ಉಡುಪಿ
Love jihad allegations in Udupi ಮಗಳನ್ನು ಅಪಹರಿಸಿ ವಿವಾಹಕ್ಕೆ ಯತ್ನ – ಮುಸ್ಲಿಂ ಯುವಕನ ವಿರುದ್ದ ಯುವತಿಯ ತಂದೆಯಿಂದ ದೂರು; ನಾಪತ್ತೆಯಾಗಿರುವ ಜೋಡಿಯಿಂದ ಪೊಲೀಸರಿಗೆ ಪತ್ರ – ಉಡುಪಿಯಲ್ಲಿ ಸಂಚಲನ ಸೃಷ್ಟಿಸಿರುವ ಪ್ರಕರಣ

ಉಡುಪಿ, ಮಾರ್ಚ್ 28: ಕೊಡವೂರಿನ ಗಾಡ್ವಿನ್ ದೇವದಾಸ್ ಎಂಬುವವರು ತಮ್ಮ ಮಗಳನ್ನು (ಜೀನ ಮೆರೀಲ್) ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬ ಮುಸ್ಲಿಂ ಯುವಕ ಅಪಹರಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದು “ಲವ್ ಜಿಹಾದ್” ಷಡ್ಯಂತ್ರದ ಭಾಗವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ, ಮೊಹಮ್ಮದ್ ಅಕ್ರಮ್ ಉಡುಪಿಯ ಉಪ ನೋಂದಣಿ ಕಚೇರಿಯಲ್ಲಿ ವಿಶೇಷ ವಿವಾಹ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದಾನೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಗಾಡ್ವಿನ್ ದೇವದಾಸ್ ಉಪ ನೋಂದಣಾಧಿಕಾರಿಗೆ ಪತ್ರ ಬರೆದು, ಈ ವಿವಾಹ ನೋಂದಣಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಇನ್ನು ನಾಪತ್ತೆಯಾಗಿರುವ ಜೋಡಿಗಳಾದ ಮೊಹಮ್ಮದ್ ಅಕ್ರಮ್ ಹಾಗೂ ಜೀನ ಮೆರೀಲ್ ಅವರು ಜಿಲ್ಲಾ ಪೊಲೀಸ್ ಮಷ್ಠಾಧಿಕಾರಿಗಳಿಗೆ ಹಾಗು ಮಲ್ಪೆ ಠಾಣಾಧಿಕಾರಿಗೆ ಮಾ.19ರಂದು ಪತ್ರ ಬರೆದಿದ್ದಾರೆ. ಅದರಲ್ಲಿ “ನಾವು ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದು, ಮನೆಯವರು ವಿರೋಧಿಸುತ್ತಿದ್ದಾರೆ. ಕಾನೂನಿನ ಮೂಲಕ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ್ದೇವೆ. ನಾವು ಅನ್ನೋನ್ಯದಿಂದಿದ್ದೇವೆ. ನಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಸ್ತುತ ಮೊಹಮ್ಮದ್ ಅಕ್ರಮ್ ಹಾಗೂ ಜೀನ ಮೆರೀಲ್ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಕ್ರೈಸ್ತ ಧರ್ಮಕ್ಕೆ ಸೇರಿದವಳಾಗಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದಾಗ ಈ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ
ಪೋಷಕರ ಆರೋಪಗಳೇನು
ಜೀನ ಮೆರೀಲ್ ಪೋಷಕರಾದ ಗಾಡ್ವಿನ್ ದೇವದಾಸ್ ಮತ್ತು ಅವರ ಪತ್ನಿ ಮೇರುಸ್ ಪುಷ್ಪಲತಾ ಅವರು ಮೊಹಮ್ಮದ್ ಅಕ್ರಮ್ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರೆ. “ನಮ್ಮ ಮಗಳು ಜೀನಾಳನ್ನು ಅಕ್ರಮ್ ಅಪಹರಿಸಿದ್ದಾನೆ. ಆಕೆ ಅಪ್ರಾಪ್ತೆಯಾಗಿದ್ದಾಗಲೇ ಆತ ಕಿರುಕುಳ ನೀಡಿದ್ದ. ಐದು ವರ್ಷಗಳ ಹಿಂದೆ ಪೋಕ್ಸೋ ಕೇಸ್ ದಾಖಲಿಸಿದ್ದೆವು, ಆದರೆ ಲೈಂಗಿಕ ಕಿರುಕುಳ ಸಾಬೀತಾಗದ ಕಾರಣ ಕೇಸು ವಜಾಗೊಂಡಿತ್ತು. ಈಗ ಸೇಡಿನಿಂದ ಅಪಹರಣ ಮಾಡಿದ್ದಾನೆ,” ಎಂದು ಆರೋಪಿಸಿದ್ದಾರೆ.
ಅವರು ಮುಂದುವರಿದು, “ಅಕ್ರಮ್ ಇನ್‌ಸ್ಟಾಗ್ರಾಮ್ ಮೂಲಕ ನಮ್ಮ ಮಗಳೊಂದಿಗೆ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ಸಂಪರ್ಕದಲ್ಲಿದ್ದಾನೆ. ಆಕೆಯನ್ನು ಪುಸಲಾಯಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹರಡುವ ಧಮ್ಕಿ ಹಾಕಿದ್ದಾನೆ. ಆತ ಡ್ರಗ್ಸ್ ವ್ಯಸನಿಯಾಗಿದ್ದು, ಯಾವುದೇ ಉದ್ಯೋಗವಿಲ್ಲ. ಗೆಳೆಯರ ಜೊತೆ ಬೆರೆಯದಂತೆ ಒತ್ತಡ ಹೇರಿದ್ದಾನೆ,” ಎಂದು ದೂರಿದ್ದಾರೆ.
ಪೊಲೀಸರ ಮೇಲೆ ಅಸಮಾಧಾನ
ಪೋಷಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, “ಒಮ್ಮೆ ನಮ್ಮ ಮಗಳನ್ನು ತಂದು ನಮ್ಮ ಮುಂದೆ ನಿಲ್ಲಿಸಿ. ಆರೋಪಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆತನನ್ನು ತಕ್ಷಣ ಬಂಧಿಸಬೇಕು. ಮೊಹಮ್ಮದ್ ಅಕ್ರಮ್ ಗರುಡ ಗ್ಯಾಂಗ್‌ನ ಸದಸ್ಯ ಎಂಬ ಮಾಹಿತಿ ಇದೆ. ಪೊಲೀಸರ ಬಳಿ ಹೋದರೆ, ಇಬ್ಬರೂ ವಯಸ್ಕರು ಎಂದು ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎನ್ನುತ್ತಾರೆ. ವಿಡಿಯೋ ತೋರಿಸಿ, ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ನಮ್ಮನ್ನು ವಾಪಸ್ ಕಳುಹಿಸಿದ್ದಾರೆ. ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ,” ಎಂದು ಆರೋಪಿಸಿದ್ದಾರೆ.
ಯುವತಿಯ ದೂರು
ವಿಶೇಷ ಸಂಗತಿಯೆಂದರೆ, ಈ ಯುವತಿಯೇ ಫೆಬ್ರವರಿ 21ರಂದು ಉಡುಪಿ ಮಹಿಳಾ ಠಾಣೆಯಲ್ಲಿ ಮೊಹಮ್ಮದ್ ಅಕ್ರಮ್ ವಿರುದ್ಧ ದೂರು ದಾಖಲಿಸಿದ್ದಳು. ಆತ ತನಗೆ ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಳು. ಆದರೆ ಈಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಪೊಲೀಸ್ ತನಿಖೆ
ಪೊಲೀಸರು ಈ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದು, ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ. “ಮುಸ್ಲಿಮರು ಎಲ್ಲರೂ ಕೆಟ್ಟವರೆಂದು ಹೇಳುವುದಿಲ್ಲ. ಸಭ್ಯ ಹುಡುಗನಾಗಿದ್ದರೆ ನಮಗೆ ಯಾವ ತಕರಾರೂ ಇರಲಿಲ್ಲ. ಆದರೆ ಐದು ವರ್ಷಗಳಿಂದ ನನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ,” ಎಂದು ಗಾಡ್ವಿನ್ ದೇವದಾಸ್ ಹೇಳಿದ್ದಾರೆ. ಈ ಪ್ರಕರಣ ಉಡುಪಿಯಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ
Murder-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ; ಕಾರಿನಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗನೊಂದಿಗೆ ವಾಸಿಸುತ್ತಿದ್ದರು. ಪ್ರಕಾಶ್ ಅವರ ಸಾವಿನ ಬಳಿಕ ಪತ್ನಿ ಹಾಗೂ ಮಗನ ಸಂಪರ್ಕವೂ ಲಭ್ಯವಾಗದಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.
ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ ಸಹೋದರನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಅವರು, ಆ ದಿನ ಟೆಕ್ಸ್ಟ್ ಮೆಸೇಜ್ ಕಳುಹಿಸಿದ್ದರು. ಸಹೋದರರು ದೂರವಾಣಿ ಮೂಲಕ ಮಾತನಾಡುವಂತೆ ಒತ್ತಾಯಿಸಿದಾಗ ಸಂಭಾಷಣೆ ಕಡಿತಗೊಂಡಿತ್ತು ಎನ್ನಲಾಗಿದೆ.
ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಭಾರತಕ್ಕೆ ತೆರಳಿದ್ದಾರೆ ಎಂದು ಕಂಪನಿ ತಿಳಿಸಿತ್ತು. ಆದರೆ ಪ್ರಕಾಶ್ ತಮ್ಮ ಸ್ವಗ್ರಾಮಕ್ಕೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಶಾರ್ಜಾ ಅಧಿಕಾರಿಗಳನ್ನು ಸಂಪರ್ಕಿಸಿ ನಾಪತ್ತೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದು, ಹುಡುಕಾಟದ ವೇಳೆ ಪ್ರಕಾಶ್ ಅವರದ್ದೇ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಲಾಗಿತ್ತು ಎನ್ನಲಾಗಿದೆ.
ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗ ಪ್ರಸ್ತುತ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಗಮನ ಅವರತ್ತವೂ ಹರಿದಿದೆ. ಕೊಲೆ ಪ್ರಕರಣದಲ್ಲಿ ಟೀನಾ ಅವರ ಪಾತ್ರವಿದೆಯೇ ಅಥವಾ ಬೇರೆ ಕಾರಣಗಳಿಂದ ಅವರು ಮಗನೊಂದಿಗೆ ಶಾರ್ಜಾದಿಂದ ತೆರಳಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಶಾರ್ಜಾದಿಂದ ತೆರಳಿ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಟೀನಾ ಶಿಕ್ಷಕಿಯಾಗಿ ಉದ್ಯೋಗದಲ್ಲಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರನಿದ್ದಾನೆ.
ದಂಪತಿಗಳ ನಡುವೆ ಯಾವುದೇ ಗಂಭೀರ ವೈಮನಸ್ಸು ಅಥವಾ ವಿವಾದವಿದ್ದ ಬಗ್ಗೆ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕಾಶ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತಕ್ಕೆ ಬಂದು ತೆರಳಿದ್ದರು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕಾಶ್ ಅವರ ಪತ್ನಿ ಹಾಗೂ ಮಗನ ಇರುವಿಕೆ ಸೇರಿದಂತೆ ಕೊಲೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು24 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ24 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ22 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ


















