕಂಡು ಬಂದ ಶಕುನದಲ್ಲಿ ವಿದಿತವಾಗಿದೆ ಎಂದು ಹೇಳಿದ್ದಾರೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.
ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.
“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.
ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.
ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
-
ಪುತ್ತೂರು20 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















