Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ  ಸಂಯುಕ್ತ ಆಶ್ರಯದಲ್ಲಿ  ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ  ಸಂಯುಕ್ತ ಆಶ್ರಯದಲ್ಲಿ  ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಂತ ಫಿಲೋಮಿನಾ ವಿಮೆನ್ಸ್‌ ಹಾಸ್ಟೆಲ್‌ನ ವಾರ್ಡನ್‌ ಸಿಸ್ಟರ್‌ ಲೂರ್ದ್‌ ಮೇರಿ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿದ್ದರು. ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಕಾರಣೀಭೂತರಾದ ಮೇರಿ ಕ್ಯೂರಿ, ಅಗಸ್ಟಾ ಅಡಾ ಮುಂತಾದ ಮಹಿಳೆಯರ ಸಾಧನೆಗಳನ್ನು ಉದಾಹರಿಸಿದ ಅವರು ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಯಾವರೀತಿಯ ಸಾಧನೆ ಮಾಡಿರುತ್ತಾರೆ ಎಂಬುದನ್ನು ತಿಳಿಸಿದರು.

Ad Widget

Ad Widget <> Ad Widget

“ನಾವು ಯಾವತ್ತೂ ಬೇರೆಯವರಿಂದ ಸ್ಪೂರ್ತಿ ಪಡೆಯುತ್ತೇವೆ. ನಮ್ಮಲ್ಲಿ ಅಂತರ್ಗತವಾದ ಅಗಾಧ ಶಕ್ತಿಯ ಅರಿವು ನಮಗಿರುವುದಿಲ್ಲ. ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬೇಕಿದ್ದಲ್ಲಿ ನಮ್ಮ ಸಾಮರ್ಥ್ಯದ ಬಗ್ಗೆ ಅರಿವು ಹಾಗೂ ಸ್ವಸಾಮರ್ಥ್ಯದ ಮೇಲೆ ನಂಬಿಕೆ ಇರಬೇಕು” ಎಂದು ಹೇಳಿ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಇತುವ ಅವಕಾಶಗಳು ಹಾಗು ಮಹಿಳೆಯರು  ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.



Ad Widget

Ad Widget

Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊರವರು “ಸಮಾಜವನ್ನು ರೂಪಿಸುವಲ್ಲಿ, ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ನಾಯಕತ್ವ, ಶಿಕ್ಷಣ ಮತ್ತು ಉದ್ಯಮಶೀಲತೆಯಲ್ಲಿ ಮಹಿಳೆಯರು   ನಿರ್ಣಾಯಕ ಪಾತ್ರ ವಹಿಸಿದ್ದಾರೆ   ಪುರುಷರು ಮಹಿಳೆಯರನ್ನು ನಿಗ್ರಹಿಸುತ್ತಾರೆ ಎಂಬುದು ಮಿಥ್ಯೆ ಬದಲಾಗಿ  ಪುರುಷರು ಯಾವಾಗಲೂ ಮಹಿಳೆಯರ ಪ್ರಗತಿಗೆ ಬೆಂಬಲಿಗರು. ಮಹಿಳೆಯರನ್ನು ಸಶಕ್ತಗೊಳಿಸುವಲ್ಲಿ ಪುರುಷರ ಪಾತ್ರ ಮುಖ್ಯ.   

ಮಹಿಳೆಯರಲ್ಲಿನ ಕ್ರಿಯಾಶೀಲತೆ, ನಾಯಕತ್ವ ಮತ್ತು ಸಂಶೋಧನಾ ಪ್ರೌಋತ್ತಿಗಳನ್ನು ಪ್ರೋತ್ಸಾಹಿಸಲು ಕಾಲೇಜು ಯಾವತ್ತೂ ಬದ್ಧವಾಗಿದೆ.  ಸಮಾನತೆ ಮತ್ತು ನಾವೀನ್ಯತೆಗೆ ಕಾಲೇಜು ಸದಾ ಪ್ರೋತ್ಸಾಹ ನೀಡುತ್ತದೆ” ಎಂದು ಹೇಳಿ ಕಾರ್ಯಕ್ರಮದ ಆಯೋಜಕರನ್ನು ಪ್ರಶಂಸಿಸಿದರು.

ಸುರಭಿ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರೂ ಅದ ಡಾ| ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಐಐಸಿ ಘಟಕದ ಸಂಯೋಜಕರೂ ಪರೀಕ್ಷಾಂಗ ಉಪಕುಲಸಚಿವರೂ ಆದ  ಅಭಿಷೇಕ್‌  ಸುವರ್ಣ ವಂದಿಸಿದರು.

ಗಣಕ ವಿಜ್ಞಾನ ವಿಭಾಗದ ಸಹಾಯಕ ಉಪನ್ಯಾಸಕಿ ವಾರಿಜಾ ಎಂ ಕಾರ್ಯಕ್ರಮ ನಿರೂಪಿಸಿದರು. . ಕಾಲೇಜಿನ ಐಐಸಿ ಘಟಕದ ಸಂಯೋಜಕರಾದ ಡಾ| ಗೀತಾ ಪೂರ್ಣಿಮಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಸಿಎ ವಿಭಾಗ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Air Force Day-ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ಯರದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುಡಾ ಅಧ್ಯಕ್ಷ ಅಮಲಾ ರಾಮಚಂದ್ರ ಮಾತನಾಡಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಜೀವನದಲ್ಲಿ ಸಿಗುವ ಅಪೂರ್ವ ಕ್ಷಣ. ಸಾಹಸ, ಧೈರ್ಯ, ದೇಶಸೇವೆಗೆ ವಾಯುಸೇನೆ ಉತ್ತಮ ಆಯ್ಕೆ. ಆಧುನಿಕ ಕಾಲದ ಯುದ್ಧದಲ್ಲಿ ವಾಯುಸೇನೆಯ ಕೊಡುಗೆ ಅತ್ಯಂತ ಮಹತ್ವದ್ದು ಎಂದರು.

Ad Widget

Ad Widget <> Ad Widget

ಶ್ರೀಪ್ರಕಾಶ್ ಕುಕ್ಕಾಜೆ ಪ್ರಧಾನ ಭಾಷಣಗೈದು ವಾಯುಪಡೆಯ ಬಗೆಗೆ ಹಾಗೂ ಸಶಸ್ತ್ರ ಪಡೆಗಳಲ್ಲಿನ ಉದ್ಯೋಗಾವಕಾಶಗಳ ಬಗೆಗೆ ಮಾಹಿತಿ ನೀಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮತ್ತು ಕರ್ನಲ್ ಡಿ.ಜಿ. ಭಟ್ ಉಪಸ್ಥಿತರಿದ್ದರು.



Ad Widget

ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150ನೇ ವರ್ಷದ ಆಚರಣೆ; ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು : ರಾಜೇಶ ಪದ್ಮಾರ್

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ. 15: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ ಚಂದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ ವಿಭಜನೆಯ ವಿರೋಧವಾಗಿ ವಂಗ ಭಂಗ ಚಳವಳಿಯ ಧ್ಯೇಯ ಗೀತೆಯಾಗಿ ಮೂಡಿಬಂದ ಗೀತೆಯಿದು. ಕೊಲ್ಕತ್ತಾದಿಂದ ಹೊರಟ ಹೋರಾಟದ ಗೀತೆ ವಿಶ್ವಾದ್ಯಂತ ವ್ಯಾಪಿಸಿತು ಮತ್ತು ಯುಗಾಂತರ ಸಂಘಟನೆಯ ಆರಂಭಕ್ಕೆ ಮುಂದಡಿಯಿಟ್ಟಿತು. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಈ ಜಯಘೋಷವನ್ನು ಕೂಗಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಮಾಜದ ಪ್ರತಿಯೊಂದು ಸ್ಥರಗಳಲ್ಲೂ ವಂದೇ ಮಾತರಂ ಕುರಿತು ಜಾಗೃತಿ ಮೂಡಬೇಕು. ವಂದೇ ಮಾತರಂ ಕುರಿತ ಈ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ರಾಷ್ಟ್ರೀಯತೆಯೆಡೆಗೆ ಎಚ್ಚರಿಸುವ ಕಾರ್ಯ ಇದು ಎಂದರು.



Ad Widget

ಸಮಾರಂಭದ ಬಳಿಕ ವಿದ್ಯಾರ್ಥಿಗಳು ಒಕ್ಕೊರಲಿನಿಂದ ವಂದೇ ಮಾತರಂ ಗೀತೆಯನ್ನು ಹಾಡಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಜೆ.ರೈ ನಿರೂಪಿಸಿದರು.

Continue Reading

ಶಿಕ್ಷಣ

Vidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ

Published

on



Ad Widget

Ad Widget

Ad Widget

Ad Widget

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ದಿನಾಂಕ: 12-10-2026 ಸೋಮವಾರದಿಂದ 14-10- 2026 ಬುಧವಾರದವರೆಗೆ ಹಮ್ಮಿಕೊಳ್ಳಲಾಗಿತ್ತು.

Ad Widget

Ad Widget

Ad Widget

Ad Widget

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ದಿನಾಂಕ: 12-10-2026 ಸೋಮವಾರದಿಂದ 14-10- 2026 ಬುಧವಾರದವರೆಗೆ ಹಮ್ಮಿಕೊಳ್ಳಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ಆಲೋಚನಾ ಶಕ್ತಿ, ಭವಿಷ್ಯದ ದೃಷ್ಟಿಕೋನ, ಮಾತುಗಾರಿಕೆಗಳನ್ನು ಹೆಣೆದು, ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಅಂದರೆ, ವಿದ್ಯಾರ್ಥಿಗಳನ್ನು, ತರಬೇತುದಾರರನ್ನು ಮತ್ತು ಪೋಷಕರನ್ನು ಒಂದೇ ವೇದಿಕೆಯಲ್ಲಿ ತರಬೇತಿಗೆ ಒಳಪಡಿಸಲಾಗಿತ್ತು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ, ಪುತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಪಿ ಶೆಟ್ಟಿಯವರು ಉದ್ಘಾಟಿಸಿ, ಮಾತನಾಡುತ್ತಾ, “ಪ್ರಸ್ತುತ ಯಾವ ಪದವಿ, ಸ್ನಾತಕೋತ್ತರ ಪದವಿ ಓದುತ್ತೇವೆ ಅನ್ನೋದು ಮುಖ್ಯ ಅಲ್ಲ, ಆಧುನಿಕ ಜಗತ್ತಿನಲ್ಲಿ ಉದ್ಯೋಗ ಕೌಶಲ್ಯತೆ ಪ್ರಮುಖ ಮಾನದಂಡವಾಗಿರುತ್ತದೆ. ವಿದ್ಯಾಮಾತಾ ಕೇವಲ ಪುಸ್ತಕದ ಓದಿಗೆ ಮಾತ್ರ ಸೀಮಿತವಾಗಿರದೆ, ಬದುಕಿನ ಅಡಿಪಾಯವನ್ನೇ ಹಾಕಿಕೊಡುತ್ತಿದೆ. ಇಂತಹ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವುದು ನಿಮ್ಮೆಲ್ಲರ ಭಾಗ್ಯ” ಎಂದು ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.



Ad Widget

ಮೂರು ದಿನದ ತರಬೇತಿಯನ್ನು ಶ್ರೀರಾಮಕುಂಜೇಶ್ವರ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಗುರುಗಳಾದ ಸತೀಶ್ ಭಟ್ ಬಿಳಿನೆಲೆ ಹಾಗೂ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಕೃಷ್ಣ ಮೋಹನ್ ರವರು ನಡೆಸಿಕೊಟ್ಟರು.

Ad Widget

Ad Widget

ಸಮಾರೋಪ ಮತ್ತು ಶಾರದಾ ಪೂಜೆ
ದಿನಾಂಕ: 12-10-2026 ಸೋಮವಾರದಂದು ಗಣಪತಿ ಹೋಮ ಹಾಗೂ ದುರ್ಗಾ ನಮಸ್ಕಾರ ಪೂಜೆ ನಡೆದು, 14-10-2026 ಬುಧವಾರದಂದು ಮಧ್ಯಾಹ್ನ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಶಾರದಾ ಪೂಜೆಯನ್ನು ಸತೀಶ್ ಭಟ್ ಹಾಗೂ ಸುಮನ್ ಸತೀಶ್ ಭಟ್ ದಂಪತಿಗಳು ನೆರವೇರಿಸಿದರು. ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ತರಬೇತಿ ಕಾರ್ಯಗಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, ಮಾತನಾಡುತ್ತಾ ತಾನು ಕೂಡ ಸರಕಾರಿ ಹುದ್ದೆಯ ಆಕಾಂಕ್ಷಿಯಾಗಿ ಪ್ರಯತ್ನ ಮಾಡುವಾಗ ಇದು ನಿಮ್ಮಿಂದ ಸಾಧ್ಯವಾ? ಅಂತ ಪ್ರಶ್ನೆ ಮಾಡಿದವರು ಹೆಚ್ಚು. ನಮ್ಮ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನ ಮಾಡುವವರು ತುಂಬಾ ಕಡಿಮೆ, ಪ್ರಯತ್ನ ಮಾಡುವವರಿಗೆ ಪ್ರೋತ್ಸಾಹ ಕೊಡುವವರು ಇನ್ನೂ ಕಡಿಮೆ, ಆದರೆ ನಿರಂತರ ಪ್ರಯತ್ನದಿಂದ ನಮ್ಮ ಭಾಗದಲ್ಲೂ ಸರಕಾರಿ ಹುದ್ದೆಗೆ ಹೋಗಲು ಸಾಧ್ಯವಿದೆ ಎಂದು ವಿದ್ಯಾಮಾತ ಅಕಾಡೆಮಿಯು ಸಾಭೀತು ಮಾಡಿದೆ.

ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಮಾಡುತ್ತಿರುವ ಎಲ್ಲಾ ಸಮಾಜಮುಖಿ ಸಾಧನಗಳು ಮತ್ತು ತರಬೇತಿಗಳು ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಸಂಪನ್ಮೂಲ ವ್ಯಕ್ತಿಗಳು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ, ತರಬೇತುದಾರರು, ಪೋಷಕರು, ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading