Connect with us

ಕ್ರೀಡೆ

IPL 2025 : CSK VS RCB : 2008ರ ಐಪಿಎಲ್ ಉದ್ಘಾಟನಾ ಪಂದ್ಯದ ನಂತರ ಮೊಟ್ಟ ಮೊದಲ ಬಾರಿ CSK ತವರು ನೆಲದಲ್ಲೆ ಗೆದ್ದು ಬೀಗಿದ RCB

Published

on

Ad Widget

Ad Widget

Ad Widget

Ad Widget

2008ರ ಉದ್ಘಾಟನಾ ಐಪಿಎಲ್ ಸೀಸನ್ ನಲ್ಲಿ ಆರ್ ಸಿಬಿಯು ಸಿಎಸ್ ಕೆ ವಿರುದ್ಧ ಜಯಿಸಿದ್ದೇ ಕೊನೆ. ಆ ಬಳಿಕ ಇಷ್ಟೂ ವರ್ಷಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆರ್ ಸಿಬಿಯು ಚೆನ್ನೈನಲ್ಲಿ ಗೆದ್ದಿಲ್ಲ. ಶುಕ್ರವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಯು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು. ಇದನ್ನು ಬೆಂಬತ್ತಿ ಹೊರಟ ಚೆನ್ನೈ ತಂಡವು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Ad Widget

Ad Widget

Ad Widget

Ad Widget

2008ರ ಉದ್ಘಾಟನಾ ಐಪಿಎಲ್ ಸೀಸನ್ ನಲ್ಲಿ ಆರ್ ಸಿಬಿಯು ಸಿಎಸ್ ಕೆ ವಿರುದ್ಧ ಜಯಿಸಿದ್ದೇ ಕೊನೆ. ಆ ಬಳಿಕ ಇಷ್ಟೂ ವರ್ಷಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆರ್ ಸಿಬಿಯು ಚೆನ್ನೈನಲ್ಲಿ ಗೆದ್ದಿಲ್ಲ. ಶುಕ್ರವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಯು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು. ಇದನ್ನು ಬೆಂಬತ್ತಿ ಹೊರಟ ಚೆನ್ನೈ ತಂಡವು ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Ad Widget

Ad Widget alt="Ad Widget"/>

Ad Widget

ಬೌಲರ್ ಗಳಿಂದ ನಿರಂತರ ಒತ್ತಡ
ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್ ವುಡ್ ಅವರು ಪ್ರಥಮ ಓವರ್ ನಿಂದಲೇ ಚೆನ್ನೈ ಬ್ಯಾಟರ್ ಗಳ ಮೇಲೆ ಒತ್ತಡ ಹೇರಿದರು. ಎರಡನೇ ಓವರ್ ನಲ್ಲೇ ರಾಹುಲ್ ತ್ರಿಪಾಠಿ ಮತ್ತು ನಾಯಕ ಋತುರಾಜ್ ಗಾಯಕ್ವಾಡ್ ಅವರ ವಿಕೆಟ್ ಕಬಳಿಸಿದ ಜೋಶ್ ಹೇಜಲ್ ವುಡ್ ಅವರು ಚೆನ್ನೈಗೆ ದೊಡ್ಡ ಹೊಡೆತ ನೀಡುತ್ತಾರೆ. ಇಲ್ಲಿಂದ ನಂತರ ಚೆವ್ವೈ ಚೇತರಿಸಿಕೊಳ್ಳುವುದೇ ಇಲ್ಲ. ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ ಅವರು 41 ರನ್ ಗಳಿಸಿದ್ದು ಬಿಟ್ಟರೆ ಬೇರಾರೂ ಆಱ್ ಸಿಬಿ ದಾಳಿಯ ಮುಗ್ಗರಿಸಿದರು. ಅಂತಿಮ ಹಂತದಲ್ಲ ರವೀಂದ್ರ ಜಡೇಜಾ ಮತ್ತು ಮಹೇಂದ್ರ ಸಿಂಗ್ ಧೋನಿ ಅವರು ಕೊನೆಯಲ್ಲಿ ಕೆಲ ದೊಡ್ಡ ಹೊಡೆತಗಳನ್ನು ಹೊಡೆದರೂ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ.

Ad Widget

Ad Widget <> Ad Widget

ಆರ್ ಸಿಬಿ ಪರ ಜೋಶ್ ಹೇಜಲ್ ವುಡ್ 3 ವಿಕೆಟ್ ಎಗರಿಸಿದರು. ಯಶ್ ದಯಾಳ್, ಲಿಯಾಮ್ ಲಿವಿಂಗ್ ಸ್ಟೋನ್ ತಲಾ 2 ವಿಕೆಟ್ ಗಳಿಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಯು ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. ಒಂದು ಕಡೆಯಿಂದ ಕೊಹ್ಲಿ ಅವರು ತಾಳ್ಮೆಯ ಪ್ರತಿರೂಪದಂತೆ ಭಾಸವಾದರೆ ಮತ್ತೊಂದು ತುದಿಯಿಂದ ಫಿಲ್ ಸಾಲ್ಟ್ ಅವರು ಆರಂಭಿಕ ಓವರ್ ಗಳಲ್ಲಿ ರನ್ ಧಾರಣೆ 10ಕ್ಕಿಂತ ಕಡಿಮೆ ಕುಸಿಯದಂತೆ ನೋಡಿಕೊಂಡರು. ಸ್ಪಿನ್ನರ್ ನೂರ್ ಅಗ್ಮದ್ ಎಸೆದ 5ನೇ ಓವರ್ ನ ಕೊನೆಯ ಎಸೆತದಲ್ಲಿ ಎಡವಿದ ಅವರು ಸ್ಟಂಪ್ ಔಟ್ ಆದರು. ಕೇವಲ 16 ಎಸೆತಗಳನ್ನು ಎದುರಿಸಿ ಅವರು 5 ಬೌಂಡರಿ ಮತ್ತು 1 ಸಿಕ್ಸರ್ ಗಳನ್ನು ಒಳಗೊಂಡ 32 ರನ್ ಬಾರಿಸಿದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರ್ನಾಟಕದ ಹುಡುಗ ದೇವದತ್ ದತ್ ಪಡಿಕ್ಕಲ್ ಅವರಂತೂ ಕ್ರೀಸಿನಲ್ಲಿ ಇದ್ದುದು ಸ್ವಲ್ಪ ಹೊತ್ತಾದರೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಎದುರಿಸಿದ 14 ಎಸೆತಗಳಲ್ಲಿ ತಲಾ ಎರಡು ಬೌಂಡರಿ ಮತ್ತು ಸಿಕ್ಸರ್ ಗಳನ್ನು ಒಳಗೊಂಡ 27 ರನ್ ಬಾರಿಸಿದರು.

Ad Widget

Ad Widget

ಪಾಟೀದಾರ್ ನಾಯಕನಾಟ:
ಆ ಬಳಿಕ ಕ್ರೀಸಿಗೆ ಬಂದ ರಜತ್ ಪಾಟೀದಾರ್ ಅವರು ವಿರಾಟ್ ಕೊಹ್ಲಿ ಅವರೊಂದಿಗೆ ಸೇರಿ ಇನ್ನಿಂಗ್ಸ್ ಅನ್ನು ಬೆಳೆಸಿದರು 13ನೇ ಓವರ್ ನಲ್ಲಿ ತಂಡದ ಮೊತ್ತ 117 ಆಗಿದ್ದಾಗ ವಿರಾಟ್ ಕೊಹ್ಲಿ ವಿಕೆಟ್ ಪತನವಾಯಿತು. 30 ಎಸೆತಗಳಲ್ಲಿ ಅವರು 31 ರನ್ ಗಳಿಸಿದರು. ಇನ್ನು ಒಂದು ಬದಿಯಿಂದ ರಜತ್ ಪಾಟೀದಾರ್ ಅರ್ಧ ಶತಕ ಪೂರೈಸಿದರು. 32 ಎಸೆತಗಳನ್ನು ಎದುರಿಸಿದ ಅವರು 4 ಬೌಂಡರಿ ಮತ್ತು 3 ಸಿಕ್ಸರ್ ಗಳಿದ್ದ 51 ರನ್ ಗಳಿಸಿ ಔಟಾದರು. ಆದರೆ ಅಂತಿಮ ಗಂತದಲ್ಲಿ ಚೆನ್ನೈ ಬೌಲರ್ ಗಳು ಪಟಪಟನೆ ವಿಕೆಟ್ ಬೀಳಿಸುವಲ್ಲಿ ಯಶಸ್ವಿಯಾಗಿದ್ದರಿಂದ 200ರ ಗಡಿದಾಟಲು ಸಾಧ್ಯವಾಗಲಿಲ್ಲ. ಚೆನ್ನೈ ಪರ ಸ್ಪಿನ್ನರ್ ನೂರ್ ಅಹ್ಮದ್ ಅವರು 3 ವಿಕೆಟ್ ಕಬಳಿಸಿದರು, ಉಳಿದಂತೆ ಮಥೀಷ ಪಥಿರಣ ಅವರು 2 ವಿಕೆಟ್ ಉರುಳಿಸಿದರು.

ಸಂಕ್ಷಿಪ್ತ ಸ್ಪೋರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 196/7, ರಜತ್ ಪಾಟೀದಾರ್ 51, ಫಿಲ್ ಸಾಲ್ಟ್ 32, ವಿರಾಟ್ ಕೊಹ್ಲಿ 31, ದೇವದತ್ ಪಡಿಕ್ಕಲ್ 27, ನೂರ್ ಅಹ್ಮದ್ 36ಕ್ಕೆ 3, ಮಥೀಶ ಪಥಿರಣ 36ಕ್ಕೆ 2
ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 146/8, ಜೋಶ್ ಹೇಜಲ್ ವುಡ್ 21ಕ್ಕೆ 3, ಯಶ್ ದಯಾಳ್ 18ರಲ್ಲಿ 2, ಲಿವಿಂಗ್ ಸ್ಟೋನ್ 28ಕ್ಕೆ 2, ಭುವನೇಶ್ವರ್ 20ಕ್ಕೆ 1

Ad Widget
Click to comment

Leave a Reply

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಸ್ಥಳೀಯ

Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.

Ad Widget

Ad Widget <> Ad Widget

ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!