ಕ್ರೈಂ
Kodagu-ಕೊಡಗು: ಪತ್ನಿಗೆ ಎರಡನೇ ಪತಿ ಜೊತೆ ಸಂಬಂಧ; ಮೂರನೇ ಪತಿಯಿಂದ ನಾಲ್ವರ ಕೊಲೆ; ಕೃತ್ಯ ನಡೆದ 6 ಗಂಟೆ ಒಳಗೆ ಕೇರಳದಲ್ಲಿ ಆರೋಪಿ ಅರೆಸ್ಟ್
ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಅಮಾನುಷ ಕೊಲೆಯ ಹಿನ್ನೆಲೆ ಇದೀಗ ಬಹಿರಂಗಗೊಂಡಿದೆ. ಆರೋಪಿ ಗಿರೀಶ್ ಪತ್ನಿ ನಾಗಿ ತನ್ನ ಎರಡನೇ ಗಂಡನೊಂದಿಗೆ ಮತ್ತೆ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ಸಹಿಸದ ನಾಗಿಯ ಮೂರನೇ ಪತಿ ಗಿರೀಶ್ ಇವರೆಲ್ಲರ ಪಾಲಿಗೆ ಯಮರಾಯನಾಗಿದ್ದಾನೆ. ಇದೀಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಅಮಾನುಷ ಕೊಲೆಯ ಹಿನ್ನೆಲೆ ಇದೀಗ ಬಹಿರಂಗಗೊಂಡಿದೆ. ಆರೋಪಿ ಗಿರೀಶ್ ಪತ್ನಿ ನಾಗಿ ತನ್ನ ಎರಡನೇ ಗಂಡನೊಂದಿಗೆ ಮತ್ತೆ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ಸಹಿಸದ ನಾಗಿಯ ಮೂರನೇ ಪತಿ ಗಿರೀಶ್ ಇವರೆಲ್ಲರ ಪಾಲಿಗೆ ಯಮರಾಯನಾಗಿದ್ದಾನೆ. ಇದೀಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಪರಾರಿ ಆಗಿದ್ದ ಆರೋಪಿ ಗಿರೀಶ್ ನನ್ನು ವಿಶೇಷ ತನಿಖಾ ತಂಡ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿ ಆಗಿದೆ.
ಘಟನೆಯ ಹಿನ್ನೆಲೆ:
ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿನ ಒಂಟಿ ಮನೆಯಲ್ಲಿ ನಾಲ್ವರ ಕೊಲೆ ಆಗಿರುವುದಾಗಿ ಮಾ.28ರಂದು ಮಧ್ಯಾಹ್ನ 1.30 ಗಂಟೆಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ವಿರಾಜಪೇಟೆ ಉಪವಿಭಾಗದ ಡಿಎಸ್ಪಿ ರವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆಗಿಳಿಯಲಾಗಿತ್ತು.
ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿನ ಒಂಟಿ ಮನೆಯಲ್ಲಿ ನಾಗಿ (38), ಕು. ಕಾವೇರಿ (7) ಮತ್ತು 70 ವರ್ಷ ಮೇಲ್ಪಟ್ಟ ವಯಸ್ಸಿನ ಕರಿಯ ಮತ್ತು ಗೌರಿ ಹಾಗೂ ಕೊಲೆ ಆರೋಪಿ ಗಿರೀಶ್ ವಾಸವಾಗಿದ್ದರು. ಇವರ ಪೈಕಿ ಗಿರೀಶನು ನಾಗಿಯ ಮೂರನೇ ಗಂಡನಾಗಿದ್ದು ಒಂದು ವರ್ಷದಿಂದ ಒಟ್ಟಿಗೆ ನೆಲೆಸಿದ್ದರು. ನಾಗಿ ತನ್ನ ಎರಡನೇ ಪತಿಯೊಂದಿಗೆ ಮತ್ತೆ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಸಂಶಯದಿಂದ ಆರೋಪಿ ಗಿರೀಶ್ ಮಾ.27ರ ರಾತ್ರಿ ವೇಳೆಯಲ್ಲಿ ನಾಗಿ, ಕು. ಕಾವೇರಿ, ಕರಿಯ ಮತ್ತು ಗೌರಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ.
ಕೃತ್ಯ ನಡೆದ 6 ಗಂಟೆಯ ಒಳಗಾಗಿ ಕೇರಳದ ತಲಪುಳ ಎಂಬಲ್ಲಿ ವಿಶೇಷ ತನಿಖಾ ತಂಡ ಆರೋಪಿ ಗಿರೀಶನನ್ನು ಬಂಧಿಸಿದ್ದು ಕಾನೂನು ಕ್ರಮ ಜರುಗಿಸಲಾಗಿದೆ.
ಎಸ್ಪಿಯಿಂದ ಶ್ಲಾಘನೆ
ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ಕೆ. ರಾಮರಾಜಾನ್ ಅವರು ಶ್ಲಾಘಿಸಿದ್ದಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್24 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















