ಶಿಕ್ಷಣ
Akshaya College-ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳು, ಸಂಪ್ಯದ ಮುಸ್ಲಿಂ ಬಾಂಧವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.

ಆದರ್ಶ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್, ಇಲ್ಲಿನ ಮಾಲಕರಾದ ಅಬ್ದುಲ್ ರಹಮಾನ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಇದೊಂದು ಉತ್ತಮವಾದ ಕಾರ್ಯಕ್ರಮವನ್ನು ಕಾಲೇಜು ಆಯೋಜಿಸಿದೆ ಹಾಗೂ ಸರ್ವಧರ್ಮ ಸಮನ್ವಯ ಎನ್ನುವ ಶೀರ್ಷಿಕೆಯಡಿ ಏಕತೆಯನ್ನು ಸಾರುವ ಜಯಂತ ನಡುಬೈಲು ಇವರ ಯೋಚನೆಯು ಶ್ಲಾಘನೀಯ ಎಂದರು.
ಅಧ್ಯಕ್ಷರಾದ ಜಯಂತ ನಡುಬೈಲು, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಉಪ ಪ್ರಾಂಶುಪಾಲರಾದ ರಕ್ಷಣಾ ಟಿ ಆರ್, ಕಾಲೇಜು ಸಿಬ್ಬಂದಿ ವರ್ಗ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಂಪ್ಯ ಆಸುಪಾಸಿನ ಸುಮಾರು 100 ಜನ ಈ ಕೂಟದಲ್ಲಿ ಬಾಗವಹಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ29 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















