ದಕ್ಷಿಣ ಕನ್ನಡ
ಪುತ್ತೂರು : ಜಾಗದ ತಕರಾರು : ರೇಖನಾಥ ರೈ ಹಾಗೂ ಸಹೋದರಿಯ ಮೇಲೆ ಮಾರಕಾಯುಧ ಬೀಸಿದ ಹಸೈನರ್

ಪುತ್ತೂರು : ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಇಂದು ( ಮಾ 27) ಸಂಜೆ ನಡೆದಿದೆ.
ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ ಹಾಗೂ ಅವರ ಅಕ್ಕ ಪುಷ್ಪಾವತಿ ರೈಯವರ ಮೇಲೆ ಹಲ್ಲೆ ಯತ್ನ ನಡೆದಿದೆ. ಹಸೈನರ್ ಎಂಬಾತ ಹಲ್ಲೆ ನಡೆಸಲು ಮುಂದಾಗಿರುವುದಾಗಿ ರೇಖನಾಥ ರೈಯವರು ತಿಳಿಸಿದ್ದಾರೆ.
ಇವರ ಹಾಗು ಹಸೈನರ್ ಮಧ್ಯೆ ಜಾಗದ ತಕರಾರು ಕಳೆದ ಹಲವು ಸಮಯದಿಂದ ಇತ್ತು ಎನ್ನಲಾಗಿದೆ. ಅದು ಇಂದು ವಿಕೋಪಕ್ಕೆ ಹೋಗಿ ತಲ್ವಾರು ಬೀಸುವಲ್ಲಿಯವರೆಗೆ ತಲುಪಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಘಟನೆ ಕೆಲ ಸಮಯದ ಹಿಂದಷ್ಟೇ ನಡೆದಿದ್ದು, ದೂರುದಾರರು ಇನ್ನಷ್ಟೇ ದೂರು ನೀಡಬೇಕಾಗಿರುವುದರಿಂದ ಹೆಚ್ಚಿನ ಮಾಹಿತಿ ಲಭಿಸಿಲ್ಲ
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್16 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ22 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized23 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಆರೋಗ್ಯ18 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ22 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

















