ಸ್ಥಳೀಯ
Dharmasthala-ವರದಕ್ಷಿಣೆಗಾಗಿ ಪತ್ನಿಗೆ ರಾಕ್ಷಸರ ರೀತಿ ಹಿಂಸೆ ನೀಡಿದ ಧರ್ಮಸ್ಥಳ ಠಾಣೆಯ ಸಬ್ ಇನ್ಸ್ ಪೆಕ್ಟರ್ : ಅತ್ತೆ ಮಾವ ಮೈದುನನಿಂದಲೂ ಹಲ್ಲೆ..! ಟ್ರಾನ್ಸ್ ಫರ್ ಲಂಚಕ್ಕೂ ಪತ್ನಿಗೆ ಹಿಂಸೆ..! ಕೊಲೆಯತ್ನ : ಸ್ಥಳೀಯರ ನೆರವಿನಿಂದ ಬೆಂಗಳೂರಿಗೆ ರವಾನೆ : ದೂರು ದಾಖಲು
ವರದಕ್ಷಿಣಿ ಕಿರುಕುಳ ಹಾಗೂ ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಂಸೆ ನೀಡಿ ಕೊಲೆಗೆ ಯತ್ನಿಸಿದ ಪತಿ, ಅತ್ತೆ, ಮಾವ ಹಾಗೂ ಮೈದುನನ ವಿರುದ್ಧ ಗೃಹಿಣೆಯೊಬ್ಬರು ದೂರು ನೀಡಿರುವ ಘಟನೆ ಚಂದ್ರ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಧರ್ಮಸ್ಥಳ : ವರದಕ್ಷಿಣಿ ಕಿರುಕುಳ ಹಾಗೂ ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಂಸೆ ನೀಡಿ ಕೊಲೆಗೆ ಯತ್ನಿಸಿದ ಪತಿ, ಅತ್ತೆ, ಮಾವ ಹಾಗೂ ಮೈದುನನ ವಿರುದ್ಧ ಗೃಹಿಣೆಯೊಬ್ಬರು ದೂರು ನೀಡಿರುವ ಘಟನೆ ಚಂದ್ರ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರ್ಷಾ ಆರ್. (27 ವ.)ರವರು ವರದಕ್ಷಿಣಿ ಕಿರುಕುಳದಿಂದಾಗಿ ನೊಂದ ಗೃಹಿಣಿ.
ಈಕೆಯ ಪತಿ ಕಿಶೋರ್ ಪಿ., ಮಾವ ಪುಟ್ಟಚೆನ್ನಪ್ಪ, ಅತ್ತೆ ಸರಸ್ವತಮ್ಮ ಹಾಗೂ ಮೈದುನ ಚಂದನ್ ಪಿ. ವರದಕ್ಷಿಣಿ ಕಿರುಕುಳ ಕೊಟ್ಟು ಕೊಲೆಗೆ ಯತ್ನಿಸಿದ ಆರೋಪಿಗಳು.
ಏನಿದು ಘಟನೆ..?
ತಂದೆ ತಾಯಿಗಳ ಏಕೈಕ ಪುತ್ರಿಯಾಗಿದ್ದ ವರ್ಷಾ ಅವರಿಗೆ ಮದುವೆ ಮಾಡಲು ಹೆತ್ತವರು ಬಯಸಿದ್ದು ಈ ಸಂದರ್ಭದಲ್ಲಿ ಬ್ರೋಕರ್ ನಾಗರಾಜು ಎಂಬವರು ಬೆಂಗಳೂರು ನೆಲಮಂಗಲ ನಿವಾಸಿಯಾಗಿರುವ ಪುಟ್ಟಚೆನ್ನಪ್ಪ ಹಾಗೂ ಸರಸ್ವತಮ್ಮ ದಂಪತಿಗಳ ಮಗನಾದ ಮೂಡಿಗೆರೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಕಿಶೋರ್ ಪಿ. ಎಂಬವರನ್ನು ಪರಿಚಯಿಸಿದ್ದು ಎಲ್ಲರ ಒಪ್ಪಿಗೆಯಿದ್ದು ಮದುವೆ ನಿಗದಿಯಾಗಿತ್ತು.
ಆ ಬಳಿಕ ಕಿಶೋರ್ ಮನೆಯವರು 25 ಲಕ್ಷ ರೂ. ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದು, ವರ್ಷಾ ಮನೆಯವರು10 ಲಕ್ಷ ರೂ. ನೀಡುವುದಾಗಿ ಒಪ್ಪಿಗೆ ನೀಡಿದ್ದರು. ನ. 24, 2023ರಂದು ವರ್ಷ ಹಾಗೂ ಕಿಶೋರ್ ಅವರ ಎಂಗೇಜ್‌ಮೆಂಟ್ ವರ್ಷಾ ಮನೆಯವರ ಸ್ವಂತ ಖರ್ಚಿನಿಂದ ಅದ್ಧೂರಿಯಾಗಿ ನಡೆದಿತ್ತು. ಕಿಶೋರ್ ಕುಟುಂಬದ ಬೇಡಿಕೆಯಂತೆ 18 ಗ್ರಾಮ್ ತೂಕದ ಚಿನ್ನದ ಉಂಗುರವನ್ನು ವರ್ಷಾ ಕಿಶೋರ್‌ನ ಬೆರಳಿಗೆ ಹಾಕಿದ್ದರು.
ಆ ಬಳಿಕ ಕಿಶೋರ್ ಹಾಗೂ ಮೈದುನ ಚಂದನ್ ಆಗಾಗ ವರ್ಷಾ ಮನೆಗೆ ಬರುತ್ತಿದ್ದು, ಒಂದು ದಿನ ಕಿಶೋರ್ ಕಾರಿನ ಬೇಡಿಯನ್ನಿಟ್ಟಿದ್ದರು. ಅದರಂತೆ ವರ್ಷಾ ಮನೆಯವರು 23,60,000 ರೂಗಳ ಹುಂಡೈ ಕ್ರೇಟಾ ಕಾರನ್ನು ಖರೀದಿಸಿ ಕೊಟ್ಟಿರುತ್ತಾರೆ. ಅದನ್ನು ತನ್ನ ಪತಿ ಈಗಲೂ ಉಪಯೋಗಿಸುತ್ತಿದ್ದಾರೆ ಎಂದು ವರ್ಷಾ ತಿಳಿಸಿದ್ದಾರೆ.
ಫೆ.21, 2024ರಂದು ವರ್ಷಾ ಹಾಗೂ ಕಿಶೋರ್ ಮದುವೆ ನಡೆದಿದ್ದು, ವರ್ಷಾ ಮನೆಯವರು 10 ಲಕ್ಷ ವರದಕ್ಷಿಣೆ ಹಾಗೂ ಹುಡುಗನಿಗೆ ಬ್ರಾಸ್‌ಲೈಟ್, ಚೈನ್ ಸೇರಿದಂತೆ ಅಂದಾಜು 135 ಗ್ರಾಂ ತೂಕದ ಒಡವೆಗಳನ್ನು ಹಾಗೂ ವರ್ಷಾಳಿಗೆ ಸುಮಾರು 850 ಗ್ರಾಂ ತೂಕದ ಚಿನ್ನವನ್ನು ನೀಡಿರುತ್ತಾರೆ. ಅಲ್ಲದೇ 3ಕೆಜಿ ಬೆಳ್ಳಿಯ ವಸ್ತುಗಳನ್ನು ಸಹ ನೀಡಿದ್ದರು.
ಮದುವೆ ಬಳಿಕ ಕಿಶೋರ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿಕೊಂಡಿದ್ದು ಮೇಲಾಧಿಕಾರಿಗಳಿಗೆ ಲಂಚ ನೀಡಲು 10 ಲಕ್ಷ ರೂ. ತರುವಂತೆ ವರ್ಷಾಳಿಗೆ ಹೇಳಿದ್ದರು. ಇದಕ್ಕೆ ನಿರಾಕರಿಸಿದ ವರ್ಷಾಳಿಗೆ ಹಾಗೂ ಅವಳ ಮನೆಯವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ವರ್ಷಾಳಿಗೆ ಸಾಯುಸುತ್ತೇನೆ ಎಂದು ಬೆದರಿಕೆ ಹಾಕಿದ್ದರು.
ವರ್ಷಾ ಅತ್ತೆ, ಮಾವ ಹಾಗೂ ಮೈದುನ ಒಟ್ಟಿಗೆ ಇವರೊಂದಿಗೆ ವಾಸ ಮಾಡುತ್ತಿದ್ದು ಅವರು ಸಹ ವರ್ಷಾಳಿಗೆ ವರದಕ್ಷಿಣಿ ಕಿರುಕುಳ ಜೊತೆಗೆ ಮಾನಸಿಕ ದೈಹಿಕ ಕಿರುಕುಳ ನೀಡುತ್ತಿದ್ದರು.
ಬಳಿಕ ಹೊಸ ಮನೆಗೆ ಪಿಠೋಪಕರಣ ಖರೀದಿಸಲು 2 ಲಕ್ಷ ತರುವಂತೆ ಪತಿ ಕಿಶೋರ್ ಹೇಳಿದ್ದು ವರ್ಷಾ ಇದನ್ನು ನಿರಾಕರಿಸಿದ್ದಾರೆ. ಹೀಗೆ ಒಂದಲ್ಲ ಒಂದು ತಗಾದೆ ತೆಗೆದು ವರ್ಷಾಳಿಗೆ ಹೊಡೆದು ಬಡಿದು, ಕತ್ತುಹಿಸುಕಿ, ಲಟ್ಟಣಿಗೆಯಿಂದ ಹೊಡೆದು ಪತಿ ಸಹಿತ ಅತ್ತೆ, ಮಾವ ಹಾಗೂ ಮೈದುನ ದೈಹಿಕ ಹಿಂಸೆ ನೀಡುತ್ತಿದ್ದರು. ಆದರೆ ವರ್ಷಾ ಇದ್ಯಾವುದನ್ನು ತನ್ನ ಮನೆಯವರಿಗೆ ತಿಳಿಸದೇ ತಮ್ಮೊಳಗೆ ಇಟ್ಟುಕೊಂಡು ಕೊರಗುತ್ತಿದ್ದರು.
ಪತಿ ಹಾಗೂ ಆತನ ಮನೆಯವರ ಹಿಂಸೆಯಿಂದ ಬೇಸತ್ತ ವರ್ಷಾ ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಇದನ್ನು ಅರಿತ ಕಿಶೋರ್ ಹಾಗೂ ಮನೆಯವರು ವರ್ಷಾಳನ್ನು ಮನೆಯೊಳಗೆ ಕೂಡಿಹಾಕಿ, ಆಕೆಯ ಮೊಬೈಲ್ ಕಿತ್ತುಕೊಂಡು, ಪೊಲೀಸ್ ಬೆಲ್ಟ್ ಹಾಗೂ ಲಟ್ಟಣಿಗೆಯಿಂದ ಆಕೆಗೆ ಹೊಡೆದಿದ್ದು ಇದರಿಂದ ವರ್ಷಾ ಹಲ್ಲು, ತುಟಿ ಹಾಗೂ ಕೆನ್ನೆಗೆ ತೀವ್ರವಾಗಿ ಗಾಯವಾಗಿದೆ. ಅಲ್ಲದೇ ಕಿವಿಯಲ್ಲಿ ರಕ್ತಸ್ರಾವ ಸಹ ಆಗಿದೆ. ಬಳಿಕೆ ಆಕೆಯ ಪತಿ ಕಿಶೋರ್ ಮುಖಕ್ಕೆ ತಲೆದಿಂಬು ಒತ್ತಿ ಉಸಿರುಗಟ್ಟಿಸಿ ಚಿತ್ರಹಿಂಸೆ ನೀಡಿ ಆಕೆಯನ್ನು ಸಾಯಿಸಲು ಪ್ರಯತ್ನಿಸಿದ್ದಾನೆ.
ಈ ವಿಷಯ ಅರಿತ ನೆರೆಮನೆಯವರು ವರ್ಷಾ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಆ ಬಳಿಕ ವರ್ಷಾ ಅಣ್ಣಂದಿರು ಬಂದು ಆಕೆಯನ್ನು ಧರ್ಮಸ್ಥಳದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ವರ್ಷಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಈಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಕ್ಷಿಣೆ ತರಲು ಒತ್ತಾಯಿಸಿ, ಮಾನಸಿಕ ಮತ್ತು ದೈಹಿಕವಾಗಿ ಹಿಂಸಿಸಿ ಕೊಲ್ಲಲು ಪ್ರಯತ್ನಿಸಿದ ಪತಿ ಕಿಶೋರ್, ಮಾವ ಪುಟ್ಟಚನ್ನಪ್ಪ, ಅತ್ತೆ ಸರಸ್ವತ್ತಮ್ಮ ಹಾಗೂ ಮೈದುನ ಚಂದನ್ ಪಿ. ಅವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವರ್ಷಾರವರು ಬೆಂಗಳೂರಿನ ಚಂದ್ರಲೇಔಟ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















