Uncategorized
18 ವರ್ಷದ ವೃತ್ತಿಜೀವನದಲ್ಲಿ 28 ಬಾರಿ ವರ್ಗಾವಣೆಗೊಂಡಿದ್ದ ದಕ್ಷಿಣ ಕನ್ನಡ ಮೂಲದ ಖಡಕ್ ಕೆಎಎಸ್ ಅಧಿಕಾರಿ ‘ಕರ್ನಾಟಕದ ಖೇಮ್ಕಾ’ ಖ್ಯಾತಿಯ ಮಥಾಯಿ ಸದ್ಯದಲ್ಲೇ ಆಪ್ ಗೆ ಸೇರ್ಪಡೆ
ಬೆಂಗಳೂರು (ಏ.5): ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ಭಾಸ್ಕರ್ ರಾವ್ (Bhaskar Rao) , ಆಮ್ ಆದ್ಮಿ ಪಾರ್ಟಿ (AAP) ಸೇರ್ಪಡೆಗೊಂಡಿದ್ದು ಗೊತ್ತೇ ಇದೆ. ಇದೀಗ ಮತ್ತೊಬ್ಬ ಅಧಿಕಾರಿ ರಾಜಕೀಯದತ್ತ ಮುಖಮಾಡಿದ್ದಾರೆ. KAS ಅಧಿಕಾರಿಯಾಗಿದ್ದ ಕೆ. ಮಥಾಯಿ (K. Mathai) ಮುಂದಿನ ವಾರ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ. KAS ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಕೆ. ಮಥಾಯ್ ಮೂಲತಃ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿಯವರು. ಸಕಾಲ, ಬಿಬಿಎಂಪಿ (BBMP) ಜಾಹಿರಾತು ವಿಭಾಗದಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಮುಂದಿನ ವಾರ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ. 2020ರಲ್ಲಿ ಸೇವೆಯಿಂದ ನಿವೃತ್ತರಾದ ಕೆ. ಮಥಾಯಿ ಅವ್ರು, ತಮ್ಮ ಹಲವಾರು ದಿಟ್ಟ ಕ್ರಮಗಳಿಂದ ಸರ್ಕಾರವನ್ನ ಹಲವು ಬಾರಿ ಎದುರುಹಾಕಿಕೊಂಡು ಸುದ್ದಿಯಾಗಿದ್ದರು.
ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಕೆ ಮಥಾಯ್
ಕರ್ನಾಟಕದ ‘ಖೇಮ್ಕಾ’ ಎಂದೇ ಕರೆಯಿಸಿಕೊಂಡಿದ್ದ ಖಡಕ್ ಅಧಿಕಾರಿ ಇವರು. ಕರ್ನಾಟಕವೇ ಏಕೆ ಇಡೀ ದೇಶವೇ ಕಂಡ ಅತ್ಯಂತ ದಕ್ಷ, ಪ್ರಾಮಾಣಿಕ ಅಧಿಕಾರಿಯಲ್ಲೊಬ್ಬರಾಗಿದ್ರು.. ತಮ್ಮ ವೃತ್ತಿಜೀವನದ ಉದ್ದಕ್ಕೂ ದಕ್ಷತೆಯ ಕಾರ್ಯಕ್ಕೆ ಹೆಸರಾದವರು. ಇದಕ್ಕಾಗಿ ಅವರ ಸಿಕ್ಕ ಕೊಡುಗೆ ಸಾಲು ಸಾಲು ವರ್ಗಾವಣೆಗಳು. ತಮ್ಮ ವೃತ್ತಿಜೀವನದ 18 ವರ್ಷಗಳಲ್ಲಿ 28 ಕ್ಕೂ ಹೆಚ್ಚು ಬಾರಿ ವರ್ಗಾವಣೆಗೊಂಡವರು ಮಥಾಯ್. ಬಿಡಿಎನ ಭೂಸ್ವಾಧೀನಾಧಿಕಾರಿಯಾಗಿ ನಿವೃತ್ತರಾದರು.
ನಿವೃತ್ತಿ ನಂತ್ರ ವಕೀಲ ವೃತ್ತಿ
ಸದಾ ಕ್ರಿಯಾಶೀಲ ವ್ಯಕ್ತಿತ್ವದ ಮಥಾಯ್, ನಿವೃತ್ತಿ ನಂತರ ಒಂದ್ ಕ್ಷಣ ವಿರಮಿಸದೆ ಮಾರನೇ ದಿನದಿಂದಲೇ ಕಪ್ಪು ಕೋಟು ಧರಿಸಿ ವಕೀಲಿಕೆ ಆರಂಭಿಸಿಯೇ ಬಿಟ್ಟಿದ್ರು. ಬಹಳಷ್ಟು ಜನಕ್ಕೆ ತಿಳಿದಿರಲಿಕ್ಕಿಲ್ಲ ಕೆ. ಮಥಾಯಿ ಅವರು ಕಾನೂನು ಪದವೀಧರ ಕೂಡ. ಕೆಲಸ ಮಾಡುತ್ತಿರುವ ಸಂದರ್ಭದಲ್ಲಿಯೇ ಕಾನೂನು ವಿಷಯದಲ್ಲಿ ಪದವಿಯನ್ನು ಪಡೆದ ಮಥಾಯಿರವರು ತಮ್ಮ ಆಡಳಿತಾತ್ಮಕ ವಿಷಯಗಳನ್ನು ಅನಾಯಾಸವಾಗಿ ನಿಭಾಯಿಸಲು, ಯಾವುದೇ ವಿವಾದಗಳಾಗದಿರುವಂತೆ ಕರ್ತವ್ಯ ನಿರ್ವಹಿಸಲು ಸಹಕಾರಿಯಾದದ್ದೇ ಅವರ ಕಾನೂನು ಪದವಿ. ಪತ್ನಿ ಹಾಗೂ ಮಗ ಕೂಡ ವಕೀಲರಾಗಿರುವುದರಿಂದ ಇಡೀ ಕುಟುಂಬ ವಕೀಲರಿಂದ ತುಂಬಿಹೋದಂತಾಗಿತ್ತು.
ಬಿಬಿಎಂಪಿ ಅಕ್ರಮ ಬಯಲಿಗೆಳೆದಿದ್ದ ಮಥಾಯಿ
ಮಥಾಯಿ ಅವರು ಜಾಹೀರಾತು ವಿಭಾಗದಲ್ಲಿ ಆದಾಯ ಸೋರಿಕೆ ಕುರಿತು ಒಟ್ಟು ಎಂಟು ವರದಿಗಳನ್ನು ನೀಡಿದ್ದಾರೆ. ಮೊದಲೆರಡು ವರದಿ ಸಲ್ಲಿಕೆಯಾದ ವೇಳೆ ಪಾಲಿಕೆ ಸದಸ್ಯರು ಅಧಿಕಾರಿಯ ಬೆನ್ನು ತಟ್ಟಿದ್ದರು. ಜಾಹೀರಾತು ನಿಯಮಗಳನ್ನು ಬಿಗಿ ಮಾಡಿದರೆ ಕನಿಷ್ಠ ಒಂದು ಸಾವಿರ ಕೋಟಿ ರೂ. ಪಾಲಿಕೆಯ ಬೊಕ್ಕಸ ಸೇರಬಹುದೆಂದು ಅಂದಾಜಿಸಲಾಗಿತ್ತು. ನಂತರದ ವರದಿಗಳು ಬರಲಾರಂಭಿಸಿದ ವೇಳೆ ಇದೇ ರೀತಿಯ ಪ್ರೋತ್ಸಾಹದ ಮಾತುಗಳು ಬರಲಿಲ್ಲ. ಮಥಾಯಿ ಅವರು ವಾಸ್ತವವನ್ನು ಮೀರಿ ಆದಾಯ ಮೂಲ ಲೆಕ್ಕ ಹಾಕಿ ವರದಿ ನೀಡುತ್ತಿದ್ದಾರೆಂಬ ಆರೋಪ ಪಾಲಿಕೆ ಸಭೆಯಲ್ಲೇ ಪ್ರತಿಧ್ವನಿಸಿ ಪರ-ವಿರೋಧ ನಿಲುವು ವ್ಯಕ್ತವಾಯಿತು.
ಮೊದಲ ವರದಿ ಸಲ್ಲಿಕೆಯಾದ ವೇಳೆ 2015ರ ಹಿಂದಿನ ಎಂಟು ವರ್ಷಗಳಲ್ಲಿ ಜಾಹೀರಾತು ಬಾಬ್ತಿನಿಂದ ಎರಡು ಸಾವಿರ ಕೋಟಿ ರೂ. ಆದಾಯ ಪಾಲಿಕೆಗೆ ಕೈಬಿಟ್ಟಿದೆ ಎಂಬುದನ್ನು ತಿಳಿಸಲಾಗಿತ್ತು. ಇದು ಸತ್ಯಕ್ಕೆ ದೂರ ಎಂಬುದಾಗಿ ಹಲವು ಕಾರ್ಪೊರೇಟರ್‌ಗಳು ಮೂದಲಿಸಿದ್ದರು. ಅಧಿಕಾರಿಗಳ ವಲಯದಲ್ಲೇ ಮಥಾಯಿ ವರದಿಗೆ ಕೊಂಕು ಮಾತುಗಳು ಕೇಳಿಬಂದಿದ್ದವು. ಆಗಿನ ನಗರಾಭಿವೃದ್ಧಿ ಸಚಿವ ರಾಮಲಿಂಗಾರೆಡ್ಡಿ ಕೂಡ ವರದಿ ಕುರಿತಂತೆ ತಮ್ಮದೇ ವ್ಯಾಖ್ಯಾನ ಮಾಡಿದ್ದರೂ, ತನಿಖೆಗೆ ಆಸಕ್ತಿ ತೋರಿಸಿದ್ದರು. ಇದು ಬಿಬಿಎಂಪಿ ಚುನಾವಣೆಯಲ್ಲೂ ಪ್ರಸ್ತಾಪಗೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿತ್ತು.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.
ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
-
ಬಿಗ್ ನ್ಯೂಸ್21 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ20 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ15 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ18 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ19 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ18 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ15 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ20 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















