Connect with us

ರಾಜಕೀಯ

Janakrosh Yatra-ಬೆಲೆ ಏರಿಕೆ, ಮುಸ್ಲಿಂ ಓಲೈಕೆ ನೀತಿ ಖಂಡಿಸಿ ಬಿಜೆಪಿ ‘ಜನಾಕ್ರೋಶ ಯಾತ್ರೆ’ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಣೆ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಮತ್ತೊಂದು ರಾಜಕೀಯ ಹೋರಾಟಕ್ಕೆ ಚಾಲನೆ ನೀಡಲು ಬಿಜೆಪಿ ನಿರ್ಧರಿಸಿದ್ದು ನಿರಂತರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ನೀತಿಯನ್ನು ಖಂಡಿಸಿ ಎ. 7ರಂದು ‘ಜನಾಕ್ರೋಶ ಯಾತ್ರೆ’ ನಡೆಸಲಿದೆ. ಆದರೆ ಈ ಬಾರಿ ಮೈತ್ರಿ ಪಕ್ಷ ಜೆಡಿಎಸ್ ಅನ್ನು ಹೊರಗಿಟ್ಟೇ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಏಕಾಂಗಿ ಹೋರಾಟ ರೂಪಿಸಿರುವುದು ಕುತೂಹಲಕ್ಕೆಡೆ ಮಾಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಮಾ.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಮತ್ತೊಂದು ರಾಜಕೀಯ ಹೋರಾಟಕ್ಕೆ ಚಾಲನೆ ನೀಡಲು ಬಿಜೆಪಿ ನಿರ್ಧರಿಸಿದ್ದು ನಿರಂತರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ನೀತಿಯನ್ನು ಖಂಡಿಸಿ ಎ. 7ರಂದು ‘ಜನಾಕ್ರೋಶ ಯಾತ್ರೆ’ ನಡೆಸಲಿದೆ. ಆದರೆ ಈ ಬಾರಿ ಮೈತ್ರಿ ಪಕ್ಷ ಜೆಡಿಎಸ್ ಅನ್ನು ಹೊರಗಿಟ್ಟೇ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಏಕಾಂಗಿ ಹೋರಾಟ ರೂಪಿಸಿರುವುದು ಕುತೂಹಲಕ್ಕೆಡೆ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. 2 ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ಮಾಡುತ್ತಿದ್ದು ಜನರ ಬದುಕನ್ನು ಆಸಹನೀಯವಾಗಿಸಿದೆ.

Ad Widget

Ad Widget <> Ad Widget

ಉಸಿರಾಡುವ ಗಾಳಿಯೊಂದನ್ನು ಹೊರತುಪಡಿಸಿ ಬಹುತೇಕ ಎಲ್ಲ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಬಜೆಟ್‌ನಲ್ಲಂತೂ ಮುಸ್ಲಿಂ ಓಲೈಕೆ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಜನರ ಭಾವನೆಗಳಿಗೆ ಸ್ಪಂದಿಸಿರುವ ಬಿಜೆಪಿ ರಾಜ್ಯವ್ಯಾಪಿ 4 ಹಂತದಲ್ಲಿ ಜನಾಕ್ರೋಶ ಯಾತ್ರೆ ಎಂದರು.



Ad Widget

ಎ. 7ರಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರಾದ ವಿ. ಸೋಮಣ್ಣ ಶೋಭಾ ಕರಂದ್ಲಾಜೆ ಆಮಗೂ ಆಹ್ವಾನ ನೀಡಿದ್ದೇವೆ. ಉದ್ಘಾಟನೆಯ ದಿನ ಮೈಸೂರು ಹಾಗೂ ಚಾಮರಾಜನಗರದಲ್ಲಿ ಹೋರಾಟ ನಡೆಯುತ್ತದೆ. ರಾಜ್ಯ ಸರಕಾರದ ದಬ್ಬಾಳಿಕೆ ನೀತಿಯ ವಿರುದ್ಧ ಗಂಭೀರ ಹೋರಾಟ ನಡೆಸುತ್ತೇವೆ. ಸರಕಾರ ಬೆಲೆ ಏರಿಕೆಯನ್ನು ಕಡಿಮೆ ಮಾಡಲೇಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಎ. ಕರಂದು ಮಂಡ್ಯ, ಹಾಸನ ಎ. 9ರಂದು ಕೊಡಗು, ಮಂಗಳೂರು, ಎ 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ನಡೆಯುತ್ತದೆ. ಎ. 13ರಂದು ಎರಡನೇ ಹಂತದಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ಎ 16ರಂದು ಬೀದ‌ರ್ ನಲ್ಲಿ ಎರಡನೇ ಹಂತದ ಹೋರಾಟ ನಡೆಯುತ್ತದೆ. ಒಟ್ಟು ನಾಲ್ಕುಹುತದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ನಗರ ಪ್ರದೇಶದಲ್ಲಿ ಸರಾಸರಿ 2-3 ಕಿ.ಮೀ. ಪಾದಯಾತ್ರೆ ಹಾಗೂ ಬಹಿರಂಗ ಸಭೆ ನಡೆಯುತ್ತದೆ. ನಾನು ಸೇರಿದಂತೆ ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವ ವಹಿಸಲಿದ್ದೇವೆ. ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಾಯಕರು ಭಾಗವಹಿಸುತ್ತಾರೆ. ಇದು ಜನರಿಗಾಗಿ ನಡೆಸುವ ಎಲ್ಲರ ಹೋರಾಟ ಎಂದು ಸಪ್ತಪಡಿಸಿದರು.

ಅಹೋರಾತ್ರಿ ಧರಣಿ
ಅದೇ ರೀತಿ ರಾಜ್ಯ ಸರಕಾರದ ಬೆಲೆ ಏರಿಕೆ ನೀತಿ ಹಾಗೂ ಮುಸ್ಲಿಂ ಓಲೈಕೆ ಖಂಡಿಸಿ ಎ 2ರಂದು ಬೆಂಗಳೂರಿನ ಫೀಡು ಪಾರ್ಕನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಮುಖಂಡರು ಈ ಹೋರಾಟದಲ್ಲಿ ಭಾಗಿಯಾಗುತ್ತಾರೆ. ರಾಜ್ಯ ಸರಕಾರದ ವಿರುದ್ಧನಿರಂತರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ವಿಪಕ್ಷನಾಯಕ ಆರ್. ಅಶೋಕ್ ಗೈರು
ಎಲ್ಲ ಸಮುದಾಯದ ನಾಯಕರನ್ನು ಜತೆಗಿಟ್ಟುಕೊಂಡು ರಾಜ್ಯಾಧ್ಯಕ್ಷವಿಜಯೇಂದ್ರ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಯಾಗುತ್ತಿದೆ, ಎಲ್ಲರೂ ಒಟ್ಟಿಗೆ ಇದ್ದೇವೆ ಮಾಜಿ ಸಚಿವ ಬಿ. ಶ್ರೀರಾಮುಲು, ಬೈರತಿ ಬಸವರಾಜು, ಮುನಿರತ್ನ ಕೃಷ್ಣಪ್ಪ ಎಸ್.ಆರ್. ವಿಶ್ವನಾಥ್,ಎನ್.ರವಿಕುಮಾರ್, ಛಲಬಾವಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಿ.ಎಸ್. ನಡಹಳ್ಳಿ, ಸಿ.ಕೆ.ರಾಮಮೂರ್ತಿ, ಅಶ್ವತ್ಥ ನಾರಾಯಣ ಗೌಡ ಮೊದಲಾದವರು ಈ ಪತ್ರಿಕಾಗೋಷ್ಠಿಯಲ್ಲಿದ್ದರು. ಆದರೆ ವಿಪಕ್ಷನಾಯಕ ಆರ್. ಅಶೋಕ್ ಗೈರಾಗಿದ್ದು ಮಾತ್ರ ಕುತೂಹಲಕ್ಕೆ ಕಾರಣವಾಗಿತ್ತು.

ಜನಾಕ್ರೋಶ ಯಾತ್ರೆ ಬಿಜೆಪಿಯಿಂದ ನಡೆಯುವ ಹೋರಾಟ. ಪಕ್ಷದ ವೇದಿಕೆಯಲ್ಲಿ ನಡೆಸಲಾಗುತ್ತದೆ. ಮೈತ್ರಿ ಇದ್ದರೂ ನಾವು ಪ್ರತ್ಯೇಕ ಹೋರಾಟ ನಡೆಸಬಹುದು. ಗ್ರೇಟರ್ ಬೆಂಗಳೂರು ವಿಷಯದಲ್ಲಿ ಜೆಡಿಎಸ್ ಕೂಡ ಪ್ರತ್ಯೇಕ ಹೋರಾಟ ನಡೆಸಿತ್ತು. – ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading