ಬಿಗ್ ನ್ಯೂಸ್
Bengaluru-ಭಾರತದ ‘ಪಬ್ ಸಿಟಿ’ಯಾದ ಬೆಂಗಳೂರು : ಪಬ್ ಸಂಖ್ಯೆ 5 ವರ್ಷಗಳಲ್ಲಿ 756 ಕ್ಕೆ ಏರಿಕೆ..! ಸ್ಥಳೀಯರಿಂದ ಹೈಕೋರ್ಟ್ ಮೊರೆ
ಒಂದು ಕಾಲದಲ್ಲಿ ಉದ್ಯಾನ ನಗರಿಯೆಂದು ಹೆಸರಾಗಿದ್ದ ಬೆಂಗಳೂರು, ಈ ಶತಮಾನದ ಆರಂಭದಲ್ಲಿ ಸಿಲಿಕಾನ್ ಸಿಟಿಯಾಗಿ, ಬಳಿಕ ಸ್ಟಾರ್ಟ್‌ಅಪ್‌ಗಳ ತವರೂ ಆಯಿತು. ಕೆಲವರು ಇದನ್ನು ಭಾರತದ “ಪೋಸ್ಟರ್ ಬಾಯ್ ಸಿಟಿ” ಎಂದು ಬಣ್ಣಿಸಿದರೆ, ಮತ್ತೆ ಕೆಲವರು ಕಸದ ರಾಶಿಗಳಿಂದ “ಗಾರ್ಬೇಜ್ ಸಿಟಿ” ಎಂದು ಕರೆದರು. ಆದರೆ ಈಗ ಬೆಂಗಳೂರಿಗೆ ಹೊಸ ಗುರುತು ಸಿಕ್ಕಿದೆ – “ಪಬ್ ಸಿಟಿ”. ಹೌದು, ಭಾರತದ ಪಬ್ ರಾಜಧಾನಿ ಎಂದರೆ ಅದು ಇಂದು ಬೆಂಗಳೂರೇ ಎಂಬುದು ಎಲ್ಲರ ಮಾತಾಗಿದೆ.
ಒಂದು ಕಾಲದಲ್ಲಿ ಉದ್ಯಾನ ನಗರಿಯೆಂದು ಹೆಸರಾಗಿದ್ದ ಬೆಂಗಳೂರು, ಈ ಶತಮಾನದ ಆರಂಭದಲ್ಲಿ ಸಿಲಿಕಾನ್ ಸಿಟಿಯಾಗಿ, ಬಳಿಕ ಸ್ಟಾರ್ಟ್‌ಅಪ್‌ಗಳ ತವರೂ ಆಯಿತು. ಕೆಲವರು ಇದನ್ನು ಭಾರತದ “ಪೋಸ್ಟರ್ ಬಾಯ್ ಸಿಟಿ” ಎಂದು ಬಣ್ಣಿಸಿದರೆ, ಮತ್ತೆ ಕೆಲವರು ಕಸದ ರಾಶಿಗಳಿಂದ “ಗಾರ್ಬೇಜ್ ಸಿಟಿ” ಎಂದು ಕರೆದರು. ಆದರೆ ಈಗ ಬೆಂಗಳೂರಿಗೆ ಹೊಸ ಗುರುತು ಸಿಕ್ಕಿದೆ – “ಪಬ್ ಸಿಟಿ”. ಹೌದು, ಭಾರತದ ಪಬ್ ರಾಜಧಾನಿ ಎಂದರೆ ಅದು ಇಂದು ಬೆಂಗಳೂರೇ ಎಂಬುದು ಎಲ್ಲರ ಮಾತಾಗಿದೆ.
ಸ್ನೇಹಿತ-ಸಂಗಾತಿಗಳ ಸಮೇತರಾಗಿ ತನ್ನಲ್ಲಿಗೆ ಬರುವ ಗ್ರಾಹಕರಿಗೆ ತಡರಾತ್ರಿವರೆಗೆ ಊಟ-ಬಿಯರ್ ಅನ್ನು ಸುಖಕರ ವಾತಾವರಣದಲ್ಲಿ ಒದಗಿಸುವ ತಾಣವೇ ಪಬ್. ಮಾಹಿತಿ ತಂತ್ರಜ್ಞಾನ ಉದ್ಯಮಕ್ಕೆ ಹೆಸರಾದ ನಗರದಲ್ಲಿ ದಿನೇ ದಿನೇ ವಿಸ್ತಾರಗೊಳ್ಳುತ್ತಿರುವ ವೀಕೆಂಡ್ ಸಂಸ್ಕೃತಿಯಿಂದ ಯುವಜನತೆಯ ಮೋಜು-ಮಸ್ತಿ ಹೆಚ್ಚಾಗಿದೆ. ಹೀಗಾಗಿ, ಪಬ್‌ಗಳ ಸಂಖ್ಯೆಯೂ ಏರುತ್ತಿದೆ. ಕಳೆದ 5 ವರ್ಷಗಳಲ್ಲಿ ನಗರದಲ್ಲಿನ ಪಬ್‌ಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ.
ಸದ್ಯ ಇಡೀ ರಾಜ್ಯದಲ್ಲಿ 923 ಪಬ್‌ಗಳಿವೆ. ಈ ಪೈಕಿ ಬೆಂಗಳೂರಿನಲ್ಲೇ 756 ಪಬ್‌ಗಳು ಬೀಡುಬಿಟ್ಟಿವೆ. ಆ ಪೈಕಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಬ್‌ಗಳು ಕೇವಲ 57 ಅಷ್ಟೆ. ಉಳಿದವು ಹಾಲಿ ಸನ್ನದುಗಳಿಗೆ ಹೊಂದಿಕೊಂಡಂತೆ ಕಾರ್ಯ ನಿರ್ವಹಿಸುತ್ತಿವೆ.
ಬೆಂಗಳೂರು ನಗರ ಜಿಲ್ಲೆಯನ್ನು ಆಡಳಿತಾತ್ಮಕ ಅನುಕೂಲಕ್ಕಾಗಿ ಅಬಕಾರಿ ಇಲಾಖೆ 8 ಜಿಲ್ಲೆಗಳನ್ನಾಗಿ ವಿಭಜಿಸಿದ್ದು, ಅದರಲ್ಲಿ 756 ಪಬ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಸಾಫ್ಟ್‌ವೇರ್ ಕಂಪನಿಗಳು ಹೆಚ್ಚಿರುವ ಕೋರಮಂಗಲ(ಬೆಂಗಳೂರು ನಗರ ಜಿಲ್ಲೆ-7) ಮತ್ತು ಇಂದಿರಾನಗರದಲ್ಲಿ(ಬೆಂಗಳೂರು ನಗರ ಜಿಲ್ಲೆ-5) 120 ಪಬ್‌ಗಳು ತಲೆ ಎತ್ತಿವೆ. ಬೆಂಗಳೂರು ಹೊರವಲಯದಲ್ಲೂ 38 ಪಬ್‌ಗಳಿವೆ.
ಬಜೆಟ್ ಅಧಿವೇಶನದ ವೇಳೆ ವಿಧಾನಪರಿಷತ್ ಸದಸ್ಯ ಎಚ್.ಎಸ್.ಗೋಪಿನಾಥ್ ಕೇಳಿದ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹಂಚಿಕೊಂಡಿರುವ ಮಾಹಿತಿಯಲ್ಲಿ ಬೆಂಗಳೂರು ನಗರದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪಬ್‌ಗಳ ಅಂಕಿ-ಸಂಖ್ಯೆಯ ಮಾಹಿತಿ ನೀಡಲಾಗಿದೆ.
”ಸದ್ಯ ಪಬ್‌ಗಳಿಗೆ ಹಾಗೂ ಸಿಎಲ್-7ಗಳಿಗೆ (ಹೋಟೆಲ್, ಬೋರ್ಡಿಂಗ್ ಮತ್ತು ಹೌಸಸ್) ಮಾತ್ರ ಸನ್ನದುಗಳನ್ನು ನೀಡಲಾಗುತ್ತಿದೆ. ಹಾಗಾಗಿ ಎರಡೂ ಪರವಾನಗಿಗಳಿಗೆ ಬೆಂಗಳೂರಲ್ಲಿ ಭಾರಿ ಬೇಡಿಕೆ ಇದೆ. ಐದಾರು ವರ್ಷಗಳ ಹಿಂದೆ 200 ರಷ್ಟಿದ್ದ ಪಬ್‌ಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿವೆ” ಎನ್ನುತ್ತಾರೆ ಮದ್ಯದ ವ್ಯಾಪಾರಿಗಳು.
ಅನಧಿಕೃತ ಪಬ್ ಇಲಾಖೆ ಗಮನಕ್ಕೆ ಬಂದಿಲ್ಲ:
ಪಬ್ ಸನ್ನದು ಪಡೆಯದೆ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಅಬಕಾರಿ ಇಲಾಖೆ ಗಮನಕ್ಕೆ ಬಂದಿಲ್ಲ. ಒಂದೊಮ್ಮೆ ಪರವಾನಗಿ ಪಡೆಯದೆ ಪಬ್‌ಗಳು ಕಾರ್ಯ ನಿರ್ವಹಿಸುತ್ತಿದ್ದಲ್ಲಿ ಅಂತಹ ಅನಧಿಕೃತ ಪಬ್‌ಗಳ ವಿರುದ್ಧ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 15ರಂತೆ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಸ್ಥಳೀಯರಿಂದ ಹೈಕೋರ್ಟ್ ಮೊರೆ:
ಅಬಕಾರಿ ಇಲಾಖೆಯು ಪಬ್‌ಗಳಲ್ಲಿ ವ್ಯಾಪಾರ ವಹಿವಾಟಿನ ಸಮಯವನ್ನು ಬೆಳಿಗ್ಗೆ 10ರಿಂದ ರಾತ್ರಿ 11.30ರವರೆಗೆ ನಿಗದಿಪಡಿಸಿದೆ. ಆದರೆ, ಬಹುತೇಕ ಪಬ್‌ಗಳು ಮಧ್ಯರಾತ್ರಿ 1 ಗಂಟೆವರೆಗೂ ತೆರೆದಿರುತ್ತವೆ. ಸ್ಥಳೀಯ ಪೊಲೀಸರ ನೆರಳಿನಲ್ಲೇ ಬಹುತೇಕ ಪಬ್‌ಗಳು ಅವಧಿ ಮೀರಿ ಕಾರ್ಯ ನಿರ್ವಹಿಸುತ್ತವೆ. ಅಬಕಾರಿ ಇಲಾಖೆ ಮಾಹಿತಿಯಂತೆ ಕಳೆದ ಮೂರು ವರ್ಷಗಳಲ್ಲಿಅವಧಿ ಮೀರಿ ಕಾರ್ಯನಿರ್ವಹಿಸಿದ ಒಟ್ಟು 11 ಸನ್ನದುದಾರರ ವಿರುದ್ಧ ಷರತ್ತು ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ.
ಪಬ್ ಸಂಸ್ಕೃತಿ ಜಾಸ್ತಿಯಾಗಿರುವುದರಿಂದ ವಸತಿ ಪ್ರದೇಶಗಳಲ್ಲಿ ಪಾರ್ಕಿಂಗ್, ಶಬ್ದಮಾಲಿನ್ಯ ಹೆಚ್ಚಾಗುತ್ತಿದೆ. ಪಬ್‌ಗಳಿಂದ ನಗರದಲ್ಲಿ ಕಾನೂನು ವ್ಯವಸ್ಥೆಗೆ ತೊಂದರೆಯಾಗಿಲ್ಲ. ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುವ ಪಬ್‌ಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ವಾಸ್ತವವಾಗಿ ಪಬ್‌ಗಳ ಸುತ್ತಮುತ್ತಲ ನಿವಾಸಿಗಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.
ಇಂದಿರಾನಗರದಲ್ಲಿ ಅತಿ ಹೆಚ್ಚಿನ ಪಬ್‌ಗಳಿದ್ದು, ಅಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಶಬ್ದಮಾಲಿನ್ಯದಿಂದ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಹೈಕೋರ್ಟ್ ಮೊರೆ ಹೋಗಿದ್ದರು. ಆನಂತರ ಹೈಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದ ಬಳಿಕ ಅಲ್ಲಿ ಪರಿಸ್ಥಿತಿ ಸುಧಾರಿಸಿದೆ. ಆದರೆ ಪ್ರಕರಣ ಹೈಕೋರ್ಟ್‌ನಲ್ಲಿ ಇನ್ನೂ ಬಾಕಿ ಇದೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು20 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ19 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು20 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ14 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ19 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized21 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು14 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















