ರಾಷ್ಟ್ರೀಯ
UPI-ದೇಶಾದ್ಯಂತ UPI ಸೇವೆ ಸ್ಥಗಿತ: ಎರಡೂವರೆ ಗಂಟೆ ತೊಂದರೆ ಅನುಭವಿಸಿದ ಡಿಜಿಟಲ್ ಪಾವತಿದಾರರು
ಭಾರತದಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಯು ಬುಧವಾರ (ಮಾ.26) ಸಂಜೆ ಸುಮಾರು ಎರಡೂವರೆ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಈ ಅವಧಿಯಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮುಂತಾದ ಜನಪ್ರಿಯ ಪಾವತಿ ಅಪ್ಲಿಕೇಶನ್‌ಗಳ ಮೂಲಕ ಹಣ ವರ್ಗಾವಣೆ ಮಾಡಲು ಸಾಧ್ಯವಾಗದೆ ಜನರು ತೊಂದರೆ ಎದುರಿಸಿದರು.
ಭಾರತದಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಯು ಬುಧವಾರ (ಮಾ.26) ಸಂಜೆ ಸುಮಾರು ಎರಡೂವರೆ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಈ ಅವಧಿಯಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮುಂತಾದ ಜನಪ್ರಿಯ ಪಾವತಿ ಅಪ್ಲಿಕೇಶನ್‌ಗಳ ಮೂಲಕ ಹಣ ವರ್ಗಾವಣೆ ಮಾಡಲು ಸಾಧ್ಯವಾಗದೆ ಜನರು ತೊಂದರೆ ಎದುರಿಸಿದರು. ಇದರ ಜೊತೆಗೆ, ಎಸ್‌ಬಿಐ, ಎಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಸೇರಿದಂತೆ 10ಕ್ಕೂ ಹೆಚ್ಚು ಬ್ಯಾಂಕ್‌ಗಳ ಯುಪಿಐ ಮತ್ತು ನೆಟ್ ಬ್ಯಾಂಕಿಂಗ್ ಸೇವೆಗಳ ಮೇಲೂ ಪರಿಣಾಮ ಬೀರಿತು.
ಸಂಜೆ 7 ರಿಂದ 9:30 ರವರೆಗೆ, ದೇಶಾದ್ಯಂತ ಚಿಕ್ಕ ಮಳಿಗೆಗಳಿಂದ ಹಿಡಿದು ಶಾಪಿಂಗ್ ಮಾಲ್‌ಗಳವರೆಗೆ ಯುಪಿಐ ಪಾವತಿಗಳಲ್ಲಿ ವ್ಯತ್ಯಯ ಉಂಟಾಗಿ ಜನರು ಪರದಾಡುವಂತಾಯಿತು.
ಡೌನ್‌ಡೆಕ್ಟರ್ ವರದಿಯ ಪ್ರಕಾರ, ಈ ಸಮಯದಲ್ಲಿ 23,000 ಕ್ಕೂ ಅಧಿಕ ದೂರುಗಳು ದಾಖಲಾಗಿದ್ದವು. ಬಳಕೆದಾರರು ಅಪ್ಲಿಕೇಶನ್‌ಗೆ ಲಾಗಿನ್ ಆಗಲು ಮತ್ತು ನೆಟ್ ಬ್ಯಾಂಕಿಂಗ್ ಪ್ರವೇಶಿಸಲು ಸಾಧ್ಯವಾಗದ ಸಮಸ್ಯೆಯನ್ನು ಎದುರಿಸಿದರು. ಆದರೆ, ಈ ತಾಂತ್ರಿಕ ದೋಷಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ರಾಷ್ಟ್ರೀಯ ಪಾವತಿ ನಿಗಮ (NPCI) ಈ ಬಗ್ಗೆ ಪ್ರತಿಕ್ರಿಯಿಸಿ, “ಮಧ್ಯಂತರ ತಾಂತ್ರಿಕ ಸಮಸ್ಯೆಗಳಿಂದಾಗಿ UPI ಸೇವೆಯಲ್ಲಿ ಭಾಗಶಃ ಕುಸಿತ ಕಂಡುಬಂದಿತ್ತು. ಈಗ ಈ ಸಮಸ್ಯೆಗಳನ್ನು ಸರಿಪಡಿಸಲಾಗಿದೆ ಮತ್ತು ವ್ಯವಸ್ಥೆ ಸ್ಥಿರವಾಗಿದೆ. ಬಳಕೆದಾರರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ” ಎಂದು X (ಟ್ವಿಟರ್) ಮೂಲಕ ತಿಳಿಸಿದೆ.
ಪ್ರಮುಖ ಬ್ಯಾಂಕ್‌ಗಳ ಸೇವೆಗಳ ಮೇಲೆ ಪರಿಣಾಮ
ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಜೊತೆಗೆ, ಎಸ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮುಂತಾದವುಗಳ ಸೇವೆಗಳು ಸ್ಥಗಿತಗೊಂಡಿದ್ದವು. ಸುಮಾರು ಎರಡು ಗಂಟೆಗಳ ನಂತರ ಫೋನ್‌ಪೇ ಸೇವೆಗಳು ಪುನರಾರಂಭವಾದರೂ, ಕೆಲವು ಬಳಕೆದಾರರು ನಂತರವೂ ತೊಂದರೆಗಳನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.
ಡೌನ್‌ಡೆಕ್ಟರ್ ಒಳನೋಟಗಳು
ಡೌನ್‌ಡೆಕ್ಟರ್ ಪ್ರಕಾರ, 82% ಬಳಕೆದಾರರು ಪಾವತಿ ಮಾಡುವಲ್ಲಿ ಸಮಸ್ಯೆ ಎದುರಿಸಿದ್ದರೆ, 14% ಜನರು ಹಣ ವರ್ಗಾವಣೆಯಲ್ಲಿ ಮತ್ತು 5% ಜನರು ಅಪ್ಲಿಕೇಶನ್ ಪ್ರವೇಶಿಸುವಲ್ಲಿ ತೊಂದರೆ ಅನುಭವಿಸಿದ್ದಾರೆ. ಈ ಸ್ಥಗಿತವು ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯ ಮೇಲೆ ಗಮನಾರ್ಹ ಪರಿಣಾಮ ಬೀರಿತು.
UPI ಮತ್ತು NPCI ಪಾತ್ರ
ಭಾರತದಲ್ಲಿ RTGS ಮತ್ತು NEFT ವ್ಯವಸ್ಥೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ವಹಿಸುತ್ತದೆಯಾದರೆ, IMPS, RuPay, ಮತ್ತು UPI ನಂತಹ ಸೇವೆಗಳನ್ನು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ನಿರ್ವಹಿಸುತ್ತದೆ. 2020ರ ಜನವರಿ 1 ರಿಂದ ಸರ್ಕಾರವು UPI ವಹಿವಾಟುಗಳಿಗೆ ಶೂನ್ಯ ಶುಲ್ಕ ನೀತಿಯನ್ನು ಜಾರಿಗೆ ತಂದಿದೆ, ಇದು ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಈ ಘಟನೆಯು ಭಾರತದ ಡಿಜಿಟಲ್ ಪಾವತಿ ಮೂಲಸೌಕರ್ಯದ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ಜನರಿಗೆ ತಾತ್ಕಾಲಿಕ ತೊಂದರೆ ಉಂಟುಮಾಡಿದರೂ, NPCI ತ್ವರಿತವಾಗಿ ಸಮಸ್ಯೆಯನ್ನು ಪರಿಹರಿಸಿದ್ದು ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.


















