ಉಡುಪಿ
Udupi-ಉಡುಪಿ : ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ವೈದ್ಯ ಕಾಣೆಯಾಗಿದ್ದಾರೆ ಪೋಸ್ಟ್ ವೈರಲ್
ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಕಾಣೆಯಾಗಿದ್ದಾರೆ..!? ಅವರಿಬ್ಬರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ತಿಳಿಸಿ…!! ಹೀಗೊಂದು ಪೋಸ್ಟ್ ಕಳೆದ ಮೂರ್ನಾಲ್ಕು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಉಡುಪಿ: ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಕಾಣೆಯಾಗಿದ್ದಾರೆ..!? ಅವರಿಬ್ಬರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ತಿಳಿಸಿ…!! ಹೀಗೊಂದು ಪೋಸ್ಟ್ ಕಳೆದ ಮೂರ್ನಾಲ್ಕು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಾ.18ರಂದು ಮಲ್ಪೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರೂ ಸಚಿವರ ಭಾವಚಿತ್ರ ಲಗತ್ತಿಸಿ, ಇವರು ಕೊನೆಯ ಬಾರಿ ಉಡುಪಿಯಲ್ಲಿ ಕಾಣಿಸಿಕೊಂಡಿದ್ದು ತಿಳಿದಿಲ್ಲ ಎಂಬ ಬರಹದ ಪೋಸ್ಟ್, ಜಿಲ್ಲೆಯ ಜನರ ಗಮನ ಸೆಳೆಯುತ್ತಿದೆ.
ಮರೀಚಿಕೆಯಾದ ಉಸ್ತುವಾರಿ ಸಚಿವೆ
ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ನೇಮಕವಾದ ಬಳಿಕ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಳರ್, ಉಡುಪಿಯಲ್ಲಿಯೇ ಮನೆ ಮಾಡುತ್ತೇನೆ ಎಂದು ಹೇಳಿದ್ದರು. ಮಾತಿನಂತೆ ಉಡುಪಿಯಲ್ಲಿ ಮನೆ ಮಾಡಿದ್ದರೂ ಸಹ ಸರ್ಕಾರ ರಚನೆಯಾಗಿ ಎರಡು ವರ್ಷ ಸಮೀಪಿಸುತ್ತಿದ್ದರೂ ಅವರು ಉಡುಪಿಗೆ ಈವರೆಗೆ ಬಂದದ್ದು ಕೇವಲ ಮೂರ್ನಾಲ್ಕು ಸಲ ಮಾತ್ರ. ಆಗೊಮ್ಮೆ-ಈಗೊಮ್ಮೆ ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಮಳೆಯಂತೆ ಅವರು ಬಂದು ಹೋಗುತ್ತಿದ್ದಾರೆ. ಜಿಲ್ಲೆಯ ಜನರ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವೆಯೆಂದರೆ ಮರೀಚಿಕೆ ಎಂಬಂತಾಗಿದೆ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ.
ಸಮಸ್ಯೆಗೆ ಸ್ಪಂದಿಸದ ವೈದ್ಯ
ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಪಕ್ಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವರು. ಸಮೀಪದಲ್ಲೇ ಅವರು ಇದ್ದರೂ ಸಹ ಉಡುಪಿಗೆ ನೆಂಟರ ಹಾಗೆ ಬಂದು ಹೋಗುತ್ತಿದ್ದಾರೆ.ಜಿಲ್ಲೆಯಲ್ಲಿ ಲೈಟ್ ಫಿಶಿಂಗ್ ಸಮಸ್ಯೆ ಸೇರಿದಂತೆ ಮೀನುಗಾರರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ನಡೆದ ಹಲ್ಲೆ ಪ್ರಕರಣ ಹಾಗೂ ಐವರು ಮೀನುಗಾರರ ಬಂಧನ ಆಗಿದ್ದರೂ ಪ್ರಕರಣದ ಸತ್ಯಾಸತ್ಯತೆ ತಿಳಿದು ಸರ್ಕಾರಕ್ಕೆ ಮಾಹಿತಿ ನೀಡುವ ಕೆಲಸವನ್ನೂ ಮಾಡಿಲ್ಲ ಎಂಬ ಆರೋಪ ಮೀನುಗಾರರಿಂದ ಕೇಳಿಬರುತ್ತಿದೆ.
ಪೋಸ್ಟರ್‌ನಲ್ಲೇನಿದೆ?
ರಾಜ್ಯಕ್ಕೆ ಗೃಹಲಕ್ಷ್ಮಿ, ಜಿಲ್ಲೆಗೆ ಜೈಲ್ ಲಕ್ಷ್ಮೀ ಗ್ಯಾರಂಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ, ಉಡುಪಿಯಲ್ಲಿ ಕೊನೇ ಬಾರಿ ಕಾಣಿಸಿಕೊಂಡಿದ್ದು ಮಾಹಿತಿ ಇಲ್ಲ. ಸಾರ್ವಜನಿಕವಾಗಿ ಕಂಡರೆ ತಿಳಿಸಿ ಎಂದು ಬರೆಯಲಾಗಿದೆ. ಮೊಗವೀರ ಸಮಾಜದ ಮೀನುಗಾರ ಮಹಿಳೆಯರು ಸುಳ್ಳು ಕೇಸ್‌ನಿಂದ ಜೈಲ್ ಸೇರಿದ್ದರೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಸೌಜನ್ಯಕ್ಕೂ ಉಡುಪಿಗೆ ಭೇಟಿ ನೀಡಿಲ್ಲ ಎಂದು ಬರಹಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ
Murder-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ; ಕಾರಿನಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗನೊಂದಿಗೆ ವಾಸಿಸುತ್ತಿದ್ದರು. ಪ್ರಕಾಶ್ ಅವರ ಸಾವಿನ ಬಳಿಕ ಪತ್ನಿ ಹಾಗೂ ಮಗನ ಸಂಪರ್ಕವೂ ಲಭ್ಯವಾಗದಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.
ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ ಸಹೋದರನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಅವರು, ಆ ದಿನ ಟೆಕ್ಸ್ಟ್ ಮೆಸೇಜ್ ಕಳುಹಿಸಿದ್ದರು. ಸಹೋದರರು ದೂರವಾಣಿ ಮೂಲಕ ಮಾತನಾಡುವಂತೆ ಒತ್ತಾಯಿಸಿದಾಗ ಸಂಭಾಷಣೆ ಕಡಿತಗೊಂಡಿತ್ತು ಎನ್ನಲಾಗಿದೆ.
ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಭಾರತಕ್ಕೆ ತೆರಳಿದ್ದಾರೆ ಎಂದು ಕಂಪನಿ ತಿಳಿಸಿತ್ತು. ಆದರೆ ಪ್ರಕಾಶ್ ತಮ್ಮ ಸ್ವಗ್ರಾಮಕ್ಕೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಶಾರ್ಜಾ ಅಧಿಕಾರಿಗಳನ್ನು ಸಂಪರ್ಕಿಸಿ ನಾಪತ್ತೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದು, ಹುಡುಕಾಟದ ವೇಳೆ ಪ್ರಕಾಶ್ ಅವರದ್ದೇ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಲಾಗಿತ್ತು ಎನ್ನಲಾಗಿದೆ.
ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗ ಪ್ರಸ್ತುತ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಗಮನ ಅವರತ್ತವೂ ಹರಿದಿದೆ. ಕೊಲೆ ಪ್ರಕರಣದಲ್ಲಿ ಟೀನಾ ಅವರ ಪಾತ್ರವಿದೆಯೇ ಅಥವಾ ಬೇರೆ ಕಾರಣಗಳಿಂದ ಅವರು ಮಗನೊಂದಿಗೆ ಶಾರ್ಜಾದಿಂದ ತೆರಳಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಶಾರ್ಜಾದಿಂದ ತೆರಳಿ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಟೀನಾ ಶಿಕ್ಷಕಿಯಾಗಿ ಉದ್ಯೋಗದಲ್ಲಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರನಿದ್ದಾನೆ.
ದಂಪತಿಗಳ ನಡುವೆ ಯಾವುದೇ ಗಂಭೀರ ವೈಮನಸ್ಸು ಅಥವಾ ವಿವಾದವಿದ್ದ ಬಗ್ಗೆ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕಾಶ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತಕ್ಕೆ ಬಂದು ತೆರಳಿದ್ದರು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕಾಶ್ ಅವರ ಪತ್ನಿ ಹಾಗೂ ಮಗನ ಇರುವಿಕೆ ಸೇರಿದಂತೆ ಕೊಲೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.
-
ಪುತ್ತೂರು20 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















