ಆರೋಗ್ಯ
Banana flower-ಮಧುಮೇಹ ಹಾಗೂ ಹೃದಯ ರೋಗಕ್ಕೆ ರಾಮಬಾಣ ಬಾಳೆಹೂವು
ಮಧುಮೇಹ ಎಂಬುದು ಇಂದಿನ ಜೀವನಶೈಲಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ರಕ್ತದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾದಾಗ ದೇಹದ ಪ್ರಮುಖ ಅಂಗಗಳಾದ ಹೃದಯ, ಕಣ್ಣುಗಳು ಮತ್ತು ಮೂತ್ರಪಿಂಡಗಳು ಹಾನಿಗೊಳಗಾಗುವ ಸಾಧ್ಯತೆ ಇರುತ್ತದೆ. ಪ್ರಕೃತಿಯಲ್ಲಿ ದೊರೆಯುವ ಬಾಳೆ ಹೂವು ಮಧುಮೇಹಿಗಳಿಗೆ ಒಂದು ವರದಾನವಾಗಿ ಮಾರ್ಪಟ್ಟಿದೆ.
ಮಧುಮೇಹ ಎಂಬುದು ಇಂದಿನ ಜೀವನಶೈಲಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ರಕ್ತದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾದಾಗ ದೇಹದ ಪ್ರಮುಖ ಅಂಗಗಳಾದ ಹೃದಯ, ಕಣ್ಣುಗಳು ಮತ್ತು ಮೂತ್ರಪಿಂಡಗಳು ಹಾನಿಗೊಳಗಾಗುವ ಸಾಧ್ಯತೆ ಇರುತ್ತದೆ. ಆದರೆ, ಸರಿಯಾದ ಆಹಾರ ಪದ್ಧತಿಯ ಮೂಲಕ ಈ ಕಾಯಿಲೆಯನ್ನು ನಿಯಂತ್ರಿಸಬಹುದು ಎಂಬುದು ತಜ್ಞರ ಅಭಿಪ್ರಾಯ. ಈ ನಿಟ್ಟಿನಲ್ಲಿ ಪ್ರಕೃತಿಯಲ್ಲಿ ದೊರೆಯುವ ಬಾಳೆ ಹೂವು ಮಧುಮೇಹಿಗಳಿಗೆ ಒಂದು ವರದಾನವಾಗಿ ಮಾರ್ಪಟ್ಟಿದೆ.
ಬಾಳೆ ಹೂವಿನ ವಿಶೇಷತೆ
ಬಾಳೆ ಗಿಡದ ಪ್ರತಿಯೊಂದು ಭಾಗವೂ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಆಯುರ್ವೇದದಲ್ಲಿ ಹೇಳಲಾಗುತ್ತದೆ. ಬಾಳೆ ಹಣ್ಣು, ಎಲೆ, ದಿಂಡು ಮತ್ತು ಹೂವು – ಎಲ್ಲವೂ ತಮ್ಮದೇ ಆದ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಮಧುಮೇಹ ನಿಯಂತ್ರಣಕ್ಕೆ ಬಾಳೆ ಹೂವು ವಿಶೇಷವಾಗಿ ಪರಿಣಾಮಕಾರಿ ಎಂದು ಸಂಶೋಧನೆಗಳು ತೋರಿಸಿವೆ. ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ವಿವಿಧ ರೀತಿಯ ಖಾದ್ಯಗಳನ್ನಾಗಿ ತಯಾರಿಸಿ ಸೇವಿಸಬಹುದು.
ಸಂಶೋಧನೆ ಏನು ಹೇಳುತ್ತದೆ?
2011ರಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಬಾಳೆ ಹೂವಿನ ಪರಿಣಾಮವನ್ನು ಇಲಿಗಳ ಮೇಲೆ ಪರೀಕ್ಷಿಸಲಾಗಿತ್ತು. ಈ ಇಲಿಗಳ ರಕ್ತ ಮತ್ತು ಮೂತ್ರದಲ್ಲಿ ಸಕ್ಕರೆಯ ಮಟ್ಟ ತುಂಬಾ ಹೆಚ್ಚಾಗಿತ್ತು. ಬಾಳೆ ಹೂವನ್ನು ಸೇವಿಸಿದ ನಂತರ ಇವುಗಳ ರಕ್ತದ ಸಕ್ಕರೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಯಿತು. ಇದರ ಜೊತೆಗೆ, ದೇಹದಲ್ಲಿ ಸಕ್ಕರೆಯನ್ನು ಉತ್ತೇಜಿಸುವ ಕೆಲವು ಪ್ರೋಟೀನ್ಗಳ ರಚನೆಯನ್ನು ಇದು ತಗ್ಗಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.
ಮಧುಮೇಹಕ್ಕೆ ರಾಮಬಾಣ
ಪ್ರಪಂಚದಲ್ಲಿ ಟೈಪ್ 2 ಮಧುಮೇಹದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇದು ಸಾಮಾನ್ಯವಾಗಿ ಜಡ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರದಿಂದ ಉಂಟಾಗುತ್ತದೆ. ಬಾಳೆ ಹೂವು ಈ ರೋಗಿಗಳಿಗೆ ಒಂದು ಸಹಜ ಔಷಧಿಯಾಗಿ ಕೆಲಸ ಮಾಡುತ್ತದೆ. ಇದು ರಕ್ತದ ಸಕ್ಕರೆಯನ್ನು ಕಡಿಮೆ ಮಾಡುವುದರ ಜೊತೆಗೆ ತೂಕ ನಷ್ಟ, ಕೊಲೆಸ್ಟ್ರಾಲ್ ತಗ್ಗಿಸುವಿಕೆ ಮತ್ತು ಒಟ್ಟಾರೆ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ.
ಇತರ ಆರೋಗ್ಯ ಪ್ರಯೋಜನಗಳು
ರಕ್ತ ಹೆಚ್ಚಿಸುತ್ತದೆ: ಬಾಳೆ ಹೂವಿನಲ್ಲಿ ಕಬ್ಬಿಣಾಂಶ ಹೇರಳವಾಗಿದ್ದು, ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.
ಇನ್ಸುಲಿನ್ ನಿಯಂತ್ರಣ: ಇದು ಇನ್ಸುಲಿನ್ ಸಮತೋಲನಕ್ಕೆ ಸಹಕಾರಿಯಾಗಿದೆ.
ಒತ್ತಡ ನಿವಾರಣೆ: ಮೆಗ್ನೀಸಿಯಮ್ನಿಂದ ಸಮೃದ್ಧವಾಗಿರುವ ಈ ಹೂವು ಖಿನ್ನತೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.
ಹೃದಯ ಆರೋಗ್ಯ: ಫ್ರೀ ರಾಡಿಕಲ್ಗಳಿಂದ ದೇಹವನ್ನು ರಕ್ಷಿಸಿ, ಕೊಲೆಸ್ಟ್ರಾಲ್ ತಗ್ಗಿಸುವ ಮೂಲಕ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ.
ಸೇವಿಸುವ ವಿಧಾನ:
ಬಾಳೆ ಹೂವನ್ನು ಹಸಿಯಾಗಿ ಸೇವಿಸಬಹುದು ಏಕೆಂದರೆ ಇದು ಮೃದು ಮತ್ತು ಜೀರ್ಣಕ್ಕೆ ಸುಲಭವಾಗಿದೆ. ಇದರ ಜೊತೆಗೆ, ಇದನ್ನು ವಿವಿಧ ರೀತಿಯಲ್ಲಿ ಆಹಾರದಲ್ಲಿ ಬಳಸಬಹುದು.
* ಒಣಗಿಸಿ ಅಥವಾ ಗ್ರೇವಿಯೊಂದಿಗೆ ರುಚಿಕರವಾಗಿ ತಯಾರಿಸಬಹುದು.
* ತಾಜಾ ಬಾಳೆ ಹೂವನ್ನು ಸಲಾಡ್ ರೂಪದಲ್ಲಿ ತಿನ್ನಬಹುದು.
* ಅರೆದು ಸಾಸ್ ತಯಾರಿಸಿ ಆಹಾರದ ಜೊತೆ ಸೇವಿಸಬಹುದು.
* ಬಾಳೆ ಹೂವಿನ ಬಜ್ಜಿ ಮಾಡಿ ಆನಂದಿಸಬಹುದು.
ಮಧುಮೇಹವನ್ನು ನಿಯಂತ್ರಿಸಲು ಔಷಧಿಗಳ ಜೊತೆಗೆ ಪ್ರಕೃತಿಯ ಈ ಸರಳ ಉಡುಗೊರೆಯನ್ನು ಬಳಸಿಕೊಳ್ಳುವುದು ಆರೋಗ್ಯಕರ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಬಾಳೆ ಹೂವು ಕೇವಲ ರುಚಿಕರವಲ್ಲ, ಪೌಷ್ಟಿಕವೂ ಆಗಿದೆ. ಆದ್ದರಿಂದ, ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಇದನ್ನು ಸೇರಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಸ್ಥಳೀಯ3 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್2 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ4 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ3 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















